ಬಂಟರ ಸಂಘ ಮುಂಬಯಿ: ವಿವಿಧ ಪ್ರಾದೇಶಿಕ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ
Team Udayavani, Apr 1, 2021, 11:16 AM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಂಧೇರಿ-ಬಾಂದ್ರಾ ಮತ್ತು ಸಿಟಿ ಪ್ರಾದೇಶಿಕ ಸಮಿತಿ ಹಾಗೂ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಾ. 14 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ
ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ
ಅವರು ದೀಪ ಪ್ರಜ್ವಲಿಸಿ ಸಮಾರಂಭ ಉದ್ಘಾಟಿಸಿದರು. ಈ ಮೂರು ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಗುಣಪಾಲ್ ಶೆಟ್ಟಿ ಐಕಳ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್ ಶೆಟ್ಟಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್ ಡಿ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಿವರಾಮ ಎನ್. ಶೆಟ್ಟಿ, ನಿರ್ಗಮನ ಅಧ್ಯಕ್ಷ ನಲ್ಯಗುತ್ತು ಪ್ರಕಾಶ್ ಟಿ. ಶೆಟ್ಟಿ ಉಪಸ್ಥಿತರಿದ್ದರು.
ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಸುಚಿತಾ ಕೆ. ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷೆ ಅನಿತಾ ಅಶೋಕ್ ಶೆಟ್ಟಿ, ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ಸಾಗರ್ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಪ್ರತೀಕ್ ಶೆಟ್ಟಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಸಂಗೀತಾ ಶೆಟ್ಟಿ, ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷ ವಿಕಾಸ್ ರೈ, ನಿರ್ಗಮನ ಕಾರ್ಯಾಧ್ಯಕ್ಷ ತಾರಾನಾಥ ಶೆಟ್ಟಿ ಮತ್ತು ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ನಿರ್ಗಮನ ಕಾರ್ಯಾಧ್ಯಕ್ಷ ಡಾ| ಆರ್. ಕೆ. ಶೆಟ್ಟಿ, ಮಹಿಳಾ
ವಿಭಾಗದ ನೂತನ ಕಾರ್ಯಾಧ್ಯಕ್ಷೆ ವಜ್ರಾ ಕೆ. ಪೂಂಜಾ, ನಿರ್ಗಮನ ಕಾರ್ಯಾಧ್ಯಕ್ಷೆ ವನಿತಾ ನೋಂಡ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿಷೇಕ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಬಂಟರು ಸಹೃದಯಿ ದಾನಿಗಳಾಗಲಿ: ಎಸ್.ಎಂ. ಶೆಟ್ಟಿ
ಭವಾನಿ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್ ಶೆಟ್ಟಿ
ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್ ಶೆಟ್ಟಿ
ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ
ಕಂಪ್ಲಿಯಲ್ಲಿ ಎಸಿಬಿ ದಾಳಿ: ಪಿಡಿಒ, ಗ್ರಾ.ಪಂ.ಸದಸ್ಯ ಸೇರಿ ಮೂವರ ಬಂಧನ
ಉದ್ಯಾವರ: ಬಸ್ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್ ಸಿಬಂದಿ ಸಾವು
ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು