ಸಮಾಜ ಸೇವಕರನ್ನು ಸಮ್ಮಾನಿಸುವುದು ಧರ್ಮ: ಡಾ| ಶೆಟಿ


Team Udayavani, Oct 5, 2019, 6:39 PM IST

mumbai-tdy-1

ಮುಂಬಯಿ, ಅ. 4: ಸಮಾಜಮುಖೀ ಚಿಂತನೆಗಳಿಂದ ನಿರಂತರವಾಗಿ ಸಮಾಜಕ್ಕಾಗಿ ನಾನು ಏನು ಮಾಡಲು ಸಾಧ್ಯ ಎಂದು ಚಿಂತಿಸುವವರು ಬಹಳ ವಿರಳ. ಆ ನಿಟ್ಟಿನಲ್ಲಿ ನಿಸ್ವಾರ್ಥವಾಗಿ ದುಡಿಯುವವರನ್ನು ಸಂಘ-ಸಂಸ್ಥೆಗಳು ಗುರುತಿಸಿ ಸಮ್ಮಾನಿಸಿದಾಗ ಅವರಿಗೆ ಪ್ರೋತ್ಸಾಹ ನೀಡಿದಾಗ ಮತ್ತಷ್ಟು ಜವಾಬ್ದಾರಿಯಿಂದ, ಉತ್ಸಾಹದಿಂದ ಅವರು ಕೆಲಸ ಮಾಡಲು ಸಾಧ್ಯವಾಗುತ್ತದೆ.

ಲಯನ್‌ ಜಯರಾಮ ಶೆಟ್ಟಿ ಅವರು ಕಳೆದ ಅನೇಕ ದಶಕಗಳಿಂದ ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿರುವುದನ್ನು ನಾವು ನೋಡುತ್ತಾ ಬಂದಿದ್ದೇವೆ. ಅವರಿಗೆ ಇಂದು ಸನ್ಮಾನ ಮಾಡಿರುವುದು ಅರ್ಥಪೂರ್ಣ ಎಂದು ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ| ಆರ್‌. ಕೆ. ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಅವರು ಅ. 2ರಂದು ತುಳು ಕನ್ನಡಿಗರ ಹಿತಚಿಂತಕರ ವೇದಿಕೆಯವರು ಆಯೋಜಿಸಿದ್ದ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ಸಂಚಾಲಕತ್ವದಲ್ಲಿ ಶ್ರೀ ಅನಂತಶಯನ ಬಂಟ ಮಹಿಳಾ ಯಕ್ಷಗಾನ ಕಲಾಮಂಡಳಿ ಕಾರ್ಕಳ ತಂಡದಿಂದ ತಾಳಮದ್ದಲೆ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದರು.

ಇನ್ನೋರ್ವ ಅತಿಥಿ ಉದ್ಯಮಿ ಕೆ. ಎಂ. ಶೆಟ್ಟಿ ಅವರು ಮಾತನಾಡಿ, ಯಕ್ಷಗಾನ ಮತ್ತು ತಾಳಮದ್ದಲೆಯನ್ನು ಮುಂಬಯಿಯಂಥ ಮಹಾನಗರದಲ್ಲಿ ತುಳು ಕನ್ನಡಿಗರು ಜೀವಂತವಾಗಿರಿಸಿರುವುದು ಅಭಿಮಾನದ ಸಂಗತಿ. ಇವತ್ತು ಈರ್ವರು ಗಣ್ಯರನ್ನು ಅವರ ಸಮಾಜಸೇವೆಯನ್ನು ಗುರುತಿಸಿ ಸಮ್ಮಾನಿಸಿರುವುದು ಖುಷಿ ತಂದಿದೆ. ಲಯನ್‌ ಜಯರಾಮ ಶೆಟ್ಟಿ ಅವರ ಕಾರ್ಯವೈಖರಿಯನ್ನು ನಾನು ಹಲವಾರು ವರ್ಷದಿಂದ ನೋಡುತ್ತಾ ಬಂದಿದ್ದೇನೆ. ಮರೋಲ್‌ ಪರಿಸರದಲ್ಲಿ ಮಾತ್ರವಲ್ಲ ಬಂಟ ಸಮುದಾಯದಲ್ಲೂ ಅವರು ತಮ್ಮನ್ನು ತಾವು ತೊಡಗಿಸಿಕೊಂಡು ನಿರಂತರವಾಗಿ ಸೇವೆಯನ್ನು ಸಲ್ಲಿಸಿದವರು ಎಂದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಲಯನ್‌ ಜಯರಾಮ ಶೆಟ್ಟಿ ಅವರು ನನ್ನ ಸಮಾಜಮುಖೀ ಚಿಂತನೆಗಳನ್ನು ಗುರುತಿಸಿ ಇಂದಿನ ದಿನ ತುಳು ಕನ್ನಡಿಗರ ಹಿತಚಿಂತಕರ ವೇದಿಕೆಯಲ್ಲಿ ಮಾಡಿದ ಸಮ್ಮಾನವನ್ನು ಸ್ವೀಕರಿಸಿ ಧನ್ಯನಾಗಿದ್ದೇನೆ. ಅನಿವಾರ್ಯ ಕಾರಣದಿಂದ ನಾನು ಹುಟ್ಟೂರಿನತ್ತ ಮುಖ ಮಾಡಿದ್ದರೂ ತಮ್ಮೆಲ್ಲರ ಪ್ರೀತಿಯನ್ನು ಹೊತ್ತುಕೊಂಡು ಹೋಗುತ್ತಿದ್ದೇನೆ ಎಂದು ನುಡಿದರು.

ವೇದಿಕೆಯಲ್ಲಿ ಉದ್ಯಮಿ ಸಮಾಜ ಸೇವಕ ಅಪ್ಪಣ್ಣ ಶೆಟ್ಟಿ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಸುಭಾಸ್‌ ಶೆಟ್ಟಿ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ನ್ಯಾಯವಾದಿ ರತ್ನಾಕರ ಶೆಟ್ಟಿ, ನ್ಯಾಯವಾದಿ ಗುಣಕರ ಶೆಟ್ಟಿ, ಪೊವಾಯಿ ಕನ್ನಡ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ಡಿ. ಕೆ. ಶೆಟ್ಟಿ, ಪೊವಾಯಿ ಕನ್ನಡ ಸಂಘದ ಅಧ್ಯಕ್ಷರಾದ ಅಶೋಕ್‌ ಶೆಟ್ಟಿ, ಸಾಂತೂರು, ಲಯನ್‌ ಶೋಭಾ ಶಂಕರ ಶೆಟ್ಟಿ, ಉದ್ಯಮಿ ಶಂಕರ ಶೆಟ್ಟಿ, ರಂಗನಟ ಭಾಸ್ಕರ ಸುವರ್ಣ ಸಸಿಹಿತ್ಲು, ಉದ್ಯಮಿ ವೇಣುಗೋಪಾಲ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಸಾಹಿತಿ, ರಂಗನಟ, ಸಂಘಟಕ ಪೇತ್ರಿ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.