ಬಂಟರ ಸಂಘ ಮುಂಬಯಿ ಜ್ಞಾನ ಮಂದಿರ ಸಮಿತಿ ರಚನೆ

Team Udayavani, Dec 10, 2017, 3:55 PM IST

09-Mum04.jpg

ಮುಂಬಯಿ: ಬಂಟರ ಸ ಂಘ ಮುಂಬಯಿ ಇದರ ಪ್ರತಿಷ್ಠಿತ ಜ್ಞಾನ ಮಂದಿರ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಉದ್ಯಮಿ, ಸಮಾಜ ಸೇವಕ  ರವೀಂದ್ರನಾಥ ಭಂಡಾರಿ ಅವರು ಡಿ. 8ರಂದು ಕುರ್ಲಾ ಪೂರ್ವದ ಬಂಟರ ಭವನದ ಸಂಕುಲದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿಧಾನದಲ್ಲಿ ಅಧಿಕಾರ ಸ್ವೀಕರಿಸಿದರು.

ಧಾರ್ಮಿಕ ಕಾರ್ಯಕ್ರಮವಾಗಿ ರವೀಂದ್ರನಾಥ ಭಂಡಾರಿ ಹಾಗೂಪರಿವಾರದವರ ಉಪಸ್ಥಿತಿಯಲ್ಲಿ ಬೆಳಗ್ಗೆ ಗಣಹೋಮ, ನಾಗದೇವರಿಗೆ ನಾಗತಂಬಿಲ, ಸಂಜೆ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಕುಂಕುಮಾರ್ಚನೆ, ಶ್ರೀ ಮಹಾವಿಷ್ಣು ಮಂದಿರದಲ್ಲಿ   ದೀಪಾಲಂಕಾರ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ  ಅನ್ನಸಂತರ್ಪಣೆ ನಡೆಯಿತು.

ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪಸಮಿತಿಗಳ ಸದಸ್ಯರು, ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಮಹಿಳಾ ವಿಭಾಗದವರು, ಸಮಾಜ ಬಾಂಧವರು, ಭಕ್ತಾದಿಗಳು, ರವೀಂದ್ರನಾಥ ಭಂಡಾರಿ ಅವರ ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಅರವಿಂದ ಬನ್ನಿಂತಾಯ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಬಂಟರ ಸಂಘ ಜ್ಞಾನ ಮಂದಿರ ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ ಅವರು ನೂತನ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘ  ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಶೆಟ್ಟಿ ಐಕಳ ವಿವಿಧ ಉಪಸಮಿತಿಗಳ ಪದಾಧಿಕಾರಿಗಳಾದ  ಶಾಂತಾರಾಮ ಶೆಟ್ಟಿ, ಎನ್‌. ಸಿ. ಶೆಟ್ಟಿ, ಸಂಘದ ಮುಖವಾಣಿ ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ, ವಿಟuಲ್‌ ರೈ, ಬಂಟರ ಸಂಘ ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ  ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಅಧ್ಯಕ್ಷ  ನವೀನ್‌ ಶೆಟ್ಟಿ ಇನ್ನಬಾಳಿಕೆ, ಉದ್ಯಮಿ ಪ್ರಕಾಶ್‌ ಶೆಟ್ಟಿ ನಲ್ಯಗುತ್ತು, ಅನ್ನದಾತ ರಾಘು ಪಿ. ಶೆಟ್ಟಿ, ಅಶೋಕ್‌ ಶೆಟ್ಟಿ ಕಾಪು, ಪ್ರಕಾಶ್‌ ಆಳ್ವ, ವಿಟuಲ್‌ ಆಳ್ವ, ಪ್ರಸನ್ನ ಶೆಟ್ಟಿ, ಮಹೇಶ್‌ ಶೆಟ್ಟಿ, ಸುಕುಮಾರ್‌ ಶೆಟ್ಟಿ, ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಲತಾ ಪಿ. ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ರತ್ನಾ ಶೆಟ್ಟಿ, ಆಶಾ ವಿಟuಲ್‌ ರೈ ಹಾಗೂ ಇತರ 

ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಕಾರ್ಯಕಾರಿ ಸಮಿತಿಯ ಸದಸ್ಯರು, ಭಕ್ತಾದಿಗಳು ಪಾಲ್ಗೊಂಡು ನೂತನ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.

ರವೀಂದ್ರನಾಥ ಭಂಡಾರಿ ಅವರು ನಗರದಲ್ಲಿ ಯಶಸ್ವಿ ಉದ್ಯಮಿಯಾಗಿ, ಸಮಾಜ ಸೇವಕರಾಗಿ ಈಗಾಗಲೇ ಪ್ರಸಿದ್ಧರಾಗಿದ್ದು, ಬಂಟರ ಸಂಘದ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಸಮಾಜ ಬಾಂಧವರ ಪ್ರೀತ್ಯಾದರಗಳಿಗೆ ಪಾತ್ರರಾಗಿದ್ದಾರೆ. ಎಲ್ಲರೊಂದಿಗೆ  ಆತ್ಮೀಯ ಭಾವನೆಯನ್ನು ಹೊಂದಿರುವ ಇವರು ಸರಳ, ಸಜ್ಜನಿಕೆಯ ವ್ಯಕ್ತಿತ್ವದವರು. ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಅಪಾರ ಒಲವನ್ನು ಹೊಂದಿರುವ ಇವರು ಬಂಟರ ಸಂಘದ ಮುಖಾಂತರ ಪ್ರತೀ ವರ್ಷ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಿಂದಲೇ ಯಕ್ಷಗಾನ ಪ್ರದರ್ಶನ ನೀಡಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಸಂಘದ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆಯ ಹಿಮ್ಮೇಳ-ಮುಮ್ಮೇಳದ ಪರಿಪೂರ್ಣ ವೇಷ-ಭೂಷಣಗಳನ್ನು ದಾನಿ ಗಳ ಸಹಕಾರದೊಂದಿಗೆ ಅರ್ಪಿಸಿದ ಕಲಾಪ್ರೇಮಿ ಇವರು. ಆಧ್ಯಾತ್ಮಿಕ ಚಿಂತಕರೂ ಆಗಿರುವ ಇವರು  ಕಳೆದ ಐದು ವರ್ಷಗಳ ಹಿಂದೆ ಹುಟ್ಟೂರಾದ ಸಜಿಪದಲ್ಲಿ ಸುಮಾರು 40 ಲಕ್ಷ ರೂ. ಗಳಲ್ಲಿ ಶ್ರೀರಾಮ ಭಜನ ಮಂದಿರವನ್ನು ನಿರ್ಮಿಸಿರುವುದಲ್ಲದೆ, ಊರಿನ ಪ್ರತಿಯೊಂದು ದೈವ-ದೇವಸ್ಥಾನಗಳಿಗೆ ಇವರ ಕೊಡುಗೆ ಅಪಾರವಾಗಿದೆ.

ಕಳೆದ ಒಂಭತ್ತು ವರ್ಷಗಳಿಂದ ಹೊಸನಗರ ಮೇಳವನ್ನು ಮುಂಬಯಿಗೆ ಆಹ್ವಾನಿಸಿ ಉಚಿತ ಯಕ್ಷಗಾನ ಪ್ರದರ್ಶನ
ಗಳನ್ನು ನೀಡಿದ ಕಲಾ ಶ್ರೀಮಂತಿಕೆ ಇವರದ್ದಾಗಿದೆ. ಅವರ ಕ್ರಿಯಾಶೀಲತೆಗೆ ಬಂಟರ ಸಂಘದ  ವರ್ಷದ ಅತ್ಯುತ್ತಮ ಸಮಾಜ ಸೇವಕ ಚಿನ್ನದ ಪದಕ ಲಭಿಸಿರುವುದು ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.