Udayavni Special

ಇಂದು ಜಾರ್ಜ್‌ ಫೆರ್ನಾಂಡಿಸ್‌ ಅವರ 92ನೇ ಜನ್ಮದಿನಾಚರಣೆ


Team Udayavani, Jun 3, 2021, 1:00 PM IST

92nd birthday of George Fernandes

ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾರ್ಮಿಕ ಮುಂದಾಳು ಮಂಗಳೂರಿನವರೇ ಆದ ದಿ| ಜಾರ್ಜ್‌ ಫೆರ್ನಾಂಡಿಸ್‌ ಅವರ 92ನೇ ಜನ್ಮದಿನಾಚರಣೆ ಪ್ರಯುಕ್ತ ಜೂ. 3ರಂದು ಅಂತರ್ಜಾಲದ ಝೂಮ್‌ ಸಭೆಯನ್ನು ರಾತ್ರಿ 7.30ಕ್ಕೆ ಆಯೋಜಿಸಲಾಗಿದೆ.

ಸಭೆಯಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ಅವರ ಬದುಕಿನ ಸಾರ್ಥಕತೆಯನ್ನು ಸ್ಮರಿಸಿ ಅವರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಡುವುದರ ಮೂಲಕ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಜಾರ್ಜ್‌ ಫೆರ್ನಾಂಡಿಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬುದಾಗಿ ಪುನರ್‌ನಾಮಕರಣ ಮಾಡಲು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸರಕಾರವನ್ನು ಒತ್ತಾಯಿಸಲಾಗು ವುದು. ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಸಮಯವೂ ವಿಮಾನ ಸಂಚಾರದ ಬಗ್ಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೇಡಿಕೆಗೆ ಮಾನ್ಯತೆ ನೀಡಲು ಕಾರಣಿಭೂತರಾದ

ಜಾರ್ಜ್‌ ಫೆರ್ನಾಂಡಿಸ್‌ ಮತ್ತು ಅವರ ಸಹೋದ್ಯೋಗಿ ಸಚಿವರ ಸಹಾಯ ಮತ್ತು ಬೆಂಬಲ ಅವಿಸ್ಮರಣೀಯ. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿಯವರು ಸಮಿತಿಯ ಪರವಾಗಿ ಈಗಾಗಲೇ ಕೇಂದ್ರ ಸರಕಾರವನ್ನು ಸಂಪರ್ಕಿಸಿದ್ದು, ಈ ಬಗ್ಗೆ ಕಳೆದ ತಿಂಗಳು ಪ್ರಧಾನ ಮಂತ್ರಿಯವರ ಕಾರ್ಯಾಲಯವು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ರವಾನಿಸಿದ್ದು, ಅದರ ಪ್ರತಿಯನ್ನು ಸಮಿತಿಯ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿಯವರಿಗೆ ಕಳುಹಿಸಿದ್ದಾರೆ.

ಪ್ರಧಾನ ಮಂತ್ರಿಯವರ ಕಾರ್ಯಾಲ ಯದಿಂದ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಒಂದೂವರೆ ತಿಂಗಳ ಮೊದಲೇ ಪತ್ರ ಬರೆಯಲಾಗಿದ್ದು, ಈ ವರೆಗೆ ಯಾವುದೇ ಕ್ರಮ ಕೈಕೊಳ್ಳದ ಕಾರಣ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿಯವರು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಮತ್ತು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು, ಪ್ರಧಾನ ಮಂತ್ರಿಯವರ ಕಾರ್ಯಾಲಯದ ಪತ್ರದಂತೆ  ಮುಖ್ಯಮಂತ್ರಿಯವರಲ್ಲಿ ಚರ್ಚಿಸಿ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಜಾರ್ಜ್‌ ಫೆರ್ನಾಂಡಿಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬುದಾಗಿ ಪುನರ್‌ ನಾಮಕರಣ ಮಾಡಲು  ತಿಳಿಸಿದ್ದಾರೆ.

ಜಾರ್ಜ್‌ ಫೆರ್ನಾಂಡಿಸ್‌ ಅವರು ದೇಶಕ್ಕಾಗಿ ಸಲ್ಲಿಸಿದ ಸೇವಾಕಾರ್ಯಗಳನ್ನು ಈ ಸಭೆಯಲ್ಲಿ ಸ್ಮರಿಸಿ ಸಮಿತಿಯ ಮುಂದಿನ ಯೋಜನೆಗಳಿಗಾಗಿ ಚರ್ಚಿಸಲಾಗುವುದೆಂದು ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ ದಾಸ್‌ ಮತ್ತು ಕೋಶಾಧಿಕಾರಿ ಸುರೇಂದ್ರ ಸಾಲ್ಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home construction

ಮನೆ ನಿರ್ಮಾಣಕ್ಕೆ ಸಹಾಯಹಸ್ತ

The Bhagavad-Gita

ಭಗವದ್ಗೀತೆ ಭಾವಾರ್ಥ ಮಾತೃಭಾಷೆಯಲ್ಲಿ ಬೆಸೆಯಲಿ: ಡಾ| ವೀರೇಂದ್ರ ಹೆಗ್ಗಡೆ

covid news

ಮೂರನೇ ಅಲೆ ಬಗ್ಗೆ ಜಾಗೃತಿ ಅಗತ್ಯ: ಡಿಸಿಎಂ ಅಜಿತ್‌ ಪವಾರ್‌

Today is Yoga Day

ಇಂದು ಯೋಗ ದಿನಾಚರಣೆ

covid Care Center

ರೋಗಿಗಳಿಲ್ಲದೆ ಜಂಬೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಮುಚ್ಚಲು ಬಿಎಂಸಿ ನಿರ್ಧಾರ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.