Udayavni Special

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನಿಂದ ಸಾಧಕರಿಗೆ ಸಮ್ಮಾನ


Team Udayavani, Jul 28, 2019, 3:36 PM IST

mumbai-tdy-1

ನವಿ ಮುಂಬಯಿ, ಜು. 27: ನಗರದ ಪ್ರತಿಷ್ಠಿತ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಶಿಕ್ಷಣ ಸಮಿತಿಯ ವತಿಯಿಂದ 2019-2020ನೇ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಕಾರ್ಯಕ್ರಮವು ಜು. 21ರಂದು ಪೂರ್ವಾಹ್ನ 10.30ರಿಂದ ಜೂಯಿನಗರ ಪಶ್ಚಿಮದ ಗಾಂವ್ದೇವಿ ಚೌಕ್‌ ಸಮೀಪದ ಪ್ಲಾಟ್ ನಂಬರ್‌ 42, ಬಂಟ್ಸ್‌ ಸೆಂಟರ್‌ನ ಶಶಿಕಲಾ ಮನ್‌ಮೋಹನ್‌ ಶೆಟ್ಟಿ ಕಾಂಪ್ಲೆಕ್ಸ್‌ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಬಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ ಮತ್ತು ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಾಧಕರು ಮತ್ತು ದಾನಿಗಳಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ವಿಶ್ವಸ್ತ ರಘುರಾಮ ಕೆ. ಶೆಟ್ಟಿ, ಫೆಸ್ಟ್‌ ಮೋರ್ಟಂ ಪ್ರೈವೇಟ್ ಲಿಮಿಟೆಡ್‌ ಇದರ ಸಿಎಂಡಿ ಜಯರಾಮ ಪಿ. ಶೆಟ್ಟಿ, ಭಾರತ್‌ ಕೋಚ್ ಬಿಲ್ಡರ್‌ನ ಸದಾಶಿವ ಎಸ್‌. ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ಮತ್ತು ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು. ಸಮ್ಮಾನಿತರು ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜಾಸ್ಮಿನ್‌ ಗ್ರೂಪ್‌ ಆಫ್‌ ಕಂಪೆನಿಯ ಸಿಎಂಡಿ ಡಾ| ಸುರೇಂದ್ರ ವಿ. ಶೆಟ್ಟಿ, ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಸುಧಾಕರ ಎಸ್‌. ಹೆಗ್ಡೆ, ಹೊಟೇಲ್ ಕೃಷ್ಣ ಪ್ಯಾಲೇಸ್‌ನ ಸಿಎಂಡಿ ಕೃಷ್ಣ ವೈ. ಶೆಟ್ಟಿ, ಉದ್ಯಮಿ ಶಿವರಾಮ ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಜಯ ಕೆ. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ವಿಶ್ವಸ್ತ ರಘುರಾಮ ಕೆ. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಶ್ಯಾಮ್‌ಸುಂದರ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾರದಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್‌ ಆರ್‌. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ವಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷೆ ಸರಳಾ ಬಿ. ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಸ್ತುತ ವರ್ಷ 1000 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಶಿಕ್ಷಕಿ ಅಮೃತಾ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸುರೇಂದ್ರ ಶೆಟ್ಟಿ ವಂದಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ-ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು ಸಹಕರಿಸಿದರು. ಸಮಾಜ ಬಾಂಧವರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

“ಜಂಗಲ್‌ರಾಜ್‌ ಯುವರಾಜ’

“ಜಂಗಲ್‌ರಾಜ್‌ ಯುವರಾಜ’; ಮಹಾಘಟಬಂಧನ್‌ ಸಿಎಂ ಅಭ್ಯರ್ಥಿ ತೇಜಸ್ವಿ ವಿರುದ್ಧ ಮೋದಿ ವಾಗ್ಬಾಣ

ಕ್ರೆಡಿಟ್‌ ಕಾರ್ಡ್‌ಗಿಲ್ಲ ಚಕ್ರಬಡ್ಡಿ

ಕ್ರೆಡಿಟ್‌ ಕಾರ್ಡ್‌ಗಿಲ್ಲ ಚಕ್ರಬಡ್ಡಿ

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

ಮಾರ್ಕೆಟಿಂಗ್‌ ಯುವಕನೀಗ ಭತ್ತ ಬೆಳೆಯುವ ಕೃಷಿಕ

ಮಾರ್ಕೆಟಿಂಗ್‌ ಯುವಕನೀಗ ಭತ್ತ ಬೆಳೆಯುವ ಕೃಷಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೈವ-ದೇವರ ಅನುಗ್ರಹದಿಂದ ನೆಮ್ಮದಿಯ ಜೀವನ ಸಾಧ್ಯ’

ದೈವ-ದೇವರ ಅನುಗ್ರಹದಿಂದ ನೆಮ್ಮದಿಯ ಜೀವನ ಸಾಧ್ಯ’

Mumbai-tdy-1

ಡೊಂಬಿವಲಿ ಪಶ್ಚಿಮ ಶ್ರೀ ಜಗದಂಬಾ ಮಂದಿರ: ರಂಗಪೂಜೆ

Mumbai-tdy-1

ಧಾರ್ಮಿಕ ಆಚರಣೆಗಳಿಗೂ ಆದ್ಯತೆ: ಸಂತೋಷ್‌ ಶೆಟ್ಟಿ

MUMBAI-TDY-1

ಪಲಿಮಾರು ಶ್ರೀಗಳ ಚಿಂತನೆಗಳಿಗೆ ಕೈಜೋಡಿಸೋಣ: ಸಚ್ಚಿದಾನಂದ ರಾವ್‌

0000

ಶ್ರೀ ಮಹಾವಿಷ್ಣು ದೇವಸ್ಥಾನದ ಜ್ಞಾನ ಮಂದಿರ: ಶರನ್ನವರಾತ್ರಿ ಮಹೋತ್ಸವ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಅರ್ಹ ಸಾಧಕರಿಗೆ ಗೌರವ

ಅರ್ಹ ಸಾಧಕರಿಗೆ ಗೌರವ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

ಸೇವೆಯೆಂಬ ಯಜ್ಞಕ್ಕೆ ಸಂದ ಫ‌ಲ

“ಜಂಗಲ್‌ರಾಜ್‌ ಯುವರಾಜ’

“ಜಂಗಲ್‌ರಾಜ್‌ ಯುವರಾಜ’; ಮಹಾಘಟಬಂಧನ್‌ ಸಿಎಂ ಅಭ್ಯರ್ಥಿ ತೇಜಸ್ವಿ ವಿರುದ್ಧ ಮೋದಿ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.