ಬಿಲ್ಲವರ ಅಸೋಸಿಯೇಶನ್‌ ಕಾಂದಿವಲಿ:ಸಾಧಕರಿಗೆ ಸಮ್ಮಾನ

Team Udayavani, Dec 31, 2017, 3:36 PM IST

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಇದರ ಕಾಂದಿವಲಿ ಸ್ಥಳೀಯ ಸಮಿತಿಯ ವತಿಯಿಂದ ಅಂತರ್‌ಸ್ಥಳೀಯ ಕಚೇರಿ ನೃತ್ಯ ಸ್ಪರ್ಧೆಯು ಡಿ. 17ರಂದು  ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಜರಗಿತು.

ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರ ಉಪಸ್ಥಿತಿಯಲ್ಲಿ, ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ಸಂಜೆ ನಡೆದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿ ಮುಂಬಯಿ ಮಹಾನಗರ ಪಾಲಿಕೆಯ ಮಹಾಪೌರ ಪ್ರೊ| ವಿಶ್ವನಾಥ ಮಹಾದೇಶ್ವರ್‌, ಗೌರವ ಅತಿಥಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.

ಅಲ್ಲದೆ ಕಾಂದಿವಲಿಯ ನೂತನ ಕಚೇರಿಯ ಸ್ಥಾಪನೆಗೆ ಹೆಚ್ಚಿನ ಶ್ರಮ ವಸಿಸಿದ ಮಾಜಿ ಕಾರ್ಯಾಧ್ಯಕ್ಷ, ಭಾರತ್‌ ಬ್ಯಾಂಕಿನ ನಿರ್ದೇಶಕ ಗಂಗಾಧರ ಜೆ. ಪೂಜಾರಿ ದಂಪತಿ, ಸಮಿತಿಯ ಮಾರ್ಗದರ್ಶರಾಗಿ ಕಾರ್ಯ ನಿರ್ವಹಿಸಿದ ಅಸೋಸಿಯೇಶನ್‌ನ ಉಪಾಧ್ಯಕ್ಷ ಶಂಕರ ಡಿ. ಪೂಜಾರಿ, ರಂಗನಟ, ನಿರ್ದೇಶಕ ಲತೇಶ್‌ ಪೂಜಾರಿ ದಂಪತಿಯನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.

ವೇದಿಕೆಯಲ್ಲಿ ಭಾರತ್‌ ಬ್ಯಾಂಕಿನ ಮಾಜಿ ಕಾರ್ಯಾಧ್ಯಕ್ಷ ವಾಸುದೇವ ಆರ್‌. ಕೋಟ್ಯಾನ್‌, ಬಿಲ್ಲವರ ಅಸೋಸಿಯೇಶನ್‌ ನಿಕಟಪೂರ್ವ ಅಧ್ಯಕ್ಷ ಎಲ್‌. ವಿ. ಅಮೀನ್‌, ಬಿಲ್ಲವ  ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂvಸ್ಟ್ರೀ ಇದರ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ಗುಜರಾತ್‌ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್‌ ಸಿ. ಪೂಜಾರಿ, ಹೊಟೇಲ್‌ ಉದ್ಯಮಿ ಹರೀಶ್‌ ಜಿ. ಅಮೀನ್‌, ಸಮಾಜ ಸೇವಕಿ, ಉದ್ಯಮಿ ಶಾರದಾ ಎಸ್‌. ಕರ್ಕೇರ, ಪುರೋಹಿತ-ಜ್ಯೋತಿಷರು ಎಂ. ಜೆ. ಪ್ರವೀಣ್‌ ಭಟ್‌, ಭಾರತ್‌ ಬ್ಯಾಂಕಿನ ನಿರ್ದೇಶಕ ಗಂಗಾಧರ ಜೆ. ಪೂಜಾರಿ, ಕಾಂದಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಯೋಗೇಶ್‌ ಹೆಜ್ಮಾಡಿ, ಗೌರವಾಧ್ಯಕ್ಷ ಭಾಸ್ಕರ ಎಂ. ಪೂಜಾರಿ, ಕಾರ್ಯದರ್ಶಿ ಉಮೇಶ್‌ ಸುರತ್ಕಲ್‌, ಕೋಶಾಧಿಕಾರಿ ರಮೇಶ್‌ ಬಂಗೇರ, ಕೇಂದ್ರ ಕಚೇರಿಯ ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌, ಗೌರವ ಕೋಶಾಧಿಕಾರಿ ಮಹೇಶ್‌ ಸಿ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ದಾಸ್‌ ಜಿ. ಪೂಜಾರಿ, ಗೌರವ ಕಾರ್ಯದರ್ಶಿ ರವೀಂದ್ರ ಎ. ಶಾಂತಿ, ಕೇಂದ್ರ ಕಚೇರಿಯ ಪ್ರತಿನಿಧಿ ಭಾಸ್ಕರ ಎ. ಬಂಗೇರ, ಶಂಕರ ಡಿ. ಪೂಜಾರಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕಾಂದಿವಲಿ ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ