ಪುಣೆ ಬಂಟರ ಸಂಘದ ವಾರ್ಷಿಕೋತ್ಸವದಲ್ಲಿ ಸಾಧಕರಿಗೆ ಸಮ್ಮಾನ

Team Udayavani, Jan 31, 2018, 11:59 AM IST

ಪುಣೆ: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 20ರಂದು  ನಗರದ  ಮಹಾಲಕ್ಷ್ಮೀ ಲಾನ್ಸ್‌ನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ಬೆಟ್ಟು ಸಂತೋಷ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ, ಗೌರವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ನಡೆದ  ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕರ್ನಾಟಕದ ವಿಧಾನ ಪರಿಷತ್ತಿನ  ಮುಖ್ಯ ಸಚೇತಕರಾದ ಐವನ್‌ ಡಿ’ಸೋಜಾ, ಆರ್ಗಾನಿಕ್‌ ಇಂಡಸ್ಟ್ರೀಸ್‌ ಪ್ರೈವೆಟ್‌ ಲಿಮಿಟೆಡ್‌  ಇದರ ಮುಖ್ಯ ಆಡಳಿತ ನಿರ್ದೇಶಕರಾದ   ಆನಂದ್‌ ಎಂ. ಶೆಟ್ಟಿ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿಯ ಕಾರ್ಯದರ್ಶಿ ದೇವಿಪ್ರಸಾದ್‌ ಶೆಟ್ಟಿ, ಮುನಿಯಾಲ್‌ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್‌ ಟ್ರಸ್ಟ್‌ ಇದರ ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲ್‌ ಹಾಗೂ ಮುಂಬಯಿ ಬಂಟರ ಸಂಘದ ಮಾತೃಭೂಮಿ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಇದರ ಕಾರ್ಯಾಧ್ಯಕ್ಷರಾದ ರತ್ನಾಕರ ಶೆಟ್ಟಿ ಮುಂಡ್ಕೂರು ಇವರುಗಳನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಪುಣೇರಿ ಪೇಟ ತೊಡಿಸಿ, ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಅಧ್ಯಕ್ಷರಾದ  ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ, ಉಪಾಧ್ಯಕ್ಷರುಗಳಾದ ರಾಮಕೃಷ್ಣ ಶೆಟ್ಟಿ ಮತ್ತು ಮಾಧವ ಆರ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಸಂಧ್ಯಾ ವಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ  ರೋನಕ್‌ ಜೆ.   ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಬೈಲೂರು, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು ಮೊದಲಾದವರು  ಉಪಸ್ಥಿತರಿದ್ದರು.  

ಚಿತ್ರ-ವರದಿ : ಕಿರಣ್‌ ಬಿ ರೈ ಕರ್ನೂರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ