ಬಂಟ್ಸ್ ಅಸೋಸಿಯೇಷನ್ ಪುಣೆ ಮಹಿಳಾ ವಿಭಾಗದ ಅರಸಿನ ಕುಂಕುಮ
Team Udayavani, Jan 20, 2019, 3:54 PM IST
ಪುಣೆ: ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ಮಹಿಳಾ ವಿಭಾಗದ ವತಿಯಿಂದ ಸಮಾಜ ಬಾಂಧವರ ಮಹಿಳೆಯರಿ ಗಾಗಿ ಅರಸಿನ ಕುಂಕುಮ ಕಾರ್ಯ ಕ್ರಮವನ್ನು ಜ. 15 ರಂದು ನಗರದ ಲೇಡಿಸ್ ಕ್ಲಬ್ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಮಿತಿ ಕಾರ್ಯಾಧ್ಯಕ್ಷೆ ದೀಪಾ ಎ. ರೈ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಮಿತಿ ಕಾರ್ಯಾಧ್ಯಕ್ಷೆ ದೀಪಾ ಎ. ರೈ ಮತ್ತು ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸದಸ್ಯರು ದೇವರ ಪ್ರಾರ್ಥನೆಯನ್ನು ಹಾಡಿ ಅಲಂಕೃತ ದೇವರ ಮಂಟಪಕ್ಕೆ ಆರತಿ ಬೆಳಗಿ ಸೇರಿದ್ದ ಮಹಿಳೆಯರಿಗೆ ಅರಸಿನ ಕುಂಕುಮ ಹಚ್ಚಿ ನೆನಪಿನ ಕಾಣಿಕೆಗಳನ್ನು ನೀಡಿ ಪರಸ್ಪರ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಮಿಯ್ನಾರು, ಕೋಶಾಧಿಕಾರಿ ದಿನೇಶ್ ಶೆಟ್ಟಿ ನಿಟ್ಟೆ, ಮಾಜಿ ಕಾರ್ಯದರ್ಶಿ ಸತೀಶ್ ರೈ ಕಲ್ಲಂಗಳ, ಮಾಜಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ಅಕ್ಷಿತ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ನಿಕಟಪೂರ್ವ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ. ಶೆಟ್ಟಿ , ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್. ಶೆಟ್ಟಿ, ಶ್ರೀ ಗುರುದೇವಾ ಸೇವಾ ಬಳಗದ ಮಹಿಳಾ ವಿಭಾಗದ ವೀಣಾ ಶೆಟ್ಟಿ, ಪುಣೆ ತುಳುಕೂಟದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಶೆಟ್ಟಿ ಅವರನ್ನು ಸಮಿತಿ ವತಿಯಿಂದ ಕಾರ್ಯಾಧ್ಯಕ್ಷೆ ದೀಪಾ ಅರವಿಂದ ರೈ ಅವರು ಪುಷ್ಪಗುತ್ಛ ನೀಡಿ ಸತ್ಕರಿಸಿದರು.
ಕಾರ್ಯಕ್ರಮದಲ್ಲಿ ಉಪ ಕಾರ್ಯಾಧ್ಯಕ್ಷೆ ಉಷಾ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಉಷಾ ಉÇÉಾಸ್ ಶೆಟ್ಟಿ, ಕೋಶಾಧಿಕಾರಿ ಲತಾ ಸುಧಾಕರ ಶೆಟ್ಟಿ, ಜತೆ ಕಾರ್ಯದರ್ಶಿ ಪುಷ್ಪಾ ಆರ್. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದಿನಿ ಎಸ್. ಶೆಟ್ಟಿ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷೆ ಅಮಿತಾ ಯು. ಶೆಟ್ಟಿ, ಕ್ರೀಡಾ ಉಪ ಕಾರ್ಯಾಧ್ಯಕ್ಷೆ ಆಶಾ ಡಿ. ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಸ್ಮಿತಾ ಎಸ್. ಶೆಟ್ಟಿ, ಸಾಂಸ್ಕೃತಿಕ ಸಮಿತಿ ಉಪ ಕಾರ್ಯಾಧ್ಯಕ್ಷೆ ಪೂರ್ಣಿಮಾ ಎ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಸಮಿತಿ ಸದಸ್ಯರುಗಳಾದ ರೂಪಾಲಿ ಎಸ್. ರೈ, ಸುಜಾತಾ ಎ. ಶೆಟ್ಟಿ, ರೇಷ್ಮಾ ಆರ್. ಶೆಟ್ಟಿ, ತ್ರಿವೇಣಿ ಎನ್. ಶೆಟ್ಟಿ, ರೇಷ್ಮಾ ಎಸ್. ಶೆಟ್ಟಿ, ಶಾಲಿನಿ ಎಂ. ಶೆಟ್ಟಿ, ಸುಮನಾ ಎಸ್. ಹೆಗ್ಡೆ ಹಾಗೂ ಸಲಹಾ ಸಮಿತಿ ಸದಸ್ಯರಾದ ಸುಜಾತಾ ಎಸ್. ಹೆಗ್ಡೆ, ಸುಧಾ ಎನ್. ಶೆಟ್ಟಿ, ಸರೋಜಿನಿ ಜೆ. ಶೆಟ್ಟಿ, ಮಲ್ಲಿಕಾ ಎ. ಶೆಟ್ಟಿ, ಪ್ರಫುÉಾ ವಿ. ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯೆಯರು ಉಪಸ್ಥಿತರಿದ್ದರು. ಲಘು ಉಪಾಹಾರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್