ಚಿಣ್ಣರ ಬಿಂಬ ಮಾಜಿವಾಡಾ ಆದಿಶಕ್ತಿ ಶಿಬಿರದ ಮಕ್ಕಳ ಪ್ರತಿಭಾ ಸ್ಪರ್ಧೆ 

Team Udayavani, Nov 11, 2018, 5:18 PM IST

1011mum01.jpg

ಮುಂಬಯಿ: ಮಾತೃ ಭಾಷೆಯಲ್ಲಿ ಕಲಿಸುವುದರಿಂದ ಮಕ್ಕ ಳಲ್ಲಿ  ಸಂಸ್ಕೃತಿ-ಸಂಸ್ಕಾರಗಳ  ಅರಿವು ಹೆಚ್ಚುತ್ತದೆ. ಇದರಿಂದಾಗಿ ಮಕ್ಕಳು ಪ್ರಬುದ್ಧರಾದಾಗ ಅವರಿಂದ ನಮ್ಮ ಸಂಸ್ಕೃತಿ ವಿಶ್ವದೆಲ್ಲೆಡೆ ಪಸರಿಸುವುದ ರಲ್ಲಿ ಸಂಶಯವೇ ಇಲ್ಲ. ಚಿಕ್ಕ ಮಕ್ಕಳಲ್ಲಿ ಗ್ರಹಿಕೆಯ ಶಕ್ತಿ ಹೆಚ್ಚಿದ್ದು, ಅರೆ ಗಳಿಗೆಯಲ್ಲಿ ಯಾವುದೇ ವಿಷಯಗಳನ್ನು  ಅರ್ಥೈಯಿಸಿಕೊಳ್ಳುವ ಸಾಮರ್ಥ್ಯವಿರುತ್ತದೆ. ಇಂದು ಪಾಲ ಕರು ಮಾಡಬೇಕಾದ ಕಾರ್ಯವನ್ನು ಚಿಣ್ಣರ ಬಿಂಬವು ಮಾಡುತ್ತಿರುವುದು ಅಭಿನಂದನೀಯ ಎಂದು ಥಾಣೆ ಮಾಜಿವಾಡಾದ ಶ್ರೀ ಆದಿಶಕ್ತಿ ಕನ್ನಡ ಸಂಘದ ಅಧ್ಯಕ್ಷ ಭಾಸ್ಕರ ಶೆಟ್ಟಿ ನುಡಿದರು.

ಇತ್ತೀಚೆಗೆ ಆದಿಶಕ್ತಿ ಕನ್ನಡ ಶಾಲಾ ಸಭಾಗೃಹದಲ್ಲಿ ಚಿಣ್ಣರ ಬಿಂಬ ಮುಂಬಯಿ ಇದರ ಆದಿಶಕ್ತಿ ಮಾಜಿವಾಡಾ ಶಿಬಿರದ ಮಕ್ಕಳ ಪ್ರತಿಭಾ ಸ್ಪರ್ಧೆಯ ಸಮಾರೋಪ ಸಮಾರಂ ಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಪ್ರತಿಭೆಯನ್ನು ಮೆಚ್ಚಿ, ಹಿತವಚನವನ್ನಿತ್ತು ಶುಭಹಾರೈಸಿದರು.

ಗೌರವ ಅತಿಥಿಯಾಗಿ ಪಾಲ್ಗೊಂಡ ಆದಿಶಕ್ತಿ ಕನ್ನಡ ಸಂಘದ ಮಾಜಿ ಅಧ್ಯಕ್ಷ ಶಂಕರ ಶೆಟ್ಟಿ ಶಿಮಂತೂರು  ಮಾತನಾಡಿ, ಚಿಣ್ಣರ ಬಿಂಬದ ಮೂಲಕ ಭಾಷೆ, ಸಂಸ್ಕೃತಿಯ ಅರಿವನ್ನು ಮೂಡಿಸಲು ಪ್ರಯತ್ನಿಸುತ್ತಿರುವ ಚಿಣ್ಣರ ಬಿಂಬದ ಕಾರ್ಯವನ್ನು ಶ್ಲಾ ಸಿದರು. 

ಪ್ರತಿಭಾ ಸ್ಪರ್ಧೆಯ ನಿರ್ಣಾಯಕ ರಾಗಿ ಆಗಮಿಸಿದ ಚಿಣ್ಣರ ಬಿಂಬದ ಕೇಂದ್ರ ಸಮಿತಿಯ ಗೀತಾ ಹೇರಾಳ  ಮಾತನಾಡಿ, ಶಿಬಿರದ ಮಕ್ಕಳ ಶಿಸ್ತನ್ನು ಕಂಡು ಸಂತೋಷವಾಯಿತು. ಹೊಸ ಶಿಬಿರ ಎನ್ನುವುದು ಗೊತ್ತಾಗುವುದಿಲ್ಲ. ಪ್ರತಿಭಾ  ಸ್ಪರ್ಧೆಯಲ್ಲಿ ಬಹುಮಾನ ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿದೆ ಎಂದರು.

ಇನ್ನೋರ್ವ ನಿರ್ಣಾಯಕರಾದ ನೆರೂಲ್‌ ಶಿಬಿರದ ಮುಖ್ಯಸ್ಥೆ ಭಾರತಿ ಹೆಗ್ಡೆ ಮಾತನಾಡಿ, ಮುಂದೆ ಅಡಿ ಇಟ್ಟಾಗ ವ್ಯಕ್ತಿ ಗುರಿ ತಲುಪಲು ಸಾಧ್ಯ ವಾಗುತ್ತದೆ. ಪಾಲಕರು ಮಕ್ಕಳ ಕನಸಿಗೆ ಪೂರಕವಾಗುವಂತೆ ಪ್ರೋತ್ಸಾಹಿಸಿದಾಗ ಮಾತ್ರ ವಿದ್ಯಾರ್ಥಿಗಳು ಗುರಿ ತಲು ಪಲು ಸಾಧ್ಯವಾಗುತ್ತದೆ ಎಂದರು.

ಶಿಬಿರದ ಮುಖ್ಯಸ್ಥ ಬಾಲಕೃಷ್ಣ ಹೆಗ್ಡೆ ಮಾತನಾಡಿ, ನಮ್ಮ ಶಿಬಿರವು ಪ್ರಾರಂಭಗೊಂಡು ಕೇವಲ ಎರಡು ತಿಂಗಳಾಗಿದ್ದು, ಸ್ವಲ್ಪ ಸಮಯದಲ್ಲೇ ಇಷ್ಟೊಂದು ಚಂದದ ಕಾರ್ಯಕ್ರಮ ಸಂಪನ್ನಗೊಳಿಸುವುದಕ್ಕೆ ಇಲ್ಲಿನ ಪಾಲಕ, ಪೋಷಕರೇ  ಕಾರಣ. ಜತೆಗೆ ಚಿಣ್ಣರ ಬಿಂಬದ ಎಲ್ಲರ ಮಾರ್ಗದರ್ಶನ ಕಾರಣವಾಗಿದೆ ಎಂದು ಹೇಳಿದರು.

ಘೋಡ್‌ ಬಂದರ್‌ ರೋಡ್‌ ಶ್ರೀ ಅಯ್ಯಪ್ಪ ಸೇವಾ ಟ್ರಸ್ಟ್‌ ಇದರ ಸ್ಥಾಪಕ ಪ್ರಶಾಂತ್‌ ನಾಯಕ್‌, ಶ್ರೀ ಅಯ್ಯಪ್ಪ ಭಜನಾ ಮಂಡಳಿಯ ಸೀತಾರಾಮ ಶೆಟ್ಟಿ, ಅಶೋಕ್‌ ಮೂಲ್ಯ, ನವೋದಯ ಕನ್ನಡ ಸೇವಾ ಸಂಘದ ಜತೆ ಕೋಶಾಧಿಕಾರಿ ದಯಾನಂದ ಹೆಗ್ಡೆ, ಥಾಣೆ ಶಿಬಿರದ ಶಿಕ್ಷಕಿ ಜ್ಯೋತಿ ಶೆಟ್ಟಿ, ಮಾಜಿವಾಡಾ ಥಾಣೆ, ವಿಕ್ರೋಲಿ ವಿಭಾಗದ ಮುಖ್ಯಸ್ಥೆ ವಿನಯಾ ಶೆಟ್ಟಿ, ಶಿಬಿರದ ಮುಖ್ಯಸ್ಥ  ಬಾಲಕೃಷ್ಣ ಹೆಗ್ಡೆ, ಶಿಬಿರದ ಶಿಕ್ಷಕಿ ರೇಣುಕಾ ಬಿರಾದಾರ್‌, ಸಾಂಸ್ಕೃತಿಕ ಮುಖ್ಯಸ್ಥೆ ಸುನೀತಾ ಹೆಗ್ಡೆ, ಭಜನಾ ಶಿಕ್ಷಕಿ  ಶೋಭಾ ಕೋಟ್ಯಾನ್‌ ಅವರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಸ್ಪರ್ಧೆಯನ್ನು  ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ, ಇಂದು ಶಿಬಿರದ ಮಕ್ಕಳನ್ನು  ಕಂಡಾಗ ಸಂತೋಷವಾಗುತ್ತಿದೆ. ಮಕ್ಕಳ ಉತ್ಸಾಹ, ಹುಮ್ಮಸ್ಸು, ಶ್ರದ್ಧೆ ಮನಸಿಗೆ ಆನಂದವನ್ನುಂಟು ಮಾಡುತ್ತಿದೆ. ಶಿಬಿರವು ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ ಎಂದು ನುಡಿದು ಶುಭಹಾರೈಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.