ಬಿಲ್ಲವ ಸೇವಾ ಸಂಘ ಮುಂಬಯಿ: 30ನೇ ವಾರ್ಷಿಕೋತ್ಸವಕ್ಕೆ ಚಾಲನೆ

Team Udayavani, Sep 6, 2018, 4:24 PM IST

ಮುಂಬಯಿ: ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ 30 ನೇ ವಾರ್ಷಿಕೋತ್ಸವ ಸಂಭ್ರಮವು ಸೆ. 2 ರಂದು ಬೆಳಗ್ಗೆ 9 ರಿಂದ ಇಂದುಲಾಲ್‌ ಡಿ. ಭುವಾ ಮಾರ್ಗ ವಡಾಲ ಪಶ್ಚಿಮದ ಎನ್‌ಕೆಇಎಸ್‌ ಹೈಸ್ಕೂಲ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಅಧ್ಯಕ್ಷ ಸೂರ್ಯ ಎಸ್‌. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಗೌರವಾಧ್ಯಕ್ಷ ಸುರೇಶ್‌ ಎಸ್‌. ಪೂಜಾರಿ ಇವರು ಉದ್ಘಾಟಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಬಿಲ್ಲವ ಶಿರೂರು, ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ ಅಧ್ಯಕ್ಷ ಎನ್‌. ಟಿ. ಪೂಜಾರಿ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿಸ್‌ ಇದರ ನಿರ್ದೇಶಕ ಭರತ್‌ ಎಸ್‌. ಪೂಜಾರಿ ಉಪಸ್ಥಿತರಿದ್ದರು.

ಗುರುಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸದಸ್ಯರು ಮತ್ತು ಮಕ್ಕಳಿಂದ ಗಾನ ನೃತ್ಯ ವೈಭವ ನೆರವೇರಿತು.

ಸಂಘದ ಗೌರವಾಧ್ಯಕ್ಷ ಸುರೇಶ್‌ ಎಸ್‌. ಪೂಜಾರಿ, ಅಧ್ಯಕ್ಷ ಸೂರ್ಯ ಎಸ್‌. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಶಂಕರ ಎಂ. ಪೂಜಾರಿ, ಉಪಾಧ್ಯಕ್ಷ ಎನ್‌. ಎಂ. ಬಿಲ್ಲವ, ಜತೆ ಕಾರ್ಯದರ್ಶಿಗಳಾದ ರಂಗ ಎಸ್‌. ಪೂಜಾರಿ, ಸುಶೀಲಾ ಆರ್‌. ಪೂಜಾರಿ, ಜೊತೆ ಕೋಶಾಧಿಕಾರಿಗಳಾದ ಶ್ರೀಧರ ವಿ. ಪೂಜಾರಿ, ರಮೇಶ್‌ ಜಿ. ಬಿಲ್ಲವ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಆರ್‌. ಪೂಜಾರಿ, ಕಾರ್ಯದರ್ಶಿ ಯಶೋದಾ ಎಸ್‌. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ್‌ ಪೂಜಾರಿ ಕೊಡೇರಿ, ಕಾರ್ಯದರ್ಶಿ ಜಯಶ್ರೀ ಎ. ಕೋಡಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್‌ ಎನ್‌. ಪೂಜಾರಿ, ಕಾರ್ಯದರ್ಶಿ ಅಶೋಕ್‌ ಎಂ. ಪೂಜಾರಿ, ಭಜನ ಮಂಡಳಿಯ ಸಂಚಾಲಕಿ ಸುಶೀಲಾ ಎಸ್‌. ಪೂಜಾರಿ ಹಾಗೂ ಆಡಳಿತ ಮಂಡಳಿ, ಉಪಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು. 
ಚಿತ್ರ-ವರದಿ : ಸುಭಾಷ್‌ ಶಿರಿಯಾ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ