Udayavni Special

ಬಂಟರ ಸಂಘ ವಸಾಯಿ-ಡಹಾಣೂ ಸಮಿತಿ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ

Team Udayavani, Mar 26, 2019, 7:34 PM IST

2503mum09

ಮುಂಬಯಿ: ಬಂಟರ ಸಂಘ ಮುಂಬಯಿ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ. 23ರಂದು ವಸಾಯಿ ಪಶ್ಚಿಮದ ಸಾಯಿನಗರ ರಂಗ ಮಂಟಪದಲ್ಲಿ ಸಂಜೆ 4ರಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರು ದೀಪ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಮತ್ತು ಬಂಟರ ಸಂಘ ಮುಂಬಯಿ ಪಶ್ಚಿಮ ವಲಯದ ಸಮನ್ವಯಕ ಡಾ| ಬಿ. ಪ್ರಭಾಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್‌ ಪಕ್ಕಳ, ಪ್ರಾದೇಶಿಕ ಸಮಿತಿಯ ಸಂಚಾಲಕರ ಶಶಿಧರ ಕೆ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಾ ಅಶೋಕ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸಮಾರಂಭವು ಜರಗಿತು.

ಮುಖ್ಯ ಅತಿಥಿಗಳಾಗಿ ಕಿಂಗ್ಸ್‌ ರೆಸಾರ್ಟ್‌ ವಸಾಯಿ ಪೂರ್ವ ಇದರ ನಿರ್ದೇಶಕಿ ಚಂದ್ರಿಕಾ ಐಕಳ ಹರೀಶ್‌ ಶೆಟ್ಟಿ, ಗೌರವಾನ್ವಿತ ಅತಿಥಿಗಳಾಗಿ ವಸಾಯಿ ವಿರಾರ್‌ ಮಹಾನಗರ ಪಾಲಿಕೆಯ ಮಹಾಪೌರ ರೂಪೇಶ್‌ ಜಾಧವ್‌ ಅವರ ಪತ್ನಿ ರೂಪಾಲಿ ಜಾಧವ್‌, ಬಂಟರ ಸಂಘ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜಯರಾಮ್‌ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯದರ್ಶಿ ಚಿತ್ರಾ ಆರ್‌. ಶೆಟ್ಟಿ ಅವರು ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಜತೆ ಕೋಶಾಧಿಕಾರಿ ರತ್ನಾ ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಮಂಜುಳಾ ಎ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸುಪ್ರೀತ್‌ ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳಾದ ಶಶಿಕಲಾ ಶೆಟ್ಟಿ, ಉಮಾ ಎಸ್‌. ಶೆಟ್ಟಿ, ವೀಣಾ ಎಸ್‌. ಶೆಟ್ಟಿ, ಸಂಧ್ಯಾ ವಿ. ಶೆಟ್ಟಿ, ಸುಜಾತಾ ಡಿ. ಶೆಟ್ಟಿ, ಉಷಾ ಎಸ್‌. ಶೆಟ್ಟಿ ಕರ್ನಿರೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಮತ್ತು ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಇವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯೆ ಶಶಿಕಲಾ ಶಶಿಧರ ಶೆಟ್ಟಿ, ರೂಪಾ ಜಯಂತ್‌ ಪಕ್ಕಳ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಮಿತಿಯ ಮಹಿಳಾ ವಿಭಾಗದವರಿಂದ ವಿವಿಧ ವಿನೋದಾವಳಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರಿಂದ ಮೋಕೆ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು. ಸಮಾರಂಭದ ಕೊನೆಯಲ್ಲಿ ಭೋಜನದ ವ್ಯವಸ್ಥೆ ಯನ್ನು ಆಯೋಜಿಸಲಾಗಿತ್ತು. ಪರಿಸರದ ಸಮಾಜ ಬಾಂಧವರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ನವರಾತ್ರಿ ಪ್ರಯುಕ್ತ ಡೊಂಬಿವಲಿಯಲ್ಲಿ  ಸೀರೆಗಳ ವಿಶೇಷ ಪ್ರದರ್ಶನ, ಮಾರಾಟ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದಿಂದ ದಸರಾ ಸಂಭ್ರಮಾಚರಣೆ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಡ್ರಗ್ಸ್‌ ಪ್ರಕರಣದಲ್ಲಿ ರಾಜಕೀಯ ಬೇಡ: ಫ‌ಡ್ನವೀಸ್‌

ಡ್ರಗ್ಸ್‌ ಪ್ರಕರಣದಲ್ಲಿ ರಾಜಕೀಯ ಬೇಡ: ಫ‌ಡ್ನವೀಸ್‌

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.