ಬಡ ಕುಟುಂಬದ ಮನೆ ನಿರ್ಮಾಣಕ್ಕೆ ನೆರವು
Team Udayavani, May 22, 2021, 12:46 PM IST
ಮುಂಬಯಿ: ಪುತ್ತೂರು ತಾಲೂಕು ಬಂಟರ ಸಂಘದ ವ್ಯಾಪ್ತಿಯ, ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಮಂಜುನಾಥ ನಗರದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಗಿರಿಜಾ ಶೆಟ್ಟಿ ಅವರ ಮನೆ ನಿರ್ಮಾಣಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು ನೀಡಲಾಯಿತು.
ಗಿರಿಜಾ ಶೆಟ್ಟಿ ಮತ್ತು ಅವರ ತಂಗಿ ಮಾನಸಿಕ ಅಸ್ವಸ್ಥೆ ರಾಜೀವಿ ಶೆಟ್ಟಿ ಅವರ ವಾಸ ಮಾಡಲು ಸಾಧ್ಯವೇ ಇಲ್ಲದ ಸ್ಥಿತಿಯಲ್ಲಿದ್ದ ಮನೆಯನ್ನು ಪುನರ್ ನಿರ್ಮಿಸುವ ಕಾರ್ಯವನ್ನು ಪುತ್ತೂರು ತಾಲೂಕು ಬಂಟರ ಸಂಘ ಕೈಕೊಂಡಿದೆ. ಮಳೆಗಾಲ ಹತ್ತಿರ ಬರುತ್ತಿದ್ದಂತೆ ಸಮಾಜದ ಬಂಟ ಸೋದರಿಯರಿಗೆ ಉಳಿದುಕೊಳ್ಳಲು ಮನೆಯ ಆವಶ್ಯಕತೆ ಇರುವುದರಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ತುರ್ತು ನೆಲೆಯಲ್ಲಿ ಪುತ್ತೂರು ಬಂಟರ ಸಂಘದ ಈ ಮಹತ್ಕಾರ್ಯಕ್ಕೆ ಕೈಜೋಡಿಸಲು ನಿರ್ಧರಿಸಿದಂತೆ ಸ್ಥಳೀಯ ಬಂಟ ಯುವಕರು ಶ್ರಮದಾನದ ಮೂಲಕ ಮನೆ ನಿರ್ಮಾಣದ ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನಿರ್ಮಾಣಗೊಳ್ಳುತ್ತಿರುವ ಮನೆಗೆ ಭೇಟಿ ನೀಡಿ ಒಕ್ಕೂಟದಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭ ಪುತ್ತೂರು ಬಂಟರ ಸಂಘದ ಪದಾಧಿಕಾರಿಗಳು ಮತ್ತು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಬಂಟರು ಸಹೃದಯಿ ದಾನಿಗಳಾಗಲಿ: ಎಸ್.ಎಂ. ಶೆಟ್ಟಿ
ಭವಾನಿ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್ ಶೆಟ್ಟಿ
ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್ ಶೆಟ್ಟಿ
ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ