ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಸಮಿತಿ: ಸಾಧಕರಿಗೆ ಸಮ್ಮಾನ

Team Udayavani, Jul 10, 2018, 4:27 PM IST

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ  ಸಾಧಕ ಪ್ರತಿಭೆಗಳಾದ ಶ್ರದ್ಧಾ ಬಂಗೇರ ಮತ್ತು ಮನಸ್‌ ಬಂಗೇರ ಅವರಿಗೆ ಸಮ್ಮಾನ ಕಾರ್ಯಕ್ರಮವು ಜು. 5 ರಂದು ಸ್ಥಳೀಯ ಸಮಿತಿಯ ಸಭಾಗೃಹದಲ್ಲಿ ನಡೆಯಿತು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಯುವಾಭ್ಯುದಯ ಸಮಿತಿಯ ವತಿಯಿಂದ ಜು. 1 ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ  ಆಯೋಜಿಸಿದ್ದ  ವಾಯ್ಸ… ಆಫ್‌ ಬಿಲ್ಲವ’ ಸಂಗೀತ ಸ್ಪರ್ಧೆಯಲ್ಲಿ ಶ್ರದ್ದಾ ಬಂಗೇರ ಅವರು  16 ರಿಂದ 30 ವರ್ಷದೊಳಗಿನವರ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದರೆ, ಮನಸ್‌ ಬಂಗೇರ ಅವರು 16 ವರ್ಷದೊಳಗಿನವರ ವಿಭಾಗದಲ್ಲಿ  ತೃತೀಯ ಬಹುಮಾನ ಪಡೆದಿದ್ದರು. ಈ ಇಬ್ಬರೂ ಪ್ರತಿಭೆಗಳು ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಸಮಿತಿಯ ಯುವ ವಿಭಾಗದ ಸದಸ್ಯರಾಗಿದ್ದಾರೆ.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಡೊಂಬಿವಲಿ ಸ್ಥಳೀಯ ಸಮಿತಿಯ ಮಾಜಿ ಕಾರ್ಯದಕ್ಷ ರವಿ ಸನಿಲ…, ಉಪ ಕಾರ್ಯಾಧ್ಯಕ್ಷ ಸಿ. ಎನ್‌. ಕರ್ಕೇರ, ಗೌರವ ಕಾರ್ಯದರ್ಶಿ ಪುರಂದರ ಪೂಜಾರಿ, ಗೌರವ ಕೋಶಾಧಿಕಾರಿ  ಲಲಿತ್‌ ಚಂದ್ರ ಸುವರ್ಣ ಅವರು 

ಸಾಧಕರನ್ನು ಶಾಳು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.  
ಯವ ವಿಭಾಗದ ಸದಸ್ಯರು ಹಾಗೂ ಮಹಿಳಾ ವಿಭಾಗದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ