ಬಂಟರ ಸಂಘ ಪಿಂಪ್ರಿ -ಚಿಂಚಾÌಡ್‌ ವಾರ್ಷಿಕೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ

Team Udayavani, Feb 10, 2020, 6:20 PM IST

ಪುಣೆ, ಫೆ. 9: ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ 24ನೇ ವಾರ್ಷಿಕೋತ್ಸವ ಸಮಾರಂಭವು ಫೆ. 8ರಂದು ರಾಮಕೃಷ್ಣ ಮೋರೆ ಸಭಾಗೃಹ, ಹೋಟೆಲ್‌ ಅನ್ನಪೂರ್ಣದ ಹತ್ತಿರ ಚಿಂಚ್ವಾಡ್‌ ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಅಧ್ಯಕ್ಷರಾದ ವಿಜಯ್‌ ಎಸ್‌. ಶೆಟ್ಟಿ ಕಟ್ಟಣಿಗೆ ಮನೆ ಬೋರ್ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಥಾಣೆ ಜಿಲ್ಲೆಯ ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷ ಹಾಗೂ ಥಾಣೆ ಹೊಟೇಲ್‌ ಅಸೋಸಿಯೇಶನ್‌ ಇದರ ಅಧ್ಯಕ್ಷ ಪೊಲ್ಯ ಉಮೇಶ್‌ ಡಿ. ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ಕೊಲ್ಲಾಪುರ ತುಳುಕೂಟದ ಅಧ್ಯಕ್ಷರಾದ ತ್ಯಾಗರಾಜ್‌ ಎ. ಶೆಟ್ಟಿ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ತೆಂಗಿನ ಹಿಂಗಾರ ಅರಳಿಸಿ ಸಮಾರಂಭಕ್ಕೆ ಚಾಲನೆಯಿತ್ತರು.

ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ವಿಜಯ್‌ ಎಸ್‌. ಶೆಟ್ಟಿ, ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್‌ ನಾರಾಯಣ ಕೆ. ಶೆಟ್ಟಿ, ಎರ್ಮಾಳ್‌ ವಿಶ್ವನಾಥ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ಮಹೇಶ್‌ ಹೆಗ್ಡೆ ಕಟ್ಟಿಂಗೇರಿಮನೆ, ತುಳು ಸಂಘ ಪಿಂಪ್ರಿ- ಚಿಂಚ್ವಾಡ್‌ ಇದರ ಅಧ್ಯಕ್ಷರಾದಹರೀಶ್‌ ಶೆಟ್ಟಿ ಕುರ್ಕಾಲ್‌, ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್‌ ಶೆಟ್ಟಿ ವಿಜಯಾ ಬ್ಯಾಂಕ್‌, ಉಪಾಧ್ಯಕ್ಷರಾದ ರಾಕೇಶ್‌ ಶೆಟ್ಟಿ ಬೆಳ್ಳಾರೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ ಪೆಲತ್ತೂರು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಕೆ. ಶೆಟ್ಟಿ ಮುಂಡ್ಕೂರು, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಉಜಿರೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಡಾ| ಸಮಿತ್‌ ಚೌಟ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ. ಶೆಟ್ಟಿ, ಮಹಿಳಾ ವಿಭಾಗದ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆ ಜ್ಯೋತಿ ವಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಆಕಾಶ್‌ ಜೆ. ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಪಾಧ್ಯಕ್ಷ ರಾಕೇಶ್‌ ಶೆಟ್ಟಿ ಬೆಳ್ಳಾರೆ ಸ್ವಾಗತಿಸಿದರು. ಸಂಘದ ಗೌರವ ಕೋಶಾಧಿಕಾರಿ ಸುಧಾಕರ ಶೆಟ್ಟಿ ಪೆಲತ್ತೂರು ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿಯನ್ನು ವಾಚಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ತಾರಾ ವಿಭಾಗದ ವರದಿಯನ್ನು ವಾಚಿಸಿದರು. ನಿಧೀಶ್‌ ಶೆಟ್ಟಿ ನಿಟ್ಟೆ, ದಿನೇಶ್‌ ಶೆಟ್ಟಿ ಉಜಿರೆ ಅತಿಥಿಗಳನ್ನು ಪರಿಚಯಿಸಿದರು. ಅತಿಥಿಗಳನ್ನು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಹಾಗೂ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆಯರನ್ನು ಗೌರವಿಸಲಾಯಿತು. ರುಚಿತಾ ಸುಧಾಕರ ಶೆಟ್ಟಿ

ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆಯ ಕಾರ್ಯಕ್ರಮ ನಡೆಸಿಕೊಟ್ಟರು. ನಿತೇಶ್‌ ಶೆಟ್ಟಿ ಎಕ್ಕಾರ್‌ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಡಾ| ಸಮಿತ್‌ ಚೌಟ ವಂದಿಸಿದರು. ಸಾಂಸ್ಕೃತಿಕ ಕಾರ್ಯ ಕ್ರಮದ ಅಂಗವಾಗಿ ಸಂಘದ ಸದಸ್ಯರಿಂದ ವೈವಿ ಧ್ಯಮಯ ನೃತ್ಯ ಪ್ರದರ್ಶನಗಳು, ಕಿರು ನಾಟಕ, ಹಾಸ್ಯ ಪ್ರಹಸನಗಳು ಪ್ರದರ್ಶನಗೊಂಡಿತು. ಸಮಾಜ ಬಾಂಧವರು, ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

 

ಚಿತ್ರ-ವರದಿ:  ಕಿರಣ್‌ ಬಿ. ರೈ ಕರ್ನೂರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ