ಮಾಸ್ಕ್ ಧರಿಸದವರ ವಿರುದ್ಧ ಬಿಎಂಸಿ ಅಭಿಯಾನ : ಒಂದೇ ದಿನ 26.47 ಲಕ್ಷ ರೂ. ದಂಡ ಸಂಗ್ರಹ

Team Udayavani, Dec 27, 2020, 12:13 PM IST

ಮಾಸ್ಕ್ ಧರಿಸದವರ ವಿರುದ್ಧ ಬಿಎಂಸಿ ಅಭಿಯಾನ : ಒಂದೇ ದಿನ 26.47 ಲಕ್ಷ ರೂ. ದಂಡ ಸಂಗ್ರಹ

ಮುಂಬಯಿ, ಡಿ. 26: ಒಂದೆಡೆ ಕೋವಿಡ್  ಸೋಂಕನ್ನು ಹತೋಟಿಗೆ ತರಲು ಮುಂಬಯಿ ಮಹಾನಗರ ಪಾಲಿಕೆಯ ಹಗಲಿರುಳು ಶ್ರಮಿಸುತ್ತಿದ್ದರೆ, ಇನ್ನೊಂದೆಡೆ ಮಾಸ್ಕ್ ಧರಿಸದೆ ತಿರುಗಾಡುವವರ ಸಂಖ್ಯೆಯು ದಿನೇ ದಿನೇ ಹೆಚ್ಚುತ್ತಿರುವುದು ಮುಂಬಯಿ ಮಹಾನಗರ ಪಾಲಿಕೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಗರದ ವಿವಿಧ ವಾರ್ಡ್‌ಗಳಿಂದ ಪ್ರತಿದಿನ 24,000ಕ್ಕೂ ಹೆಚ್ಚು ಮಂದಿಗೆ ಮುಂಬಯಿ ಮನಪಾವು ದಂಡ ವಿಧಿಸುತ್ತಿದ್ದು, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವ ಗುರಿಯ ಶೇ. 55ರಿಂದ ಶೇ. 60ರಷ್ಟು ಸಾಧ್ಯವಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್ ವೈರಸ್‌ ವಿರುದ್ಧ ರಕ್ಷಣಾತ್ಮಕ ಸಾಧನಗಳಿಲ್ಲದೆ ಹೊರಗಡೆ ತಿರುಗಾಡುತ್ತಿದ್ದ 13,235 ಮಂದಿಯಿಂದ ಬಿಎಂಸಿ 26.47 ಲಕ್ಷ ರೂ. ಗಳ ದಂಡವನ್ನು ಶುಕ್ರವಾರ ಒಂದೇ ದಿನ ಸಂಗ್ರಹಿಸಿದೆ. ಮಾರ್ಚ್‌ನಲ್ಲಿಕೊರೊನಾ ಸೋಂಕು ಹರಡಿದ ಬಳಿಕ ಮಾಸ್ಕ್ ಧರಿಸದೆ ತಿರುಗಾಡಿ ದಂಡಕ್ಕೆ ಗುರಿಯಾದವರ ಸಂಖ್ಯೆ 8.33 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ಒಂದು ತಿಂಗಳಲ್ಲಿ 8 ಕೋಟಿ ರೂ. ಗಳ ದಂಡ ಸಂಗ್ರಹಿಸಲಾಗಿದ್ದು, ಈ ವರೆಗೆ ಮುಂಬಯಿ ಮಹಾನಗರ ಪಾಲಿಕೆಯು 17 ಕೋ. ರೂ. ಗಳ ದಂಡ ಸಂಗ್ರಹಿಸಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ವಾರಗಳಲ್ಲಿ ನಗರವು ಕೋವಿಡ್‌ ಪ್ರಕರಣಗಳಲ್ಲಿ ಏರಿಕೆಯನ್ನು ದಾಖಲಿಸಿಲ್ಲವಾದರೂ, ಯುಕೆಯಲ್ಲಿ ವೇಗವಾಗಿ ಹರಡುವ ರೋಪಾಂತರಿತ ಸೋಂಕಿನಿಂದ ಎಚ್ಚೆತ್ತುಕೊಂಡಿರುವ ಬಿಎಂಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.  ಮಧ್ಯರಾತ್ರಿ ನಮ್ಮ ಮಾರ್ಷಲ್‌ಗ‌ಳು ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಅವರು ನಾಗರಿಕರಿಂದಲೂ ಕಿರುಕುಳಕ್ಕೊಳಗಾಗುತ್ತಿದ್ದಾರೆ. ಕೆಲವು ಮಾರ್ಷಲ್‌ಗ‌ಳ ವಿರುದ್ಧ ನಾಗರಿಕರು ಹಲ್ಲೆ ಮಾಡಿರುವ ಪ್ರಕರಣಗಳೂ ಇವೆ.

ನಾಗರಿಕ ಮುಖ್ಯಸ್ಥ ಇಕ್ಬಾಲ್‌ ಸಿಂಗ್‌ ಚಾಹಲ್‌ ಅವರು  ರಸ್ತೆಗಳು, ಮಾರುಕಟ್ಟೆಗಳು ಮತ್ತು ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ಗಳಿಲ್ಲದೆ ಸಂಚರಿಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ತಂಡಕ್ಕೆ ನಿರ್ದೇಶಿಸಿದ ಬಳಿಕ ಸೆಪ್ಟಂಬರ್‌ನಿಂದ ಅಭಿಯಾನವನ್ನು ಪ್ರಾರಂಭಿಸಲಾಯಿತು. ನವೆಂಬರ್‌ನಿಂದ ಅಭಿಯಾನಕ್ಕೆ ಮತ್ತಷ್ಟು ಚುರುಕು ನೀಡಲಾಯಿತು. ಮಾರ್ಷಲ್‌ಗ‌ಳ ಹೊರತಾಗಿ ಮುಂಬಯಿಯಾದ್ಯಂತ ಬಿಎಂಸಿ ಅಧಿಕಾರಿಗಳನ್ನು ನಿಯೋಜಿಸಿದೆ.

ಮಾಸ್ಕ್ ಧರಿಸುವುದು ಅತ್ಯಗತ್ಯ :

ನಾಅಗರಿಕರು ನಮ್ಮೊಂದಿಗೆ ಸಹಕರಿಸುವುದು ಮತ್ತು ಮನೆಯಿಂದ ಹೊರಗಡೆ ಹೋಗುವಾಗ ಮಾಸ್ಕ್ ಧರಿಸುವುದು ಮುಖ್ಯವಾಗಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿ ಹೇಳಿದ್ದಾರೆ. ಅಂಧೇರಿ, ಜೋಗೇಶ್ವರಿ ಮತ್ತು ವಿಲೇ ಪಾರ್ಲೆ ವೆಸ್ಟ್‌ ಅನ್ನು ಒಳಗೊಂಡಿರುವ ಕೆ ವೆಸ್ಟ್‌ ವಾರ್ಡ್‌ನಲ್ಲಿ ಅತೀ ಹೆಚ್ಚು 55,232 ಪ್ರಕರಣಗಳು ದಾಖಲಾಗಿವೆ. ಎಲ್‌ ವಾರ್ಡ್‌ನಲ್ಲಿರುವ ಕುರ್ಲಾದಲ್ಲಿ 48,450 ಪ್ರಕರಣಗಳು ಮತ್ತು ಕೆ ಈಸ್ಟ್‌ ವಾರ್ಡ್‌ನಲ್ಲಿರುವ ಅಂಧೇರಿ, ವಿಲೇ ಪಾರ್ಲೆ ಮತ್ತು ಜೋಗೇಶ್ವರಿ ಪೂರ್ವದ ಕೆಲವು ಭಾಗಗಳಲ್ಲಿ 48,366 ಪ್ರಕರಣಗಳು, ಭಾಂಡೂಪ್‌ ಪ್ರದೇಶಗಳನ್ನು ಒಳಗೊಂಡಿರುವ ಎಸ್‌ ವಾರ್ಡ್‌ನಲ್ಲಿ 47,180 ಪ್ರಕರಣಗಳನ್ನು ದಾಖಲಿಸಲಾಗಿದೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.