ಮುಂಬಯಿ ಬಿಜೆಪಿ ಕರ್ನಾಟಕ ಸೆಲ್‌ನಿಂದ ತುಳು-ಕನ್ನಡಿಗರ ವಿಶೇಷ ಸಭೆ

Team Udayavani, Apr 25, 2019, 1:38 PM IST

ಮುಂಬಯಿ: ಲೋಕಸಭಾ ಚುನಾವಣೆಯ ಅಂಗವಾಗಿ ಬಿಜೆಪಿ ಕರ್ನಾಟಕ ಸೆಲ್‌ ವತಿಯಿಂದ ಎ. 25ರ ಸಂಜೆ 4ರಿಂದ ಬಾಂದ್ರಾ ಹಿಂದು ಅಸೋಸಿಯೇಶನ್‌ ಸಭಾಗೃಹ, ನಿರೊನ್‌ಆಸ್ಪತ್ರೆ ಸಮೀಪ, ಕದಂವಾಡಿ
ವಕೋಲಾ, ಸಾಂತಾಕ್ರೂಜ್‌ ಪೂರ್ವ ಇಲ್ಲಿ ಮುಂಬಯಿ ತುಳು-
ಕನ್ನಡಿಗರ ವಿಶೇಷ ಸಭೆಯೊಂದನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಉತ್ತರ ಮುಂಬಯಿ ಮಧ್ಯ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಪೂನಂ ಮಹಾ ಜನ್‌, ಬೆಳ್ತ‌ಂಗಡಿ ವಿಧಾನ ಸಭಾ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಹಾರಾಷ್ಟ್ರ ಪ್ರದೇಶ ಕಾರ್ಯಕಾರಿ ಸಮಿತಿಯ ಸದಸ್ಯ ಎಲ್‌. ವಿ. ಅಮೀನ್‌, ಬೊರಿವಲಿ ಸಂಸದ ಗೋಪಾಲ್‌ ಶೆಟ್ಟಿ ತುಳು-ಕನ್ನಡಿಗ ಅಭಿಮಾನಿ ಬಳಗದ ಸಂಚಾಲಕ, ಸಮಾಜ ಸೇವಕ ಎರ್ಮಾಳ್‌ ಹರೀಶ್‌ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಮಹಾ ನಗರದಲ್ಲಿನ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆ
ಯಲ್ಲಿ ಈ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸುವಂತೆ ಬಿಜೆಪಿಯ ಕರ್ನಾಟಕ ಸೆಲ್‌ ಮುಂಬಯಿ ಇದರ ಅಧ್ಯಕ್ಷ ಸುರೇಶ್‌ ಅಂಚನ್‌, ಬಿಜೆಪಿ ಮುಂದಾಳುಗಳಾದ ಸುಧೀರ್‌ ಶೆಟ್ಟಿ, ದಿನೇಶ್‌ ಅಮೀನ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

  • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

  • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

  • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

  • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

  • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...