ಉತ್ತರ ಪ್ರದೇಶ ಸಿಎಂ ಯೋಗಿ ಆಗ್ತಾರೆ ಎಂಎಲ್ಸಿ
Team Udayavani, Aug 31, 2017, 7:50 AM IST
ಹೊಸದಿಲ್ಲಿ/ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಶಾಸಕರಾಗುವುದಿಲ್ಲ. ಅದರ ಬದಲಾಗಿ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ.
ಸೆ.15ರಂದು ಈ ಚುನಾವಣೆ ನಡೆಯಲಿದೆ. ಅವರ ಜತೆಗೆ ಡಿಸಿಎಂಗಳಾದ ಕೇಶವ ಪ್ರಸಾದ್ ಮೌರ್ಯ, ದಿನೇಶ್ ಶರ್ಮಾ, ಸಚಿವರಾದ ಸ್ವತಂತ್ರ ದೇವ್ ಸಿಂಗ್ ಮತ್ತು ಮೊಹ್ಸಿàನ್ ರಾಜಾ ಕೂಡ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಹೆಚ್ಚಿದೆ. ಹೀಗಾಗಿ, ಐವರು ಬಿಜೆಪಿ ನಾಯಕರು ಅನಾಯಾಸವಾಗಿ ಮೇಲ್ಮನೆಗೆ ಆಯ್ಕೆಯಾಗಲಿ ದ್ದಾರೆ. ಇದಕ್ಕಾಗಿಯೇ ವಿಪಕ್ಷಗಳ ಸದಸ್ಯರು ರಾಜೀನಾಮೆ ನೀಡಿರುವು ದರಿಂದ ಐದು ಸ್ಥಾನಗಳು ಖಾಲಿ ಉಳಿದಿವೆ.
ಸಮಾಜವಾದಿ ಪಕ್ಷದ ಒಬ್ಬರು ಮತ್ತು ಬಿಎಸ್ಪಿಯ ನಾಲ್ವರು ಎಂಎಲ್ಸಿಗಳು ತ್ಯಾಗಪತ್ರ ಸಲ್ಲಿಸಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಸುಗಮವಾಗಿ ಆಯ್ಕೆಯಾಗುವುದಕ್ಕೆ ಬಿಜೆಪಿಯೇ ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡುವಂತೆ ಮಾಡಿದೆ ಎಂದು ಎರಡೂ ಪಕ್ಷಗಳ ನಾಯಕರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್