“ಸುಶಾಂತ್ ಸಾವಿನ ತನಿಖೆ ಸಿಬಿಐಗೆ ಅಗತ್ಯವಿಲ್ಲ’
Team Udayavani, Jul 19, 2020, 5:11 PM IST
ನಾಗಪುರ, ಜು. 18: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ನಿಭಾಯಿಸಲು ಮುಂಬಯಿ ಪೊಲೀಸರು ಸಮರ್ಥರಾಗಿರುವುದರಿಂದ ಈ ಬಗ್ಗೆ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಶುಕ್ರವಾರ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ವ್ಯವಹಾರ ಪೈಪೋಟಿಯ ಕೋನವನ್ನು ತನಿಖೆ ಮಾಡುತ್ತಿದ್ದಾರೆ ಎಂದವರು ತಿಳಿಸಿದ್ದಾರೆ. ರಜಪೂತ್ (34) ಜೂ. 14 ರಂದು ಮುಂಬಯಿಯ ಬಾಂದ್ರಾ ಅಪಾರ್ಟ್ ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಇದನ್ನು ಆತ್ಮಹತ್ಯೆ ಪ್ರಕರಣ ಎಂದು ಹೇಳಿಕೊಂಡಿದ್ದಾರೆ. ನಟ ಖನ್ನತೆಗಾಗಿ ಔಷಧ ಪಡೆಯುತ್ತಿದ್ದ ಎಂದು ಮುಂಬಯಿ ಪೊಲೀಸರು ತಮ್ಮ ಆರಂಭಿಕ ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ. ಸುಶಾಂತ್ ಅವರ ಅಭಿಮಾನಿಗಳು ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು ಎಂದು ಬಯಸಿದ್ದು, ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಎಲ್ಲರೂ ಒತ್ತಾಯಿಸುತ್ತಿದ್ದಾರೆ.
ಗುರುವಾರ ಸುಶಾಂತ್ ಪ್ರಿಯತಮೆ, ನಟಿ ರಿಯಾ ಚಕ್ರವರ್ತಿ ಕೂಡ ಇದೇ ಕೋರಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮುಂದೆ ಇಟ್ಟಿದ್ದರು. ತನಗೆ ಸರಕಾರದ ಮೇಲೆ ಸಂಪೂರ್ಣ ನಂಬಿಕೆ ಇದ್ದರೂ, ಸಿಬಿಐ ತನಿಖೆಯು ಈ ಪ್ರಕರಣಕ್ಕೆ ನ್ಯಾಯ ಒದಗಿಸಲು ಸಹಾಯ ಮಾಡಲಿದೆ ಎಂದು ಚಕ್ರವರ್ತಿ ಹೇಳಿದ್ದಾರೆ.
ಪಿಟಿಐ ಜತೆಗೆ ಮಾತನಾಡಿದ ದೇಶ್ಮುಖ್ ಅವರು, ನಟನ ಸಾವಿನ ಬಗ್ಗೆ ಮುಂಬಯಿ ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ ಮತ್ತು ಸಂಬಂಧಪಟ್ಟ ಜನರ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯವಿಲ್ಲ. ನಮ್ಮ ಪೊಲೀಸ್ ಅಧಿಕಾರಿಗಳು ಸಮರ್ಥರಾಗಿದ್ದಾರೆ ಮತ್ತು ತನಿಖೆಯನ್ನು ಸರಿಯಾದ ರೀತಿಯಲ್ಲಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ನಾವು ವ್ಯವಹಾರ ಪೈಪೋಟಿಯ ಕೋನವನ್ನು ಕೂಡ ಪರಿಶೀಲಿಸುತ್ತಿದ್ದೇವೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ