ಬಂಟರ ಸಂಘ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿ: ಸಾಧಕರಿಗೆ ಸಮ್ಮಾನ
Team Udayavani, Apr 14, 2021, 9:45 AM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಅಡಿಟೋರಿಯಂನಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಶಾಲು ಹೊದೆಸಿ, ಪೇಟ ತೊಡಿಸಿ ಅಧಿಕಾರ ಹಸ್ತಾಂತರಿಸಲಾಯಿತು. ಹಾಗೆಯೇ ನಿರ್ಗಮನ ಸದಸ್ಯರನ್ನು ಗೌರವಿಸಲಾಯಿತು. ಮಾಜಿ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ ಮತ್ತು ಅಧಿಕಾರ ಸ್ವೀಕರಿಸಿದ ನೂತನ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ದಂಪತಿಗಳನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಈ ಮೂರು ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಗುಣಪಾಲ್ ಶೆಟ್ಟಿ ಐಕಳ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್ ಶೆಟ್ಟಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್ ಡಿ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಿವರಾಮ ಎನ್. ಶೆಟ್ಟಿ, ನಿರ್ಗಮನ ಅಧ್ಯಕ್ಷ ನಲ್ಯಗುತ್ತು ಪ್ರಕಾಶ್ ಟಿ. ಶೆಟ್ಟಿ, ಉಪಸ್ಥಿತರಿದ್ದರು.
ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಸುಚಿತಾ ಕೆ. ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷೆ ಅನಿತಾ ಅಶೋಕ್ ಶೆಟ್ಟಿ, ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಸಾಗರ್ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಪ್ರತೀಕ್ ಶೆಟ್ಟಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಸಂಗೀತಾ ಶೆಟ್ಟಿ, ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ವಿಕಾಸ್ ರೈ, ನಿರ್ಗಮನ ಕಾರ್ಯಾಧ್ಯಕ್ಷ ತಾರಾನಾಥ ಶೆಟ್ಟಿ ಮತ್ತು ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಡಾ| ಆರ್. ಕೆ. ಶೆಟ್ಟಿ, ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ವಜ್ರಾ ಕೆ. ಪೂಂಜಾ, ನಿರ್ಗಮನ ಕಾರ್ಯಾಧ್ಯಕ್ಷೆ ವನಿತಾ ನೋಂಡ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿಷೇಕ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು