ಸೋಂಕು ತಡೆಗೆ ಈವರೆಗೆ 480 ಕೋಟಿ ರೂ. ಖರ್ಚು

Team Udayavani, Jun 16, 2020, 12:46 PM IST

ಸೋಂಕು ತಡೆಗೆ ಈವರೆಗೆ 480 ಕೋಟಿ ರೂ. ಖರ್ಚು

ಮುಂಬಯಿ, ಜೂ. 15: ಕಳೆದ ಮೂರು ತಿಂಗಳಿನಿಂದ ಕೋವಿಡ್ ಸೋಂಕು ತಡೆಗಟ್ಟಲು ಮುಂಬಯಿ ಮಹಾನಗರ ಪಾಲಿಕೆಯು ಸುಮಾರು 480 ಕೋ. ರೂ. ಗಳನ್ನು ವ್ಯಯಿಸಿದೆ ಎಂದು ಮೂಲಗಳು ತಿಳಿಸಿವೆ.

ಮಾರ್ಚ್‌ 11ರಿಂದ ಜೂನ್‌ 1ರ ವರೆಗೆ ನಗರದಲ್ಲಿ ಮೊದಲ ಪ್ರಕರಣ ವರದಿಯಾದ ದಿನದಿಂದ ಮುಂಬಯಿ ಮಹಾನಗರ ಪಾಲಿಕೆಯು ವೈದ್ಯಕೀಯ ಉಪಕರಣಗಳನ್ನು ಸಂಗ್ರಹಿಸುವುದು, ಆರೋಗ್ಯ ಮತ್ತು ಆಹಾರ ವಿತರಣೆ, ಕೊರೊನಾ ಕಿಟ್‌ಗಳ ಖರೀದಿ ಇನ್ನಿತರ ಮೂಲ ಸೌಕರ್ಯಗಳಿಗೆ 480 ಕೋ. ರೂ. ಗಳನ್ನು ಖರ್ಚು ಮಾಡಿದೆ ಎಂದು ಹೆಚ್ಚುವರಿ ಪುರಸಭೆ ಆಯುಕ್ತ ಪಿ. ವೆಲ್ರಾಸು ತಿಳಿಸಿದ್ದಾರೆ.

ನಾವು ಈಗಾಗಲೇ ಸುಮಾರು 480 ಕೋ. ರೂ. ಗಳನ್ನು ಖರ್ಚು ಮಾಡಿದ್ದೇವೆ. ಕಳೆದ ಕೆಲವು ದಿನಗಳಲ್ಲಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳನ್ನು ಸಂಗ್ರಹಿಸುವುದು ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ನವೀಕರಿಸುವುದು ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಸಲಕರಣೆಗಳ ವಿಷಯದಲ್ಲಿ, ವೈಯಕ್ತಿಕ ರಕ್ಷಣಾ ಸಾಧನಗಳು (ಪಿಪಿಇ) ಕಿಟ್‌ ಗಳು, ಎನ್‌ -95 ಮುಖಗವಸುಗಳು, ಮೂರು ಪ್ಲೈ ಮುಖಗವಸುಗಳು, ಕೈಗವಸುಗಳು, ಹೈಡ್ರಾಕ್ಸಿಕ್ಲೋರೋಕ್ವಿನ್‌ ಇತ್ಯಾದಿ ಪ್ರಮುಖ ವೈದ್ಯಕೀಯ ಸೌಲಭ್ಯಗಳಿಗಾಗಿ ಪ್ರಮುಖ ಆಧ್ಯತೆಯನ್ನು ನೀಡಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ, ಜಂಬೋ ಬೆಡ್‌ ಸೌಲಭ್ಯಗಳ ರೂಪದಲ್ಲಿ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸುವುದು, ಹೊಸ ಕೋವಿಡ್‌-19 ಆರೈಕೆ ಕೇಂದ್ರಗಳನ್ನು ಸ್ಥಾಪಿಸುವುದು, ಮುಂಚೂಣಿ ಸಿಬಂದಿಯ ವಸತಿಗಾಗಿ ಹೊಟೇಲ್‌ ಬಿಲ್‌, ಹೊಸ ಸಿಬಂದಿಗಳ ನೇಮಕಾತಿಯೊಂದಿಗೆ ಬಿಎಂಸಿ ವಿವಿಧ ಉಪಕ್ರಮಗಳಿಗಾಗಿ ಕೋಟ್ಯಾಂತರ ರೂ. ಗಳನ್ನು ಖರ್ಚು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಬಜೆಟ್‌ ಮರುನಿರ್ಮಾಣದ ಅಗತ್ಯವಿದೆ :  ಬಿಎಂಸಿ ತನ್ನ ಆಕಸ್ಮಿಕ ನಿಧಿಯಿಂದ ಹಣವನ್ನು ಬಳಸಿಕೊಳ್ಳುತ್ತಿದೆ. 2020-21ರ ಬಜೆಟ್‌ನಲ್ಲಿ, ಬಿಎಂಸಿ ತನ್ನ ಆಕಸ್ಮಿಕ ನಿಧಿಗೆ 850 ಕೋ. ರೂ. ಗಳನ್ನು ನಿಗದಿಪಡಿಸಿತ್ತು. ಭವಿಷ್ಯದ ಅನಿರೀಕ್ಷಿತ ವೆಚ್ಚಗಳನ್ನು ಭರಿಸಲು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾಗಿದೆ. 2020-21ರ ಬಜೆಟ್‌ ಅನ್ನು ಮರುನಿರ್ಮಾಣ ಮಾಡುವ ಮೂಲಕ ಹಣಕಾಸು ನಿರ್ವಹಣೆಗೆ ಕೆಲಸ ಮಾಡಬೇಕಾಗುತ್ತದೆ ಎಂದು ಬಿಎಂಸಿ ಹೇಳಿಕೊಂಡಿದೆ.

ನಾವು ಪ್ರಸ್ತುತ ನಮ್ಮ ಆಕಸ್ಮಿಕ ನಿಧಿಯಿಂದ 850 ಕೋ. ರೂ. ಖರ್ಚು ಮಾಡುತ್ತಿದ್ದೇವೆ. ಕೋವಿಡ್ ವೈರಸ್‌ಗಾಗಿ ವಿಶೇಷ ನಿಬಂಧನೆ ಮಾಡಲು ಬಜೆಟ್‌ ಅನ್ನು ಮರುಸೃಷ್ಟಿಸಿಲ್ಲ. ಮುಂಬರುವ ಒಂದು ತಿಂಗಳಲ್ಲಿ, ನಾವು ಅದನ್ನು ಕಾರ್ಯಗತಗೊಳಿಸಬೇಕಾಗಬಹುದು ಎಂದು ಹೆಚ್ಚುವರಿ ಪುರಸಭೆ ಆಯುಕ್ತ ಪಿ. ವೆಲಾÅಸು ತಿಳಿಸಿದ್ದಾರೆ. ಭಾರತದ ಶ್ರೀಮಂತ ನಾಗರಿಕ ಸಂಸ್ಥೆಯಾದ ಬಿಎಂಸಿ 2020-21ರಲ್ಲಿ 33,441ಕೋಟಿ ಬಜೆಟ್‌ ಮಂಡಿಸಿತ್ತು. ನಾಗರಿಕ ಸಂಸ್ಥೆ, ಬಜೆಟ್‌ ನಲ್ಲಿ, ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ನವೀಕರಿಸಲು 2 ಕೋ. ರೂ. ಗಳ ವಿಶೇಷ ನಿಧಿಯನ್ನು ನಿಗದಿಪಡಿಸಿತ್ತು, ಇದು ಆಗ ಕೋವಿಡ್‌ -19 ರೋಗಿಗಳಿಗೆ ಚಿಕಿತ್ಸೆ ನೀಡುವ ಏಕೈಕ ಆಸ್ಪತ್ರೆಯಾಗಿದ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.