ಶ್ರಮಿಕ ವಿಶೇಷ ರೈಲಿನಿಂದ ರಾಜ್ಯಕ್ಕೆ 42 ಲಕ್ಷ ರೂ. ನಷ್ಟ

Team Udayavani, Aug 8, 2020, 5:43 PM IST

ಶ್ರಮಿಕ ವಿಶೇಷ ರೈಲಿನಿಂದ ರಾಜ್ಯಕ್ಕೆ 42 ಲಕ್ಷ ರೂ. ನಷ್ಟ

ಮುಂಬಯಿ, ಆ. 7: ಕೋವಿಡ್ ಮಹಾಮಾರಿ ಪ್ರಕೋಪದ ಸಂದರ್ಭ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕರೆದೊಯ್ಯಲು ಏರ್ಪಡಿಸಿದ್ದ ಶ್ರಮಿಕ ವಿಶೇಷ ರೈಲುಗಳಲ್ಲಿ ಹೆಚ್ಚಿನವು ಖಾಲಿ ಓಡಿದ್ದರಿಂದಾಗಿ ಸುಮಾರು 42 ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಮಹಾರಾಷ್ಟ್ರ ಸರಕಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

ಕೋವಿಡ್ ಸಂಧರ್ಭ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕರ ದುಃಸ್ಥಿತಿಯ ಬಗ್ಗೆ ನಗರ ಮೂಲದ ಟ್ರೇಡ್‌ ಯೂನಿಯನ್‌ ಸಂಸ್ಥೆ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ಯೂನಿಯನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಸ್ತುತ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಂದ ಮತ್ತೆ ಮಹಾರಾಷ್ಟ್ರಕ್ಕೆ ಹಿಂತಿರುಗುತ್ತಿದ್ದಾರೆ ಎಂದು ರಾಜ್ಯ ಸರಕಾರದ ಪರವಾಗಿ ಹಾಜರಾದ ಅಡ್ವೊಕೇಟ್‌ ಜನರಲ್‌ ಅಶುತೋಷ್‌ ಕುಂಭಕೋಣಿ ಅವರು ಮುಖ್ಯ ನ್ಯಾಯಮೂರ್ತಿ ದೀಪಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಎ.ಎಸ್‌. ಗಡ್ಕರಿ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.

ಕಳೆದ ತಿಂಗಳು ರಾಜ್ಯ ಸರಕಾರವು ಸಾವಿರಾರು ವಲಸೆ ಕಾರ್ಮಿಕರನ್ನು ಕರೆದೊಯ್ಯಲು ರೈಲುಗಳ ವ್ಯವಸ್ಥೆಯನ್ನು ಮಾಡಿತ್ತು ಆದರೆ ಕೇವಲ 3,551 ಮಂದಿ ಮಾತ್ರ ಆ ರೈಲುಗಳಲ್ಲಿ ಪ್ರಯಾಣಿಸಿದ್ದರು. ಇದರಿಂದಾಗಿ ರಾಜ್ಯ ಸರಕಾರವು ಸುಮಾರು 42 ಲಕ್ಷ ರೂ.ಗಳ ನಷ್ಟವನ್ನು ಅನುಭವಿಸಿದೆ ಎಂದು ಕುಂಭಕೋಣಿ ಅವರು ಹೇಳಿದರು.

ಪುಣೆಯಿಂದ 383 ಜನರನ್ನು ಅವರ ತವರು ರಾಜ್ಯಕ್ಕೆ ಕರೆದೊಯ್ಯಲು ರೈಲಿನ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ನಿರ್ಗಮನದ ದಿನ ಕೇವಲ 49 ಜನರು ಮಾತ್ರ 24 ಭೋಗಿಗಳ ರೈಲನ್ನು ಹತ್ತಿದ್ದರು ಎಂದವರು ನ್ಯಾಯಾಲಯಕ್ಕೆ ತಿಳಿಸಿದರು. ಕೋವಿಡ್  ಆರಂಭದಲ್ಲಿ ರಾಜ್ಯವನ್ನು ತೊರೆದ ಲಕ್ಷಾಂತರ ವಲಸೆ ಕಾರ್ಮಿಕರು ಈಗ ಮಹಾರಾಷ್ಟ್ರಕ್ಕೆ ಮರಳುತ್ತಿದ್ದಾರೆ ಎಂದು ಕುಂಭಕೋಣಿ ಹೇಳಿದ್ದಾರೆ. ಇನ್ನೂ ಹಲವಾರು ವಲಸೆ ಕಾರ್ಮಿಕರು ತಮ್ಮ ತವರು ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಹಿಂತಿರುಗಲು ಕಾಯುತ್ತಿದ್ದಾರೆ ಎಂದು ಅರ್ಜಿದಾರರ ಪರ ವಕೀಲೆ ರೋನಿತಾ ಭಟ್ಟಾಚಾರ್ಯ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಅರ್ಜಿದಾರರಿಗೆ ತವರು ರಾಜ್ಯಗಳಿಗೆ ಹಿಂತಿರುಗಲು ಬಯಸುವ ವಲಸೆ ಕಾರ್ಮಿಕರ ಸಂಖ್ಯೆಯನ್ನು ಕಂಡುಹಿಡಿಯುವಂತೆ ನಿರ್ದೇಶನ ನೀಡಿತು. ರೈಲುಗಳ ಸಂಖ್ಯೆ, ಎಷ್ಟು ವಲಸಿಗರು ರೈಲುಗಳನ್ನು ಹತ್ತಿದರು ಮತ್ತು ಸರಕಾರವು ಮಾಡಿದ ಖರ್ಚಿನ ವಿವರಗಳನ್ನು ನೀಡುವ ಅಫಿದಾವಿತ್‌ ಸಲ್ಲಿಸುವಂತೆ ನ್ಯಾಯಪೀಠವು ಕುಂಭಕೋಣಿ ಅವರಿಗೆ ನಿರ್ದೇಶನ ನೀಡಿತು.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.