ಸಮಸ್ಯೆ ಪ‌ರಿಹಾರಕ್ಕೆ ಸುಲಭ ಮಾರ್ಗ ಕಂಡುಕೊಳ್ಳುವುದು ಅಗತ್ಯ


Team Udayavani, Aug 29, 2017, 3:29 PM IST

28mum08A.jpg

ಮುಂಬಯಿ: ಸಮಾಜದಲ್ಲಿ ಸಂಸ್ಕೃತಿ, ಸಂಸ್ಕಾರದ ಕೊರತೆ ಮತ್ತು ಕಾನೂನಿನ ಅರಿವಿಲ್ಲದೆ ಜನಸಾಮಾನ್ಯರು ಮನಬಂದಂತೆ ವರ್ತಿಸಿ, ಅನಂತರ ಜೀವನದಲ್ಲಿ ಸಿಕ್ಕಿಹಾಕಿಕೊಂಡು ಪರದಾಡುತ್ತಾರೆ. ನ್ಯಾಯಾಂಗದ ಬಾಗಿಲು ಹತ್ತದೆ ನಮ್ಮ ಸಮಸ್ಯೆಗಳಿಗೆ ಪರಿಹಾರದ ಸೂಕ್ತ ಮಾರ್ಗ ಯಾವುದೆಂದು ಕಂಡು ಹುಡುಕಿಕೊಳ್ಳುವುದು ಇಂದಿನ ದಿನಗಳಲ್ಲಿ ಬಹಳ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಳೆದ  ಅನೇಕ ವರ್ಷಗಳಿಂದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಕಾನೂನು ಮತ್ತು ಸಂವಿಧಾನ ಸಮಿತಿ ಈ ಕಾನೂನು ಸಲಹಾ ಶಿಬಿರ ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಏರ್ಪಡಿಸಿ ಜನಸಾಮಾನ್ಯರಿಗೆ ಮಾರ್ಗದರ್ಶನ ನೀಡುತ್ತಿದೆ. ಇಂತಹ ಅತ್ಯಗತ್ಯದ ಶಿಬಿರಗಳನ್ನು ನಗರದ ಇತರ ಸಂಘ-ಸಂಸ್ಥೆಗಳು ಏರ್ಪಡಿಸುವುದಕ್ಕೆ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಬಂಟ್ಸ್‌ ನ್ಯಾಯ ಮಂಡಳಿಯ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ನುಡಿದರು.

ಆ. 19ರಂದು ಸಂಜೆ ಸಾಯನ್‌ನ ಸ್ವಾಮಿ ವಿವೇಕಾನಂದ ಸಭಾಗೃಹದಲ್ಲಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ನ ಕಾನೂನು ಮತ್ತು ಸಂವಿಧಾನ ಉಪಸಮಿತಿಯ ಕಾರ್ಯಾಧ್ಯಕ್ಷ ಡಿ. ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಆಯೋಜಿಸಲ್ಪಟ್ಟ ಕಾನೂನು ಸಲಹಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೀಪ ಪ್ರಜ್ವಲಿಸಿ ಶಿಬಿರವನ್ನು ಸಾಂಕೇತಿಕವಾಗಿ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ವಿವಾಹ ವಿಚ್ಛೇದನ ಮತ್ತು ಕೌಟುಂಬಿಕ ಆಸ್ತಿ ವಿವಾದಗಳು ಹೆಚ್ಚಾಗುವುದಕ್ಕೆ ನಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರದ ಕೊರತೆಯೇ ಪ್ರಮುಖ ಕಾರಣ ಎಂದರು.

ಕಾನೂನು ಮತ್ತು ಸಂವಿಧಾನ ಉಪಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಡಿ.ಕೆ. ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ, ಯುವ ಪೀಳಿಗೆಯು ದಾರಿ ತಪ್ಪಿ ಹೋಗದಂತೆ ಎಚ್ಚರಿಕೆಯ ಘಂಟೆ ಎಂಬಂತೆ ಈ ಶಿಬಿರವನ್ನು ಏರ್ಪಡಿಸಿದ್ದೇವೆ. ಜೊತೆಗೆ ಹಿರಿಯರು ಪತ್ನಿ, ಮಕ್ಕಳ ಅಥವಾ ರಕ್ತ ಸಂಬಂಧಿಗಳ ನಡುವೆ ಭಿನ್ನಾಭಿಪ್ರಾಯ ಉದ್ಭವ ಆಗದಂತೆ ನೋಡಿಕೊಳ್ಳಬೇಕಾದ ಪ್ರಾಮುಖ್ಯ ವಿಷಯಗಳ ಬಗ್ಗೆ ಮಾಹಿತಿಯನ್ನು ಒದಗಿಸಿಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಮನೆ ಮಂದಿಗಳ ನಡುವಿನ ಸಂಬಂಧ ಖಾಯಂ ಆಗಿ ಉಳಿಯಬೇಕು. ವೈವಾಹಿಕ ಸಂಬಂಧ ಜೀವನ ಪರ್ಯಂತ ಉಳಿಯಬೇಕು. ಸಮಾಜ ಬೆಳೆದು ನಿಂತು ಇತರರಿಗೆ ಆದರ್ಶ ಸಮಾಜವೆಂದು ಗುರುತಿಸಿಕೊಳ್ಳುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಸಮಾಜರಹಿತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಚಿರಋಣಿ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಅಸೋಸಿಯೇಶನ್‌ನ ಅಧ್ಯಕ್ಷ  ನ್ಯಾಯವಾದಿ ಉಪ್ಪೂರು ಶೇಖರ್‌ ಶೆಟ್ಟಿ ಅವರು ಮಾತನಾಡಿ, ನಮ್ಮ ಸಮಾಜದ ಜನರಲ್ಲಿ ಯಮ್ಮ ಕಠಿಣ ಪರಿಶ್ರಮ ಮತ್ತು ದೈವ ದೇವರ ಅನುಗ್ರಹ ಹಾಗೂ ವ್ಯವಹಾರದ ಜ್ಞಾನ ಭಂಡಾರ ಇರುವುದರಿಂದ ಶ್ರೀಮಂತಿಕೆ ಮೈಗೂಡಿಸಿಕೊಂಡಿದೆ. ಆದರೆ, ಕಾನೂನು, ಸಂಸ್ಕಾರ, ಸಂಸ್ಕೃತಿಯ ಅರಿವು ಸ್ವಲ್ಪ ಕಡಿಮೆ ಇರುವುದರಿಂದ ನಾವು ಕೆಲವೊಮ್ಮೆ ಹೆಜ್ಜೆ ತಪ್ಪುತ್ತೇವೆ. ನಮ್ಮ ಸಮಾಜ ಹೆಜ್ಜೆ ತಪ್ಪಬಾರದು. ಅಡಿಪಾಯ ಗಟ್ಟಿಯಾಗಿರಬೇಕು. ಹಿರಿಯರು, ಯುವಕರು, ಯುವತಿಯರು ಮತ್ತು ಮಹಿಳೆಯರು ಎಲ್ಲರನ್ನು ಒಂದೇ ಕಡೆ ಒಟ್ಟುಗೂಡಿಸಿ ಕಾನೂನು ಸಲಹಾ ಶಿಬಿರ ಎಂಬ ಆಶ್ರಯದ ನೆರಳನ್ನು ನೀಡುವ ಪ್ರಯತ್ನವನ್ನು ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಡುತ್ತಾ ಬಂದಿದೆ. ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸದಸ್ಯರು ಮಾತ್ರವಲ್ಲದೆ ಇನ್ನಿತರ ಸಮಾಜ ಬಾಂಧವರು ಸ್ಪಂದಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಉಮಾ ಕೆ. ಶೆಟ್ಟಿ ಮತ್ತು ಗೀತಾ ಡಿ. ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಅತಿಥಿಗಳು ಅಧ್ಯಕ್ಷಕರು ದೀಪ ಪ್ರಜ್ವಲಿಸಿ ಚಾಲನೆ ನೀಡಿದ ಈ ಶಿಬಿರದಲ್ಲಿ ನಗರದ ಖ್ಯಾತ ವಕೀಲರು ಮಾತ್ರವಲ್ಲದೆ, ಸಾಮಾಜಿಕ ಚಿಂತಕರೂ ಆಗಿರುವ ನಚಿಕೇತ್‌ ಡಿ. ಜಯವಂತ್‌ ಅವರು ಉಪನ್ಯಾಸ ನೀಡುತ್ತಾ, ಜನಸಾಮಾನ್ಯರು ಆರೋಗ್ಯದ ಬಗ್ಗೆ ಯಾವ ಯಾವ ರೀತಿಯಲ್ಲಿ ನಿರ್ಲಕ್ಷé ವಹಿಸುತ್ತಾರೆ. ಅದರಿಂದಾಗುವ ದುಷ್ಪರಿಣಾಮಗಳೇನೆಂಬುದರ ಬಗ್ಗೆ, ಮೂಲ ಅಪರಾಧ ಮತ್ತು ಬಾಲ ಅಪರಾಧ ಮತ್ತದರ ಕಾನೂನು ಕ್ರಮ ಏನು ? ಮತ್ತು ಹೇಗೆಂಬುದರ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಇನ್ನೋರ್ವ ವಕೀಲ ಅಡ್ವೊಕೇಟ್‌ ಕೆ. ಬಾಲಕೃಷ್ಣ ಅಡ್ಯಂತಾಯ ಅವರು ಉಪನ್ಯಾಸ ನೀಡುತ್ತ, ಇಂದಿನ ದಿನಗಳಲ್ಲಿ ವಿವಾಹ ಸಂಬಂಧದ ತಕರಾರು, ಕೌಟುಂಬಿಕ ಆಸ್ತಿ ವಿವಾದಗಳು ಹೆಚ್ಚಾಗುವುದಕ್ಕೆ ಕಾರಣಗಳೇನು ? ಹಾಗೂ ಅದರ ಪರಿಹಾರ ಮಾರ್ಗ ಯಾವುದೆಂಬುದರ ಬಗ್ಗೆ ಹತ್ತಾರು ಉದಾಹರಣೆಗಳನ್ನು ನೀಡಿ, ನ್ಯಾಯಾಲಯದ ಮೆಟ್ಟಿಲು ಹತ್ತದೆ, ನಮ್ಮ ನಮ್ಮೊಳಗೆ ಹೊಂದಾಣಿಕೆ ಮಾಡಿಕೊಂಡು ಇತ್ಯರ್ಥಗೊಳಿಸುವುದು ಸೂಕ್ತ ಮಾತ್ರವಲ್ಲದೆ, ಅರೋಗ್ಯಕರ ಎಂದು ತಿಳಿಸಿದರು.

ಉಪನ್ಯಾಸಕರನ್ನು, ಅತಿಥಿಯನ್ನು, ಅಧ್ಯಕ್ಷರು ಮತ್ತು  ಪದಾಧಿಕಾರಿಗಳು ಹೂಗುತ್ಛ ನೀಡಿ ಗೌರವಿಸಿದರು.

ಯುವ ವಿಭಾಗದ ಕಾರ್ಯಾಧ್ಯಕ್ಷೆ ವೈಶಾಲಿ ಎಚ್‌. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್‌ ಎಸ್‌. ಶೆಟ್ಟಿ, ಮಾಜಿ ಅಧ್ಯಕ್ಷ ಎನ್‌. ಸಿ. ಶೆಟ್ಟಿ ಅವರು ಉಪನ್ಯಾಸಕರು ಮತ್ತು ಅತಿಥಿ ಗಣ್ಯರ ಪರಿಚಯ ಮಾಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಅಡ್ವೊಕೇಟ್‌ ಸುಭಾಷ್‌ ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಜೆ. ಶೆಟ್ಟಿ ಉಪಸ್ಥಿತರಿದ್ದರು. ಅಡ್ವೊಕೇಟ್‌ ಅಶೋಕ್‌ ಡಿ. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.