ಪ್ರಧಾನಿ ಮೋದಿ ಭೇಟಿಯಾದ ಜಗನ್‌ ; ಪರಸ್ಪರ ಅಭಿನಂದನೆ

Team Udayavani, May 26, 2019, 12:19 PM IST

ಹೊಸದಿಲ್ಲಿ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಜಗನ್‌ ಮೋಹನ್‌ ರೆಡ್ಡಿ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುಭೇಟಿಯಾಗಿ ಮಾತುಕತೆ ನಡೆಸಿದರು.

ಲೋಕಮಾನ್ಯ ರಸ್ತೆಯಲ್ಲಿರುವ ಪ್ರಧಾನಿ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.ಚುನಾವಣೆಯ ಅಭೂತಪೂರ್ವ ಗೆಲುವಿಗಾಗಿ ಇಬ್ಬರೂ ಪರಸ್ಪರ ಅಭಿನಂದಿಸಿದರು.

ಜಗನ್‌ ಅವರು ಪ್ರಧಾನಿ ಅವರಿಗೆ ಹೂಗುಚ್ಛದೊಂದಿಗೆ ಶಾಲೊಂದನ್ನು ಹೊದೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನ ಮಾನ ನೀಡುವಂತೆ ಪ್ರಧಾನಿ ಅವರನ್ನು ಜಗನ್‌ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದು ಜಗನ್‌ ಅವರ ಪ್ರಣಾಳಿಕೆಯ ಮೊದಲ ಅಂಶವಾಗಿತ್ತು.

ಆಂಧ್ರದ 175 ಸದಸ್ಯ ಬಲದ ವಿಧಾನಸಭೆಯಲ್ಲಿ ಜಗನ್‌ ನೇತೃತ್ವದ ವೈಎಸ್‌ಆರ್‌ ಪಕ್ಷ 151 ಸೀಟು ಗಳನ್ನು ಗೆದ್ದು ಅಧಿಕಾರ ಹಿಡಿದಿದೆ. 25 ಲೋಕಸಭಾ ಸ್ಥಾನಗಳ ಪೈಕಿ 22 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ವಿಜಯವಾಡಾದಲ್ಲಿ ಮೇ 30 ರಂದು ಜಗನ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ