ಜು. 14: ಅಜೆಕಾರು ಕಲಾಭಿಮಾನಿ ಬಳಗ ಸರಣಿ ಯಕ್ಷಗಾನ ತಾಳಮದ್ದಳೆಗೆ ಚಾಲನೆ

Team Udayavani, Jul 13, 2018, 2:11 PM IST

566.jpg

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ವಾರ್ಷಿಕ ಸರಣಿ ತಾಳಮದ್ದಳೆಯು ಜು. 14 ರಂದು ಪ್ರಾರಂಭಗೊಂಡು ಜು. 21 ರವರೆಗೆ ನಗರ ಮತ್ತು ಉಪನಗರಗಳ ವಿವಿಧೆಡೆಗಳಲ್ಲಿ ನಡೆಯಲಿದೆ.

ತವರೂರಿನ ಪ್ರಸಿದ್ಧ ತಾಳಮದ್ದಳೆ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಳೆ ಕಾರ್ಯಕ್ರಮವು ನಡೆಯಲಿದ್ದು, ಜು. 14 ರಂದು ಅಪರಾಹ್ನ 4 ರಿಂದ ಕಾಂಜೂರ್‌ಮಾರ್ಗ ಪೂರ್ವದ ಶ್ರೀ ಅಂಬಿಕಾ ಮಂದಿರದಲ್ಲಿ ಉದ್ಘಾಟನೆಗೊಳ್ಳಲಿದೆ. ಶ್ರೀ ಅಂಬಿಕಾ ಮಂದಿರದ ಶ್ರೀ ಅನಂತ ಭಟ್‌ ಇವರು ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಯಕ್ಷಮಾನಸ ಮುಂಬಯಿ ಅಧ್ಯಕ್ಷ ಶೇಖರ್‌ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ  ಅತಿಥಿಗಳಾಗಿ ಶ್ರೀ ಅಂಬಿಕಾ ಮಂದಿರದ ಕಾರ್ಯಾಧ್ಯಕ್ಷ ರಾಜೇಶ್‌ ಶೆಟ್ಟಿ, ಗುರುದೇವಾ ಸೇವಾ ಬಳಗ ಥಾಣೆ ಘಟಕದ ಅಧ್ಯಕ್ಷ ಗುಣಪಾಲ್‌ ಎಸ್‌. ಶೆಟ್ಟಿ, ಶ್ರೀ ಅಂಬಿಕಾ ಮಂದಿರದ ಅಧ್ಯಕ್ಷ ಶಂಕರ ಪೂಜಾರಿ, ಕರ್ನಾಟಕ ಬ್ಯಾಂಕ್‌ ಮುಲುಂಡ್‌ ಶಾಖೆಯ ಮ್ಯಾನೇಜರ್‌ ನಾಗೇಂದ್ರ ಎನ್‌. ಎಸ್‌., ಶ್ರೀ ಅಂಬಿಕಾ ಮಂದಿರದ ಉಪ ಕಾರ್ಯಾಧ್ಯಕ್ಷ ಸುಂದರ ಎಂ. ಶೆಟ್ಟಿ, ಕಾರ್ಯದರ್ಶಿ ಶೇಖರ್‌ ಶೆಟ್ಟಿಗಾರ್‌, ಜನಪ್ರಿಯ ಯಕ್ಷಗಾನ ಮಂಡಳಿ ಕುರ್ಲಾ ಅಧ್ಯಕ್ಷ ರವೀಂದ್ರ ಪೈ ಅವರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ  ಭೀಷ್ಮ ವಿಜಯ ತಾಳಮದ್ದಳೆ ನಡೆಯಲಿದೆ.

ಜು. 15 ರಂದು ಬೊರಿವಲಿ ಪಶ್ಚಿಮದ ಜಯರಾಜ್‌ ನಗರದ  ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಸಭಾಂಗಣದಲ್ಲಿ ಅಪರಾಹ್ನ 3.30 ರಿಂದ ಶ್ರೀ ರಾಮಪಟ್ಟಾಭಿಷೇಕ, ಜು. 16 ರಂದು ಅಪರಾಹ್ನ 4.30 ರಿಂದ ಚೆಂಬೂರು ಛೆಡ್ಡಾ ನಗರದ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಪ್ರಸಿದ್ಧ ಜ್ಯೋತಿಷ್ಯ ಅಶೋಕ್‌ ಭಟ್‌ ಇವರ ಪ್ರಾಯೋಜಕತ್ವದಲ್ಲಿ ಶಿವಭಕ್ತ ವೀರಮಣಿ ತಾಳಮದ್ದಳೆಯನ್ನು ಆಯೋಜಿಸಲಾಗಿದೆ. ಜು. 17 ರಂದು ಅಪರಾಹ್ನ 4.30 ರಿಂದ ಕಲ್ಯಾಣ್‌ ಶಾಹಡ್‌ ಬಿರ್ಲಾಗೇಟ್‌ನ ಶ್ರೀ ಮೂಕಾಂಬಿಕಾ ಮಂದಿರದಲ್ಲಿ ಭೃಗುಶಾಪ, ಜು. 18 ರಂದು ಅಪರಾಹ್ನ 4.30 ರಿಂದ  ಯಕ್ಷಮಿತ್ರರು ಭಾಂಡೂಪ್‌ ಇವರ ಪ್ರಾಯೋಜಕತ್ವದಲ್ಲಿ ಭಾಂಡೂಪ್‌ ಎಲ್‌ಬಿಎಸ್‌ ಮಾರ್ಗದ, ಶಾಂಗ್ರಿಲಾ ಬಿಸ್ಕಿಟ್‌ ಕಂಪೆನಿ ಸಮೀಪದ ಶ್ರೀ ನಿತ್ಯಾನಂದ ಮಂದಿರದ ಸಭಾಂಗಣದಲ್ಲಿ ಅಗ್ರಪೂಜೆ ತಾಳಮದ್ದಳೆ ನಡೆಯಲಿದೆ.

ಜು. 19 ರಂದು ಅಪರಾಹ್ನ 2.30 ರಿಂದ ಮುಲುಂಡ್‌ ಫ್ರೆಂಡ್ಸ್‌ ವತಿಯಿಂದ ಮುಲುಂಡ್‌ ಪೂರ್ವದ ಮರಾಠ ಮಂಡಳದ ಸಾಂಸ್ಕೃತಿಕ ಸಭಾಗೃಹದಲ್ಲಿ ಗರುಡ ಗರ್ವಭಂಗ, ಜು. 20 ರಂದು ಸಂಜೆ 5 ರಿಂದ ಘಾಟ್‌ಕೋಪರ್‌ ಸುಭಾಷ್‌ ನಗರದ ಶ್ರೀ ದತ್ತಾತ್ರೇಯ ದುರ್ಗಾಂಬಿಕಾ ಮಂದಿರದ ಸಭಾಂಗಣದಲ್ಲಿ ಸತ್ಯ ಹರಿಶ್ಚಂದ್ರ, ಜು. 21 ಅಪರಾಹ್ನ 4.30 ರಿಂದ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಕನ್ನಡ ಸಂಘ ಥಾಣೆ ಬಾಲ್ಕುಮ್‌ ವತಿಯಿಂದ ಥಾಣೆ ಪಶ್ಚಿಮದ ಮಾರ್ತಾಂಡ ಮಂಗಳಂ ಹಾಲ್‌ನಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ ನೆರವೇರಲಿದೆ.

ಹಿಮ್ಮೇಳದಲ್ಲಿ ಭಾಗವತರಾಗಿ  ಕಾವ್ಯಶ್ರೀ ಅಜೇರು, ಚೆಂಡೆಯಲ್ಲಿ ಪ್ರಶಾಂತ್‌ ವಗೆನಾಡು, ಮದ್ದಳೆಯಲ್ಲಿ ಶ್ರೀಪತಿ ನಾಯಕ್‌ ಅಜೇರು, ಅರ್ಥದಾರಿಗಳಾಗಿ ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಹರೀಶ್‌ ಭಟ್‌ ಬೊಳಂತಿಮೊಗರು, ಶ್ಯಾಮ್‌ ಭಟ್‌ ಪಕ್ಕಳಕುಂಜ, ಅವಿನಾಶ್‌ ಶೆಟ್ಟಿ ಉಬರಡ್ಕ ಇವರು ಆಗಮಿಸಲಿದ್ದಾರೆ. ದಿನೇಶ್‌ ಶೆಟ್ಟಿ ವಿಕ್ರೋಲಿ ಸಹಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ (9821880089, 9869176737) ಇವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.