ಬಿಲ್ಲವ ಭವನದಲ್ಲಿ ಗುರುಪೂಜೆ, ಅಧ್ಯಕ್ಷರಿಗೆ ಅಭಿನಂದನೆ
Team Udayavani, Jul 22, 2018, 3:44 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ವತಿಯಿಂದ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಗುರುಪೂಜೆಯನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಚಂದ್ರಶೇಖರ ಎಸ್. ಪೂಜಾರಿ ಇವರನ್ನು ಮಹಾಪ್ರಸಾದವನ್ನಿತ್ತು ರಾಷ್ಟ್ರೀಯ ಬಿಲ್ಲವ ಮಹಾಮಂಡಳದ ಅಧ್ಯಕ್ಷ, ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರು ಗೌರವಿಸಿ ಅಭಿನಂದಿಸಿ ಶುಭಹಾರೈಸಿದರು.
ಧಾರ್ಮಿಕ ಕಾರ್ಯಕ್ರಮವಾಗಿ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳಾದ ಎಲ್. ವಿ. ಅಮೀನ್, ನಿತ್ಯಾನಂದ ಡಿ. ಕೋಟ್ಯಾನ್, ಪ್ರಸ್ತುತ ಉಪಾಧ್ಯಕ್ಷರುಗಳಾದ ಶಂಕರ್ ಡಿ. ಪೂಜಾರಿ, ಹರೀಶ್ ಜಿ. ಅಮೀನ್, ದಯಾನಂದ್ ಪೂಜಾರಿ, ಶ್ರೀನಿವಾಸ ಆರ್. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ, ಜೊತೆ ಕಾರ್ಯದರ್ಶಿಗಳಾದ ಹರೀಶ್ ಜಿ. ಸಾಲ್ಯಾನ್, ಕೇಶವ ಕೆ. ಕೋಟ್ಯಾನ್, ರವೀಂದ್ರ ಎ. ಅಮೀನ್, ಧರ್ಮೇಶ್ ಸಾಲ್ಯಾನ್, ಗೌರವ ಕೋಶಾಧಿಕಾರಿ ರಾಜೇಶ್ ಎ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವರದ ಉಳ್ಳಾಲ್, ಯುವ ವಿಭಾಗದ ಕಾರ್ಯಾಧ್ಯಕ್ಷ ನಾಗೇಶ್ ಎಂ. ಕೋಟ್ಯಾನ್, ಮಾಜಿ ಕಾರ್ಯದರ್ಶಿ ಧರ್ಮಪಾಲ್ ಜಿ. ಅಂಚನ್, ಮಾಜಿ ಉಪಾಧ್ಯಕ್ಷ ಪುರುಷೋತ್ತಮ ಕೋಟ್ಯಾನ್ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ