ವಾಯುಪಡೆ, ನೌಕಾಪಡೆಯ ಮುಖ್ಯಸ್ಥರಿಗೆ ಝೆಡ್+ ಭದ್ರತೆ
Team Udayavani, Mar 2, 2019, 12:30 AM IST
ಪುಲ್ವಾಮಾ ದಾಳಿ ಹಾಗೂ ಅದರ ನಂತರ ನಡೆದ ಘಟನಾವಳಿಗಳ ಹಿನ್ನೆಲೆಯಲ್ಲಿ ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರಿಗೆ ಹಾಗೂ ಅವರ ಮನೆಗಳಿಗೆ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ. ನೌಕಾಪಡೆ ಮುಖ್ಯಸ್ಥ ಸುನೀಲ್ ಲಾಂಬಾ ಮತ್ತು ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾಗೆ ಭದ್ರತೆಯನ್ನು ಒದಗಿಸಲಾಗಿದೆ. ಈಗಾಗಲೇ ಸೇನಾ ಮುಖ್ಯಸ್ಥರಿಗೆ ಝೆಡ್ ಪ್ಲಸ್ ಸೆಕ್ಯುರಿಟಿ ನೀಡಲಾಗುತ್ತಿದೆ.
ಆದರೆ ನೌಕಾಪಡೆ ಮತ್ತು ವಾಯುಪಡೆ ಮುಖ್ಯಸ್ಥರಿಗೆ ಈ ಭದ್ರತೆ ಇರಲಿಲ್ಲ. ಈಗ ಅವರ ಪಡೆಯ ಕಮಾಂಡೋಗಳಿಂದಲೇ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಗುಪ್ತಚರ ದಳ ಮತ್ತು ಗೃಹ ಸಚಿವಾಲಯವು ವಿಐಪಿ ಭದ್ರತಾ ಮರುಪರಿಶೀಲನೆ ನಡೆಸಿದ್ದು, ಈ ವೇಳೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಗುರುವಾರ ಸಭೆ ನಡೆಸಲಾಗಿತ್ತು. ಝೆಡ್ ಪ್ಲಸ್ ಭದ್ರತೆಯಿಂದಾಗಿ 36 ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗುತ್ತದೆ. ಎರಡೂ ಪಡೆಗಳ ಮುಖ್ಯಸ್ಥರ ಮನೆಗಳಿಗೆ ದಿಲ್ಲಿ ಪೊಲೀಸರು ಭದ್ರತೆ ಒದಗಿಲಿದ್ದಾರೆ. ಆದರೆ ಅವರು ಒಂದೆಡೆಯಿಂದ ಇನ್ನೊಂದೆಡೆ ಸಂಚರಿಸುವಾಗ ಕಮಾಂಡೋ ಜೊತೆಗೆ ಯಾವ ವಿಭಾಗದ ಪೊಲೀಸರು ಭದ್ರತೆ ಒದಗಿಸುತ್ತಾರೆ ಎಂಬುದು ಇನ್ನೂ ತಿಳಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!