ಸೆಪ್ಟೆಂಬರ್ ವರೆಗೂ ಅವಧಿ ಮೀರಿದ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬಳಸಬಹುದು!

Team Udayavani, Jul 1, 2021, 8:29 AM IST

ಸೆಪ್ಟೆಂಬರ್ ವರೆಗೂ ಅವಧಿ ಮೀರಿದ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬಳಸಬಹುದು!

ಹೊಸದಿಲ್ಲಿ: ಕೋವಿಡ್ -19 ಸೋಂಕಿನ ಕಾರಣದಿಂದ ನಿಮ್ಮ ಡ್ರೈವಿಂಗ್ ಲೈಸನ್ಸ್, ಆರ್ ಸಿ ನವೀಕರಣ ಮಾಡಲು ಪರದಾಡುತ್ತಿದ್ದೀರಾ? ಹಾಗಾದರ ಅಂತಹವರಿಗೆ ಕೇಂದ್ರ ಸರಕಾರ ಉತ್ತಮ ಸುದ್ದಿಯೊಂದನ್ನು ನೀಡಿದೆ.

ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ (ಆರ್‌ಸಿ) ಮತ್ತು ಇತರ ಪರವಾನಗಿಗಳಂತಹ ದಾಖಲೆಗಳ ಸಿಂಧುತ್ವ (ವ್ಯಾಲಿಡಿಟಿ) ವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರ ಈ ಮೊದಲು ಜೂನ್ 30 ರವರೆಗೆ ಗಡುವು ನೀಡಿತ್ತು. ಇದನ್ನು ಈಗ ಸೆ.30ರವರೆಗೆ ವಿಸ್ತರಿಸಲಾಗಿದೆ.

2021 ಫೆಬ್ರವರಿ 1ರ ಬಳಿಕ ಅವಧಿ ಮುಗಿದ ದಾಖಲೆಗಳು, ಸೆ. 30ರೊಳಗೆ ಅವಧಿ ಮುಕ್ತಾಯವಾದ ದಾಖಲೆಗಳು ಅಥವಾ ಲಾಕ್ ಡೌನ್ ಕಾರಣದಿಂದ ನವೀಕರಣ ಮಾಡಲಾಗದ ದಾಖಲೆಗಳು 2021ರ ಸೆಪ್ಟೆಂಬರ್ 30ರವರೆಗೆ ಉಪಯೋಗಿಸಬಹುದಾಗಿದೆ.

ಕೋವಿಡ್ ನಂತಹ ಕಠಿಣ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಫೆ.1ರಿಂದ ಸೆ.30ರವರೆಗೆ  ಅವಧಿ ಮುಗಿದ ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ ದಾಖಲೆಗಳ ಸಿಂಧುತ್ವವನ್ನು ಸೆ.30ರವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಕೋವಿಡ್ ಎರಡನೇ ಅಲೆ : ಜು.30ರ ವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ವಿಸ್ತರಣೆ

ಈ ಹಿಂದೆ ಫೆ.1ರಿಂದ ಜೂ.30ರವರೆಗಿನ ದಾಖಲೆಗಳ ಮಾನ್ಯತೆಯನ್ನು ನೀಡಿ ಪ್ರಕಟಣೆ ನೀಡಲಾಗಿತ್ತು. ಇದೀಗ ಇದರ ಗಡುವು ಅವಧಿಯನ್ನು ಮತ್ತೆ ಎರಡು ತಿಂಗಳಿಗೆ ಸಚಿವಾಲಯವು ವಿಸ್ತರಣೆ ಮಾಡಿದೆ.

ಲಾಕ್ ಡೌನ್ ಕಾರಣದಿಂದ ಮೋಟಾರು ವಾಹನ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳು 1989 ಕ್ಕೆ ಸಂಬಂಧಿಸಿದ ದಾಖಲೆಗಳ ನವೀಕರಣದಲ್ಲಿ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಈ ಸೂಚನೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸರ್ಕಾರಿ ಸಾರಿಗೆ ಕಚೇರಿಗಳ ಮುಂದೆ ಉದ್ದದ ಸರತಿ ಸಾಲುಗಳಲ್ಲಿ ಈ ಸಮಯದಲ್ಲಿ ಜನರು ನಿಲ್ಲುವುದನ್ನು ತಪ್ಪಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಅಧಿಸೂಚನೆ ಹೊರಡಿಸಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.