ಕಲ್ವಾ ಫ್ರೆಂಡ್ಸ್‌ ದಶಮಾನೋತ್ಸವ ಸಂಭ್ರಮ: ಸಮ್ಮಾನ

Team Udayavani, Nov 27, 2018, 4:54 PM IST

2511mum01.jpg

ಮುಂಬಯಿ: ಕಲ್ವಾ ಫ್ರೆಂಡ್ಸ್‌ ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು  ನ. 23ರಂದು ಪೂರ್ವಾಹ್ನ 10ರಿಂದ ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ದಿನವಿಡೀ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರ ಶೇಖರ ಪಾಲೆತ್ತಾಡಿ ಅವರು ವಹಿಸಿದ್ದು, ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಸ್ಥಾಪಕಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಯೋಗ ಗುರು ಜಗದೀಶ್‌ ಶೆಟ್ಟಿ ಮತ್ತು ಉದ್ಯಮಿ ಚಂದ್ರಶೇಖರ್‌ ಎಸ್‌. ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.

ಸಮ್ಮಾನ ಸ್ವೀಕರಿಸಿ ಮಾತನಾಡಿದ ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಸ್ಥಾಪಕಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು ಅವರು, ಯಕ್ಷಗಾನ ಕಲೆಯ ಮೇಲಿನ ಪ್ರೀತಿ, ಗೌರವದಿಂದಾಗಿ ಯಕ್ಷಗಾನ ಮಂಡಳಿಯನ್ನು ಸಾಂಸ್ಕೃತಿಕ ನಗರಿ ಪುಣೆಯಲ್ಲಿ ಸ್ಥಾಪಿಸಿದ್ದೇನೆ. ಬಾಲ್ಯದಿಂದಲೇ ನನಗೆ ಕಲೆಯ ಮೇಲೆ ಅಪಾರ ಅಭಿಮಾನ. ಈ ಕಲೆಯನ್ನು ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಹಿರಿಯರು ಹಾಗೂ ಹೆತ್ತವರ ಸೇವೆಯನ್ನು ಮಾಡುವ ಸಂಸ್ಕಾರವನ್ನು ಮಕ್ಕಳಿಗೆ ಕಲಿಸಿಕೊಡಬೇಕು. ಸಂಸ್ಥೆಯ ಕಾರ್ಯ ವೈಖರಿಯನ್ನು ಕಂಡು ಸಂತೋ ಷವಾಯಿತು ಎಂದರು.

ಮತ್ತೋರ್ವ ಸಮ್ಮಾನಿತ ಯೋಗ ಗುರು ಜಗದೀಶ್‌ ಶೆಟ್ಟಿ ಅವರು ಮಾತ ನಾಡಿ, ಯೋಗದಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದರೊಂದಿಗೆ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಾಗುತ್ತದೆ. ನಾವು ಪ್ರತಿ ದಿನ ಸ್ವಲ್ಪ ಮಟ್ಟಿಗಾದರೂ ಯೋಗವನ್ನು ಮಾಡಿದಾಗ ಆರೋಗ್ಯವಂತರಾಗಿ ರಲು ಸಾಧ್ಯ ಎಂದು ನುಡಿದರು.

ಇನ್ನೋರ್ವ ಸಮ್ಮಾನಿತ, ಉದ್ಯಮಿ ಚಂದ್ರಶೇಖರ್‌ ಎಸ್‌. ಶೆಟ್ಟಿ ಅವರು ಮಾತನಾಡಿ, ಸಂಸ್ಥೆಯ ಸಮಾಜಪರ ಕಾರ್ಯಕ್ರಮಗಳು ಅಭಿನಂದನೀಯ. ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಸಮ್ಮಾನಿಸಿರುವುದಕ್ಕೆ ಅಭಿನಂದನೆಗಳು. ಸಂಸ್ಥೆಯ ಸಮಾಜಪರ ಕಾರ್ಯಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಥಾಣೆ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಕುಶಲ್‌ ಸಿ. ಭಂಡಾರಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ಸುರೇಶ್‌ ಶೆಟ್ಟಿ ಯೆಯ್ನಾಡಿ, ವರ್ತಕ್‌ ನಗರ ಕನ್ನಡ ಸಂಘದ ಅಧ್ಯಕ್ಷ ಜಯಂತ್‌ ಶೆಟ್ಟಿ, ಉದ್ಯಮಿ, ಸಮಾಜ ಸೇವಕ ಅನಿಲ್‌ ಶೆಟ್ಟಿ ಸೂರಿಂಜೆ, ಉದ್ಯಮಿ ಮೋಹನ್‌ ಎನ್‌. ಶೆಟ್ಟಿ, ಉದ್ಯಮಿ ಸುನೀಲ್‌ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಕಲ್ವಾ ಫ್ರೆಂಡ್ಸ್‌ನ ಅಧ್ಯಕ್ಷ ರಘುರಾಮ್‌ ಎನ್‌. ಶೆಟ್ಟಿ, ಉಪಾಧ್ಯಕ್ಷರಾದ ನೀತಾ ಆರ್‌. ಶೆಟ್ಟಿ, ಪುಷ್ಪರಾಜ್‌ ಎಲ್‌. ಶೆಟ್ಟಿ, ಕಾರ್ಯದರ್ಶಿ ವಿಜಯ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಮಧುರಾ ಎಸ್‌. ಶೆಟ್ಟಿ, ಸಂಗೀತಾ ಶೆಟ್ಟಿಗಾರ್‌, ಕೋಶಾಧಿಕಾರಿ ಶಿವಪ್ರಸಾದ್‌ ಎಸ್‌. ಆಳ್ವ, ಜತೆ ಕೋಶಾಧಿಕಾರಿಗಳಾದ ಸುಪ್ರೀತಾ ಎಂ. ಶೆಟ್ಟಿ, ಪ್ರಕಾಶ್‌ ಪೂಜಾರಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಸಲಹಾ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಂಸ್ಥೆಯ ಗೌರವ ಕೋಶಾಧಿಕಾರಿ ಶಿವಪ್ರಸಾದ್‌ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ಅತಿಥಿಗಳನ್ನು ಸ್ವಾಗತಿಸಿದರು. ರಂಗನಿರ್ದೇಶಕ ಬಾಬಾ ಪ್ರಸಾದ್‌ ಆಳ್ವ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.