ಬಿಹಾರದಲ್ಲಿ ಇಯರ್ ಫೋನ್ ಧಾರಿ ತರುಣ ರೈಲು ಢಿಕ್ಕಿಯಾಗಿ ಸಾವು
Team Udayavani, May 27, 2017, 3:30 PM IST
ನವಾಡಾ : ಕಿವಿಗೆ ಇಯರ್ ಫೋನ್ ಹಾಕಿಕೊಂಡು ಸಂಗೀತವನ್ನು ಆಲಿಸುತ್ತಾ ಲೋಕವನ್ನೇ ಮರೆತವನಂತೆ ರೈಲು ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ತರುಣನೊಬ್ಬನ ಮೇಲೆ ರೈಲು ಹರಿದು ಆತ ದಾರುಣವಾಗಿ ಸಾವಪ್ಪಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ನಡೆದಿದೆ.
ಕಿವಿಗೆ ಇಯರ್ ಫೋನ್ ಹಾಕಿಕೊಂಡಿದ್ದ ತರುಣನಿಗೆ ತನ್ನತ್ತ ಧಾವಿಸಿ ಬರುತ್ತಿದ್ದ ಗಯಾ-ಕಿಯೂಲ್ ಪ್ಯಾಸೆಂಜರ್ ಟ್ರೈನ್‌ನ ವ್ಹಿಸಲ್ ಕೂಡ ಕೇಳಿಸಲಿಲ್ಲ; ಪರಿಣಾಮವಾಗಿ ರೈಲು ಆತನ ಮೇಲೆ ಹರಿದು ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮೃತ ತರುಣನನ್ನು 18ರ ಹರೆಯದ ರಾಜೀವ್ ರಂಜನ್ ಎಂದು ಗುರುತಿಸಲಾಗಿದೆ ಎಂದು ಸರಕಾರಿ ರೈಲ್ವೇ ಪೊಲೀಸ್ ಠಾಣಾಧಿಕಾರಿ ಕರೂ ಚೌಧರಿ ತಿಳಿಸಿದ್ದಾರೆ. ಮೃತ ತರುಣನು ರೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ದುನಿಯಾವಾನ್ ಗ್ರಾಮದ ನಿವಾಸಿ ಎಂದು ಗೊತ್ತಾಗಿದೆ.
ರಂಜನ್‌ನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಆತನ ಮನೆಯವರಿಗೆ ಒಪ್ಪಿಸಲಾಗಿದ ಎಂದು ಎಸ್‌ಎಚ್‌ಓ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ