ಯಕ್ಷಗಾನ ಕ್ಷೇತ್ರಕ್ಕೆ ಅಜೆಕಾರು ಕಲಾಭಿಮಾನಿ ಬಳಗದ ಕೊಡುಗೆ ಅಪಾರ: ಶಾಂತರಾಮ್‌ ಶೆಟ್ಟಿ 


Team Udayavani, Sep 26, 2021, 12:54 PM IST

ಯಕ್ಷಗಾನ ಕ್ಷೇತ್ರಕ್ಕೆ ಅಜೆಕಾರು ಕಲಾಭಿಮಾನಿ ಬಳಗದ ಕೊಡುಗೆ ಅಪಾರ: ಶಾಂತರಾಮ್‌ ಶೆಟ್ಟಿ 

ಮುಂಬಯಿ: ಮುಂಬಯಿ ಮಹಾನಗರದಲ್ಲಿ ಯಕ್ಷಗಾನದ ಬೆಳವಣಿಗೆಯಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿಯವರ ನೇತೃತ್ವದ ಅಜೆಕಾರು ಬಳಗದ ಕೊಡುಗೆ ತುಂಬಾ ಇದೆ. ಕನ್ನಡ ವೆಲ್ಫೇರ್‌ ಸೊಸೈಟಿಯಂತಹ ಸಾಮಾಜಿಕ ಸಂಸ್ಥೆ ಗಳು ಅವರ ಕಲಾ ಸೇವೆಗೆ ಸದಾ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ. ಕಲೆ ಮತ್ತು ಕಲಾವಿದರನ್ನು ಬೆಳೆಸಿದಾಗ ಮಾತ್ರ ನಾಡಿನ ಸಂಸ್ಕೃತಿ, ಸಂಸ್ಕಾರಗಳು ಉಳಿದು-ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಕಾರ್ಯ ಸ್ತುತ್ಯರ್ಹ ಎಂದು ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಶಾಂತರಾಮ್‌ ಶೆಟ್ಟಿ ಅವರು ನುಡಿದರು.

ಸೆ. 25ರಂದು ಅಪರಾಹ್ನ ಘಾಟ್ಕೋಪರ್‌ ಪೂರ್ವ, ಪಂತನಗರದ ಕನ್ನಡ ವೆಲ್ಫೇರ್‌ಸೊಸೈಟಿಯ ಮಹೇಶ್‌ ಎಸ್‌. ಶೆಟ್ಟಿ (ಬಾಬಾಗ್ರೂಪ್‌) ಸಭಾಂಗಣದಲ್ಲಿ ಕನ್ನಡ ವೆಲ್ಪೇರ್‌ ಸೊಸೈಟಿ ಘಾಟ್ಕೋಪರ್‌ ಇದರ ಆಶ್ರಯದಲ್ಲಿ ಜರಗಿದ ಯಕ್ಷಗುರು, ಕಲಾ ಸಂಘಟಕ ಬಾಲಕೃಷ್ಣ ಶೆಟ್ಟಿ ಅಜೆಕಾರು ಸಂಚಾಲಕತ್ವದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸರಣಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಘಾಟ್‌ಕೋಪರ್‌ ಕನ್ನಡ ವೆಲ್ಫೆàರ್‌ ಸೊಸೈಟಿಯು ಸದಾ ಒಂದಲ್ಲ ಒಂದು ಕಾರ್ಯಕ್ರಮಗಳಿಂದ ಸಕ್ರಿಯವಾಗಿರುತ್ತದೆ. ಸಂಸ್ಥೆಯ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮಗಳು ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ನುಡಿದು ಅಜೆಕಾರು ಕಲಾಭಿಮಾನಿ ಬಳಗದ ಸರಣಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಲಿ ಎಂದು ನುಡಿದು ಶುಭಹಾರೈಸಿದರು.

ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘ ಮುಂಬಯಿ ಇದರ ಮುಖವಾಣಿ ಬಂಟರವಾಣಿಯ ಕಾರ್ಯಾಧ್ಯಕ್ಷ ರವೀಂದ್ರನಾಥ್‌ ಎಂ. ಭಂಡಾರಿ ಅವರು ಮಾತನಾಡಿ, ಮುಂಬಯಿಯಲ್ಲಿ ಕೊರೊನಾದಿಂದಾಗಿ ಒಂದುವರೆ ವರ್ಷಕ್ಕಿಂತಲೂ ಹೆಚ್ಚು ಕಾಲ ಯಕ್ಷಗಾನ ಮತ್ತು ತಾಳಮದ್ದಳೆಯನ್ನು ನೋಡದೆ ಬೇಸರವಾಗಿತ್ತು. ಇದೀಗ ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಸರಣಿ ತಾಳಮದ್ದಳೆಯನ್ನು ನಡೆಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾರೆ. ಮಹಾನಗರದಲ್ಲಿ ಜನರಿಗೆ ಯಕ್ಷಗಾನದ ಸವಿಯನ್ನು ನೀಡುತ್ತಿರುವುದು ಬಹಳ ಅಭಿನಂದನೆಯವಾದ ಕಾರ್ಯವಾಗಿದೆ. ಇದಕ್ಕೆ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.

ಇನ್ನೋರ್ವ ಗೌರವ ಅತಿಥಿ ಬಂಟರವಾಣಿಯ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಅವರು ಮಾತನಾಡಿ, ಮುಂಬಯಿಗರು ಕಲೆಯನ್ನು ಸದಾ ಪ್ರೋತ್ಸಾಹಿಸುವುದರೊಂದಿಗೆ ಊರಿನ ಯಾವುದೇ ಕಾರ್ಯಕ್ರಮಗಳಿರಲಿ ಮುಂಬಯಿಗರ ಕೊಡುಗೆ ಬಹಳಷ್ಟಿರುತ್ತದೆ. ಆದರೆ ಊರಿನಲ್ಲಿ ಯಕ್ಷಗಾನ ಅಕಾಡೆಮಿ, ತುಳು ಅಕಾಡೆಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುಂಬಯಿಗರನ್ನು ಗುರುತಿಸುವುದು ಬಹಳ ಕಡಿಮೆಯಾಗಿದೆ. ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸಬೇಕು ಎಂದು ನುಡಿದರು.

ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿಯ ಮಾಜಿ ಅಧ್ಯಕ್ಷ, ರಂಗಕರ್ಮಿ ನಾರಾಯಣ ಶೆಟ್ಟಿ ನಂದಳಿಕೆ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂಂದಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ, ಅಜೆಕಾರು ಕಲಾಭಿಮಾನಿ ಬಳಗದ ಸಂಚಾಲಕ ಅಜೆಕರು ಬಾಲಕೃಷ್ಣ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಲಾವಿದರನ್ನು ಹಾಗೂ ಕಲಾ ಪ್ರೋತ್ಸಾಹಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಕನ್ನಡ ವೆಲ್ಪೇರ್‌ ಸೊಸೈಟಿಯ ಉಪಾಧ್ಯಕ್ಷ ಜಯರಾಜ್‌ ಜೈನ್‌, ಕಾರ್ಯದರ್ಶಿ ಸುಧಾಕರ ಎಲ್ಲೂರು, ಕೋಶಾಧಿಕಾರಿ ಹರೀಶ್‌ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ದಯಾನಂದ ಶೆಟ್ಟಿ, ಜತೆ ಕೋಶಾಧಿಕಾರಿ ತಿಮ್ಮದೇವಾಡಿಗ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್‌. ಶೆಟ್ಟಿ ಪಾಲ್ಗೊಂಡಿದ್ದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು, ಸಂಸ್ಥೆಯ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ತುಳು-ಕನ್ನಡಿಗರು, ಯಕ್ಷಗಾನ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ, ಅತಿಥಿಗಳಾಗಿ ಪಾಲ್ಗೊಂಡ ಶಾಂತಾರಾಮ ಶೆಟ್ಟಿ, ರವೀಂದ್ರನಾಥ ಎಂ. ಭಂಡಾರಿ, ಅಶೋಕ್‌ ಪಕ್ಕಳ, ನಂದಳಿಕೆ ನಾರಾಯಣ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಅರ್ಥದಾರಿ ದಿನೇಶ್‌ ಶೆಟ್ಟಿ ಕಾವಳಕಟ್ಟೆ ಅವರು ನಿರ್ವಹಿಸಿದರು. ಉದ್ಘಾಟನ ಕಾರ್ಯಕ್ರಮದ ಬಳಿಕ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ತವರೂರ ನಾಮಾಂಕಿತ ಕಲಾವಿದರ ಕೂಡುವಿಕೆಯಲ್ಲಿ “ಶ್ರೀರಾಮ ಪಟ್ಟಾಭಿಷೇಕ’ ಯಕ್ಷಗಾನ ತಾಳಮದ್ದಳೆಯು ಪ್ರಸ್ತುತಗೊಂಡಿತು.

ಹಿಮ್ಮೇಳದಲ್ಲಿ ಭಾಗವತರಾಗಿ ದೇವಿಪ್ರಸಾದ್‌ ಆಳ್ವ ತಲಪಾಡಿ, ಚೆಂಡೆಯಲ್ಲಿ ಸುಬ್ರಹ್ಮಣ್ಯ ಭಟ್‌ ದೇಲಂತಮಜಲು, ಮದ್ದಳೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು ಮುಮ್ಮೇಳದಲ್ಲಿ ಅರ್ಥದಾರಿಗಳಾಗಿ ಭಾಸ್ಕರ್‌ ರೈ ಕುಕ್ಕುವಳ್ಳಿ, ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ಹರೀಶ್‌ ಭಟ್‌ ಬೊಳಂತಿಮೊಗರು, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಸದಾಶಿವ ಆಳ್ವ ತಲಪಾಡಿ ಮೊದಲಾದವರು ಭಾಗವಹಿಸಿದ್ದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಸ್ಥೆಯು ಕಲೆಗೆ ಯಾವಾಗಲೂ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಕನ್ನಡ ವೆಲ್ಫೇರ್‌ ಸೊಸೈಟಿಯಲ್ಲಿ ಸದಾ ಸಕ್ರಿಯರಾಗಿದ್ದು, ನಮಗೆಲ್ಲಾ ಯಕ್ಷಗುರುಗಳೂ ಆಗಿದ್ದಾರೆ. ಮುಂಬಯಿಯ ನೂರಾರು ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿದಂತಹ ಮಹಾನ್‌ ವ್ಯಕ್ತಿಯಾಗಿರುವ ಅವರ ಸಂಚಾಲಕತ್ವದಲ್ಲಿ ಈ ಸರಣಿ ತಾಳಮದ್ದಳೆ ಕಾರ್ಯಕ್ರಮವನ್ನು ಕನ್ನಡ ವೆಲ್ಫೆàರ್‌ ಸೊಸೈಟಿಯಲ್ಲಿ ಉದ್ಘಾಟಿಸುತ್ತಿರುವುದು ನಮಗೆ ಹೆಮ್ಮೆಯಾಗುತ್ತಿದೆ. ನಮ್ಮ ಸಂಸ್ಥೆಯು ಕಳೆದ ಐದು ದಶಕಗಳಿಂದ ನಾಡು-ನುಡಿಯನ್ನು ಬಿಂಬಿಸುವ ಕಾರ್ಯಕ್ರಮಗಳೊಂದಿಗೆ ಕಲೆ, ಕಲಾವಿದರನ್ನು ಸದಾ ಪ್ರೋತ್ಸಾಹಿಸಿ, ಗೌರವಿಸುತ್ತಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಒಂದುವರೆ ವರ್ಷಗಳ ಬಳಿಕ ಊರಿನ ಪ್ರಸಿದ್ಧ ಕಲಾವಿದರಿಂದ ಸರಣಿ ಯಕ್ಷಗಾನ ತಾಳಮದ್ದಳೆ ನಡೆಯುತ್ತಿರುವುದು ಅಭಿಮಾನ ಸಂಗತಿಯಾಗಿದೆ. ಈ ಕಾರ್ಯಕ್ರಮದ ಯಶಸ್ಸಿಗೆ ಸಂಸ್ಥೆಯ ಎಲ್ಲ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದವರು ಸಹಕರಿಸಿದ್ದು, ಅವರೆಲ್ಲರನ್ನು ಅಭಿನಂದಿಸುತ್ತಿದ್ದೇನೆ.ನವೀನ್‌ ಶೆಟ್ಟಿ ಇನ್ನಬಾಳಿಕೆ, ಅಧ್ಯಕ್ಷರು, ಕನ್ನಡ ವೆಲ್ಫೇರ್‌ ಸೊಸೈಟಿ ಘಾಟ್‌ಕೋಪರ್‌

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

51

ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ

ದಾಂಡೇಲಿ: ಲೆನಿನ್ ರಸ್ತೆಯಲ್ಲಿರುವ ಕಬ್ಬಿನ ಹಾಲಿನ ಅಂಗಡಿಯಲ್ಲಿ ಕಳ್ಳತನ

ದಾಂಡೇಲಿ: ಲೆನಿನ್ ರಸ್ತೆಯಲ್ಲಿರುವ ಕಬ್ಬಿನ ಹಾಲಿನ ಅಂಗಡಿಯಲ್ಲಿ ಕಳ್ಳತನ

15birthday

ಅದ್ದೂರಿ ಬರ್ತ್‌ಡೇ ನಿಷಿದ್ಧ

Cycle Jatha for World Folio Day

ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.