ಮಹತ್ವದ ಬೆಳವಣಿಗೆ: ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಬಂಧನ
Team Udayavani, Mar 8, 2020, 7:52 AM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ರಾಣಾ ಕಪೂರ್ ಅವರನ್ನು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಬಂಧಿಸಲಾಗಿದೆ. ಮಾತ್ರವಲ್ಲದೆ ತನಿಖೆಗೆ ಕಪೂರ್ ಸಹಕರಿಸುತ್ತಿಲ್ಲ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈಗಾಗಲೇ ನಷ್ಟದಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಶನ್ (ಡಿಎಚ್ ಎಫ್ ಎಲ್) ಜೊತೆ ಯೆಸ್ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ಇಡಿ ಶನಿವಾರ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು, ಇಂದು ಬೆಳಗಿನ ಜಾವ ಅವರನ್ನು ಬಂಧಿಸಿ ತನ್ನ ಕಚೇರಿಗೆ ಕರೆದೊಯ್ಯಲಾಗಿದೆ. ಇಡಿ ಕಚೇರಿಯಲ್ಲಿ ರಾಣಾ ಕಪೂರ್ ಅವರ ಹೆಚ್ಚಿನ ವಿಚಾರಣೆ ನಡೆಯಲಿದೆ. ಮಾತ್ರವಲ್ಲದೆ ಇಂದೇ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇದಕ್ಕೂ ಮೊದಲು ಮುಂಬೈನ ಸಮುದ್ರ ಮಹಲ್ ನಲ್ಲಿರುವ ರಾಣಾ ಕಪೂರ್ ನಿವಾಸಕ್ಕೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಹೊರಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!