ಬಂಟರ ಸಂಘ ಡೊಂಬಿವಲಿ: ಆರ್ಥಿಕ ಸಹಾಯ ವಿತರಣೆಗೆ ಚಾಲನೆ
Team Udayavani, Jun 25, 2019, 12:48 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ಪ್ರತೀ ವರ್ಷದಂತೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ, ವಿಧವೆಯರಿಗೆ ಹಾಗೂ ಅಂಗವಿಕಲರಿಗೆ ಆರ್ಥಿಕ ಧನ ಸಹಾಯ ವಿತರಣೆಯು ಈ ವರ್ಷವೂ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿಯ ವತಿಯಿಂದ ಜೂ. 23 ರಂದು ಬೆಳಗ್ಗೆ ಡೊಂಬಿವಲಿ ಪೂರ್ವದ ಹೊಟೇಲ್ ಸುಯೋಗ್ ಸಭಾಗೃಹದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಹಾಗೂ ಇತರ ಪದಾಧಿಕಾರಿಗಳು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಶುಭಹಾರೈಸಿದರು. ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಕಲ್ಲಡ್ಕ ಅವರ ನೇತೃತ್ವದಲ್ಲಿ, ಉಪ ಕಾರ್ಯಾಧ್ಯಕ್ಷರುಗಳಾದ ಸುಕುಮಾರ್ ಎನ್. ಶೆಟ್ಟಿ ಮತ್ತು ಆನಂದ ಡಿ. ಶೆಟ್ಟಿ, ಗೌರವ ಕಾರ್ಯದರ್ಶಿ ದಿನೇಶ್ ಎನ್. ಶೆಟ್ಟಿ, ಸಂಚಾಲಕ ರಾಜೀವ್ ಭಂಡಾರಿ, ಕೋಶಾಧಿಕಾರಿ ಜಯಕರ ಶೆಟ್ಟಿ ಪಡುಕುಡೂರು, ಉಪಕೋಶಾಧಿಕಾರಿ ತಿಮ್ಮಪ್ಪ ಟಿ. ಶೆಟ್ಟಿ, ಉಪ ಕೋಶಾಧಿಕಾರಿ ಉಮೇಶ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕೃಷಿ¡ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ್ ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ ಇವರ ಸಂಪೂರ್ಣ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಶೆಟ್ಟಿ ಮರಾಠ, ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನೆರವೇರಿತು.
ಸಮಾರಂಭದಲ್ಲಿ ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಸ್ಥಳೀಯ ಸಮಿತಿಗೆ ಒಳಪಟ್ಟ ಸಮಾಜ ಬಾಂಧವರಿಗೆ ವಿದ್ಯಾರ್ಥಿ ವೇತನ, ವಿಧವಾ ವೇತನ, ವಿಕಲಚೇತನರಿಗೆ ಸಹಾಯ ಧನವನ್ನು ವಿತರಿಸಲಾಯಿತು. ಡೊಂಬಿವಲಿ ಪರಿಸರದ ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದ ನೂರಾರು ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು, ಬಂಟರ ಸಂಘ ಹಾಗೂ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ
ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ