ಬಂಟ್ಸ್‌ ಅಸೋಸಿಯೇಶನ್‌ ಪುಣೆ ಸಂಭ್ರಮದ ದಸರಾ ಪೂಜೆ

Team Udayavani, Sep 28, 2017, 4:19 PM IST

27-Mum01a.jpg

ಪುಣೆ: ನವರಾತ್ರಿ, ದಸರಾ ಹಬ್ಬ ದೇಶಾದ್ಯಂತ ವಿವಿಧ ಪ್ರದೇಶಗಳಲ್ಲಿ  ಭಕ್ತಿ ಶ್ರದ್ಧೆಗಳಿಂದ ವೈವಿಧ್ಯಮಯವಾಗಿ ಆಚರಿಸಲಾಗುತ್ತಿದ್ದು, ದುಷ್ಟ ಶಕ್ತಿಗಳನ್ನು ಸಂಹರಿಸಿ ಶಿಷ್ಟರ ರಕ್ಷಣೆಗಾಗಿ ಶ್ರೀದೇವಿ ಅವತರಿಸಿದ ಪರ್ವ ಕಾಲ. ಅಂತೆಯೇ ನಮ್ಮೊಳಗಿನ ಬಾಂಧವ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಬಂಟ್ಸ್‌ ಅಸೋಸಿಯೇಶನ್‌  ಸಮಾಜ ಬಾಂಧವರ ಅಚ್ಚುಮೆಚ್ಚಿನ ಸಂಸ್ಥೆಯಾಗಿದ್ದು ಹಲವಾರು ಸಮಾಜಮುಖೀ ಕಾರ್ಯಕ್ರಮಗಳ ಮೂಲಕ ಮಾದರಿಯಾಗಿ ಗುರುತಿಸಿಕೊಳ್ಳುತ್ತದೆ. ಸಂಸ್ಥೆಯ ಪ್ರಾರಂಭದಿಂದಲೂ ಸಂಘದ ಹಿತೈಷಿ ಯಾಗಿದ್ದುಕೊಂಡು ಪ್ರತೀ ವರ್ಷದ ದಸರಾ ಉತ್ಸವವನ್ನೂ ಸಂಘದೊಂದಿಗೆ ಆಚರಿಸಿಕೊಂಡು ಬಂದವ ನಾನು. ಈ ಸಂಸ್ಥೆಯ ಅಧ್ಯಕ್ಷರು  ಹಾಗೂ ಪದಾಧಿಕಾರಿಗಳ ವಿಶೇಷ ಪ್ರೀತಿ ಗೌರವಕ್ಕಾಗಿ ಚಿರಋಣಿಯಾಗಿದ್ದೇನೆ. ಮುಂದೆಯೂ ಸಂಸ್ಥೆ ಯೊಂದಿಗೆ ಸದಾ ಇರುತ್ತೇನೆ ಎಂಬ ಭರವಸೆ ನನ್ನದಾಗಿದೆ ಎಂದು ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ ನುಡಿದರು.

ಸೆ. 24ರಂದು ಪೂನಾ ಕ್ಲಬ್‌  ಸಿನೆಮಾ  ಹಾಲ್‌ನಲ್ಲಿ ನಡೆದ ಬಂಟ್ಸ್‌  ಅಸೋಸಿಯೇಶನ್‌ ಪುಣೆ ಇದರ ವಾರ್ಷಿಕ ದಸರಾ ಉತ್ಸವವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರಿಗೆಲ್ಲರಿಗೂ ಈ  ಹಬ್ಬ ಜೀವನದಲ್ಲಿ ಒಳಿತನ್ನು ಕರುಣಿಸಲಿ. ಭವಿಷ್ಯದಲ್ಲಿ  ಈ ಸಂಘ ಸಮಾಜ ಬಾಂಧವರ ಒಗ್ಗಟ್ಟಿಗೆ, ಅಭ್ಯುದಯಕ್ಕಾಗಿ ಸದಾ ಶ್ರಮಿಸುತ್ತಿರಲಿ ಎಂದರು.

ಅತಿಥಿಗಳಾಗಿ ಉಪಸ್ಥಿತರಿದ್ದ ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿಶ್ವನಾಥ ಶೆಟ್ಟಿ ಮಾತನಾಡಿ, ನಮ್ಮ ಸನಾತನ ಹಿಂದೂ ಧಾರ್ಮಿಕ ಪದ್ಧತಿಯಂತೆ ಹಬ್ಬಗಳಿಗೆ, ದೇವರ ಆರಾಧನೆಗಳಿಗೆ ವಿಶೇಷ ಪ್ರಾಧಾನ್ಯತೆಯನ್ನು ಕಲ್ಪಿಸಲಾಗಿದೆ. ಶ್ರದ್ಧಾ ಭಕ್ತಿಯಿಂದ ದೇವರನ್ನು ಪೂಜಿಸಿದರೆ ದೇವರ ಅನುಗ್ರಹ ಖಂಡಿತ ದೊರೆಯುತ್ತದೆ ಎಂಬ ನಂಬಿಕೆಯಿಂದ ನವರಾತ್ರಿಯ ಪುಣ್ಯ ಕಾಲದಲ್ಲಿ ಶ್ರೀದೇವಿಯ ಆರಾಧನೆಯನ್ನು ನಾವು ಮಾಡುತ್ತಿದ್ದೇವೆ. ನಮ್ಮ ಹಿರಿಯರು ಆಚರಿಸಿಕೊಂಡು ಬಂದ ಸಂಪ್ರದಾಯಗಳಲ್ಲಿ  ಉತ್ತಮ ಜೀವನ ಸಂದೇಶಗಳು ಅಡಕವಾಗಿದ್ದು, ಮೂಢನಂಬಿಕೆಗಳಲ್ಲ ಎಂಬುದನ್ನು ನಾವು ಅರಿತು ಕೊಂಡು ಗೌರವಿಸಬೇಕಾಗಿದೆ. ನಾವು ಎಲ್ಲೇ ನೆಲೆಸಿದರೂ ನಮ್ಮ ತುಳುನಾಡ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಮರೆಯದೆ ಉಳಿಸುವ ಕರ್ತವ್ಯ ನಮ್ಮದಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಶಶಿ ಬಾಲಕೃಷ್ಣ ಹೆಗ್ಡೆ, ಸಂಘದ ಉಪಾಧ್ಯಕ್ಷರುಗಳಾದ ಸುರೇಶ್‌   ಶೆಟ್ಟಿ, ಆನಂದ ಶೆಟ್ಟಿ ಮಿಯ್ನಾರ್‌, ಪ್ರಧಾನ ಕಾರ್ಯದರ್ಶಿ ರೋಹಿತ್‌ ಶೆಟ್ಟಿ ನಗ್ರಿಗುತ್ತು, ಕೋಶಾಧಿಕಾರಿ ಅರವಿಂದ ರೈ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ವಿಭಾಗದ ಕಾರ್ಯಾಧ್ಯಕ್ಷೆ ಮಲ್ಲಿಕಾ ಆನಂದ್‌ ಶೆಟ್ಟಿ, ಯುವ ವಿಭಾಗದ ಕಾರಾಧ್ಯಕ್ಷ  ಪ್ರದೀಪ್‌  ಶೆಟ್ಟಿ ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ಮರಣಿಕೆ ಹಾಗೂ ಪುಷ್ಪಗುತ್ಛ ನೀಡಿ ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಹಾಗೂ ಗಣ್ಯರನ್ನು ಗೌರವಿಸಲಾಯಿತು.ಪ್ರಫುಲ್ಲಾ ವಿ. ಶೆಟ್ಟಿ ಮತ್ತು ಶಾಲಿನಿ ಎಂ. ಶೆಟ್ಟಿ ಪ್ರಾರ್ಥಿಸಿದರು. 

ಅನಂತರ ಕದಿರು ಪೂಜೆಯನ್ನು ನಡೆಸಲಾಯಿತು. ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಲ್ಲಿಕಾ ಎ. ಶೆಟ್ಟಿ ಮತ್ತು ಸದಸ್ಯೆಯರು ಶ್ರೀ ದೇವಿಗೆ ಮಂಗಳಾರತಿ ಬೆಳಗಿ ಪೂಜೆ ಸಲ್ಲಿಸಿ ದರು. ಪ್ರಧಾನ ಕಾರ್ಯದರ್ಶಿ ರೋಹಿತ್‌ ಶೆಟ್ಟಿ ನಗ್ರಿಗುತ್ತು ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಉಪಕಾರ್ಯಾಧ್ಯಕ್ಷ ಲೋಹಿತ್‌ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೆಮೂ¤ರು ಸುಧಾಕರ ಶೆಟ್ಟಿ ವಂದಿಸಿದರು.
ಶ್ರೀ  ಗುರುದೇವಾ ಸೇವಾ ಬಳಗದ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ… ಬೆಟ್ಟು, ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಪಿಂಪ್ರಿ-ಚಿಂಚಾÌಡ್‌  ಬಂಟರ ಸಂಘದ ಅಧ್ಯಕ್ಷ ಮಹೇಶ್‌ ಹೆಗ್ಡೆ ಕಟ್ಟಿಂಗೇರಿ, ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು  ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ    ಅನಂತರ ಸಂಘದ ಯುವ ವಿಭಾಗ ಹಾಗೂ ಮಹಿಳಾ ವಿಭಾಗದಿಂದ ಆಕರ್ಷಕ ದಾಂಡಿಯಾ ನೃತ್ಯ ಪ್ರದರ್ಶನ ಗಮನ ಸೆಳೆ ಯಿತು. ದಾಂಡಿಯಾ ರಾಸ್‌ ನಡೆಯಿತು.  ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಬಾಲ ಕೃಷ್ಣ ಶೆಟ್ಟಿ ಪ್ರಾಯೋಜಿಸಿದ ಮಹಿಳೆ ಯರಿಗಾಗಿ ಕೈಗಡಿ ಯಾರದ ನಿಖರ ಬೆಲೆಯನ್ನು ಸೂಚಿಸಿದವರಿಗೆ ಬಹುಮಾನವಾಗಿ ನೀಡುವ ಕಾರ್ಯ ಕ್ರಮ ನಡೆಸಲಾಯಿತು. 
ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದ ಕೊನೆಗೆ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.