ಯಕ್ಷವೈಭವ ಮಕ್ಕಳ ಮೇಳ 5ನೇ ವಾರ್ಷಿಕೋತ್ಸವ 

Team Udayavani, Dec 6, 2017, 4:50 PM IST

04-Mum01a.jpg

ಮುಂಬಯಿ: ಯಕ್ಷಗಾನದಲ್ಲಿ ಪಾರಿಭಾಷಿಕ ಶಬ್ಧವನ್ನು ಬಳಸಿದರೆ, ಅದು ಅಭಾಸವಾಗುತ್ತದೆ. ಪ್ರಸಂಗದ ಸಂಪೂರ್ಣ ಅಧ್ಯಯನ, ವ್ಯಾಖ್ಯಾನಿಸುವ ರೀತಿ, ಎದುರಾಳಿಯ ಮಾತಿನ ಚಾಟಿಗೆ ಸಮರ್ಪಕವಾದ ಪ್ರತ್ಯುತ್ತರ, ಚೆಂಡೆಯ ಬಡಿತಕ್ಕೆ ಕುಣಿಯುವ ಚಾಕಚಕ್ಯತೆ ಅತ್ಯಂತ ಪ್ರಾಮುಖ್ಯವೆನಿಸುತ್ತದೆ. ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಯಕ್ಷಗಾನ ಬಯಲಾಟದಲ್ಲಿ ಏಕಾಗ್ರತೆ ಅತ್ಯಗತ್ಯವಾಗಿದೆ ಎಂದು ಥಾಣೆ ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಪೊಲ್ಯ ಉಮೇಶ್‌ ಶೆಟ್ಟಿ ಅವರು ಅಭಿಪ್ರಾಯಿಸಿದರು.

ನ. 19ರಂದು ಮೀರಾರೋಡ್‌ ಪೂರ್ವದ ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಯಕ್ಷವೈಭವ ಮಕ್ಕಳ ಮೇಳಮುಂಬಯಿ ಇದರ 5ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು,ಅಳಿವಿಲ್ಲದ ಬದಲಾವಣೆಯೊಂದಿಗೆ ಜನರನ್ನುಆಕರ್ಷಿಸುವ ವಿಶೇಷತೆ ಯಕ್ಷಗಾನದಲ್ಲಿದೆ. ಬ್ರಹ್ಮಾಂಡವನ್ನೇ ಸೃಷ್ಟಿಸಿ, ಮೂರು ಲೋಕಗಳ
ಪರಿಚಯದೊಂದಿಗೆ ಆಧ್ಯಾತ್ಮಿಕ ಚಿಂತನೆ, ಧಾರ್ಮಿಕತೆಯನ್ನು ಬೋಧಿಸುವ ತಾಣ ರಂಗಸ್ಥಳವಾಗಿದೆ. ವಿವಿಧ ಕಲಾ ಪ್ರಕಾರಗಳೊಂದಿಗೆ ಯುವ ಪೀಳಿಗೆ ಭಾಗಿಯಾಗುವುದರಿಂದ ಸಂಸ್ಕೃತಿ, ಸಂಪ್ರದಾಯಗಳು ಶಾಶ್ವತವಾಗಿ ನೆಲೆಯೂರಲು ಸಾಧ್ಯವಾಗುತ್ತದೆ ಎಂದರು.

ಮಹಾರಾಷ್ಟ್ರ ಕನ್ನಡಿಗ ಕಲಾವಿದರ ಪರಿಷತ್ತುವಿನ ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ, ಮೀರಾ-ಡಹಾಣೂ ಬಂಟ್ಸ್‌ನ ಗೌರವಾಧ್ಯಕ್ಷ ವಿರಾರ್‌ ಶಂಕರ್‌ ಶೆಟ್ಟಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂತಿಂಜ ಜನಾರ್ದನ್‌ ಭಟ್‌, ಯತಿರಾಜ ಉಪಾಧ್ಯಾಯ, ಮುಂಬಯಿ ಮಾನವ ಸೇವಾ ಸಂಘದ ಅಧ್ಯಕ್ಷ ಡಾ| ಹರೀಶ್‌ ಶೆಟ್ಟಿ, ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಗೀತಾ ಬಿ. ಶೆಟ್ಟಿ, ಕಲಾಪೋಷಕರಾದ ಪುರುಷೋತ್ತಮ ಶೆಟ್ಟಿ, ಶೇಖರ್‌ ಪೂಜಾರಿ, ಡಾ| ಕಸ್ತೂರಿ ನಾಯಕ್‌ ಕಾರವಾರ, ಪಂಜದಗುತ್ತು ಸಂಪತ್‌ ಶೆಟ್ಟಿ, ಅರುಣೋದಯ ರೈ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಯಕ್ಷಗಾನದ ಗುರು, ಭಾಗವತ ಎಳ್ಳಾರೆ ಶಂಕರ ನಾಯಕ್‌ ಹಾಗೂ ಸಾಂತಿಂಜ ಜನಾರ್ದನ ಭಟ್‌ ದಂಪತಿಗಳೊಂದಿಗೆ  ಗುರುವಂದನೆ ಸಲ್ಲಿಸಿ, ಗುರು ವಂದನೆಯೊಂದಿಗೆ ಯಕ್ಷ ವೈಭವದ ಕಲಾವಿದರು ಗೌರವಿಸಿದರು. ಯಕ್ಷ ವೈಭವ ಮಕ್ಕಳ ಮೇಳದ ಸ್ಥಾಪಕ ಯಕ್ಷಗಾನ ಗುರು ಭಾಗವತ ಎಳ್ಳಾರೆ ಶಂಕರ್‌ ನಾಯಕ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಲೇಖಕ ಅರುಣ್‌ ಶೆಟ್ಟಿ ಎರ್ಮಾಳ್‌ ಮತ್ತು ವೈ. ಟಿ. ಶೆಟ್ಟಿ ಹೆಜ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಲನಚಿತ್ರ ಮತ್ತು ರಂಗಭೂಮಿ ಕಲಾವಿದ ಜಿ. ಕೆ. ಕೆಂಚನಕೆರೆ, ಯಕ್ಷಗಾನ ಕಲಾವಿದ ರಮೇಶ್‌ ಭಿರ್ತಿ, ಚೆಂಡೆ ವಾದಕ ಭಾಸ್ಕರ ಆಚಾರ್ಯ, ದೇವಲ್ಕುಂದ ಭಾಸ್ಕರ ಶೆಟ್ಟಿ, ರಂಗಕಲಾವಿದೆ ಪ್ರತಿಮಾ ಬಂಗೇರ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯೊಂದಿಗೆ ಸಮ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಯಕ್ಷವೈಭವ ಮಕ್ಕಳ ಮೇಳ ಮುಂಬಯಿ ಇದರ ಕಲಾವಿದರಿಂದ ಭಾಗವತ ಎಳ್ಳಾರೆ ಶಂಕರ ನಾಯ್ಕ ನಿರ್ದೇಶನದಲ್ಲಿ ಶಶಿಪ್ರಭಾ ಪರಿಣಯ ಬಯಲಾಟ ಪ್ರದರ್ಶನಗೊಂಡಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.