ವಾರ್ಷಿಕೋತ್ಸವದ ಯಶಸ್ಸಿಗೆ ಸಹಕಾರ ನೀಡಿ: ಸಂತೋಷ್‌ ಶೆಟ್ಟಿ

Team Udayavani, Jan 19, 2020, 3:44 PM IST

ಪುಣೆ, ಜ. 18: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 26ರಂದು ಓಣಿಮ ಜಲುಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಕೇಂದ್ರ ಬಂಟರ ಭವನ ಪುಣೆ ಇಲ್ಲಿನ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದ್ದು, ಈ ಬಗ್ಗೆ ಪೂರ್ವ ಭಾವಿ ಸಭೆಯನ್ನು ಬಂಟರ ಭವನದ ಕಚೇರಿಯಲ್ಲಿ ಜ. 13ರಂದು ಆಯೋಜಿಸಲಾಗಿತ್ತು.

ಈ ಸಂದರ್ಭ ಸಭೆಯ ಅಧ್ಯಕ್ಷತೆ ವಹಿಸಿದ್ದ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಸ್ವಾಗತಿಸಿ ಮಾತನಾಡಿ, ಪ್ರತೀ ವರ್ಷದಂತೆಈ ವರ್ಷದ ಕಾರ್ಯಕ್ರಮವನ್ನುವಿಶೇಷ ರೀತಿಯಲ್ಲಿ ಶಿಸ್ತುಬದ್ಧವಾಗಿಆಯೋಜಿಸುವಲ್ಲಿ ನಾವು ಸಾಕಷ್ಟು ಪೂರ್ವ ತಯಾರಿಯನ್ನು ಮಾಡಬೇಕಾಗಿದೆ. ಈ ವರ್ಷ ಸಂಘದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮಾನ ಕಾರ್ಯಕ್ರಮ ಹಾಗೂ ಮನೋರಂಜನಾ ಕಾರ್ಯಕ್ರಮ ಗಳೊಂದಿಗೆ ಅದ್ದೂರಿಯಾಗಿ ನಡೆಯಲಿರುವ ಈ ಉತ್ಸವದಲ್ಲಿ ಸಮಾಜದ ಗಣ್ಯ ಅತಿಥಿಗಳೂ ಪಾಲ್ಗೊಳ್ಳಲಿದ್ದಾರೆ.

ಸಂಘದ ಪ್ರತಿಯೋರ್ವ ಪದಾಧಿಕಾರಿಯೂ ಒಂದೊಂದು ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿಸುವಲ್ಲಿ ಸಹಕಾರ ನೀಡಬೇಕು. ಪುಣೆಯಲ್ಲಿರುವ ಪ್ರತಿಯೋರ್ವ ಸಮಾಜ ಬಾಂಧವರನ್ನೂ ಈ ಕಾರ್ಯಕ್ರಮಕ್ಕೆ ಆಮಂತ್ರಿಸಿ ಸಮಾರಂಭದಲ್ಲಿ ಭಾಗಿಯಾಗುವಂತೆ ವಿನಂತಿಸ ಬೇಕಾಗಿದೆ. ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವವಿಭಾಗ, ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿಗಳ ಎಲ್ಲಾಸದಸ್ಯರೂ ಒಗ್ಗಟ್ಟಿನಿಂದ ಸಹಕಾರ ನೀಡಿ ತಮಗೆ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿ ವಾರ್ಷಿಕೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ನುಡಿದರು.

ಸಂಘದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು ವಾರ್ಷಿಕೋತ್ಸವ ಸಂದರ್ಭ ನಡೆಯಲಿರುವ ಸಾಂಸ್ಕೃತಿಕ ಕಾರ್ಯ ಕ್ರಮಗಳ ಬಗೆಗಿನ ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿಅಜಿತ್‌ ಕೆ. ಹೆಗ್ಡೆ ಕಳೆದ ಕಾರ್ಯ ಕಾರಿ ಸಮಿತಿ ಸಭೆಯಲ್ಲಿ ಚರ್ಚಿಸ ಲಾದ ವಿಷಯಗಳನ್ನು ಸಭೆಯ ಮುಂದಿಟ್ಟರು. ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ ಹಣಕಾಸು ವಿಷಯಗಳ ಬಗ್ಗೆ ಮಾಹಿತಿ ಯಿತ್ತರು. ಗಣೇಶ್‌ ಶೆಟ್ಟಿಯವರು ಸಂಘದ ಭವನದ ಸಂಬಂಧ ಕಾನೂನಾತ್ಮಕ ವಿಷಯಗಳ ಬಗ್ಗೆ ತಿಳಿಸಿದರು.

ಸಂಘದ ಕಲ್ಪವೃಕ್ಷ ತ್ತೈಮಾಸಿಕ ವಿಶೇಷ ಸಂಚಿಕೆ ಹಾಗೂ ಜಾಹೀರಾತು ಸಂಬಂಧಪಟ್ಟ ವಿಚಾರ ಗಳನ್ನು ಕಲ್ಪವೃಕ್ಷ ತ್ತೈಮಾಸಿಕ ಪತ್ರಿಕೆಯ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ ಚರ್ಚಿಸಿದರು. ಸುಜಿತ್‌ ಶೆಟ್ಟಿ ಭವನದ ಬಗ್ಗೆ ಮಾಹಿತಿಯಿತ್ತರು.

ಮಹಿಳಾ ವಿಭಾಗದ ಕಾರ್ಯಾ ಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ ವಾರ್ಷಿಕೋತ್ಸವಕ್ಕೆ ಸಾಂಸ್ಕೃತಿಕ ಕಾರ್ಯ ಕ್ರಮಗಳ ತಯಾರಿಯ ಬಗ್ಗೆ ಮಾಹಿತಿಯಿತ್ತರು. ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್‌ ಶೆಟ್ಟಿ ಯುವ ವಿಭಾಗದ ಕಾರ್ಯಚಟುವಟಿಕೆಗಳು ಹಾಗೂ ವಾರ್ಷಿಕೋತ್ಸವದ ತಯಾರಿಯ ಬಗ್ಗೆ ತಿಳಿಸಿದರು. ಕ್ರೀಡಾ

ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು ಸಂಘದ ಕ್ರೀಡಾಕೂಟದ ವರದಿಯನ್ನು ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷರಾದ ಸತೀಶ್‌ ಶೆಟ್ಟಿ, ಮೋಹನ್‌ ಶೆಟ್ಟಿ, ಪದಾಧಿಕಾರಿಗಳಾದ ಶ್ರೀನಿವಾಸ್‌ ಶೆಟ್ಟಿ, ತಾರಾನಾಥ ಕೆ. ರೈ ಮೇಗಿನಗುತ್ತು, ವಿಶ್ವನಾಥ್‌ ಶೆಟ್ಟಿ, ಪ್ರಶಾಂತ್‌ ಎ. ಶೆಟ್ಟಿ, ಯುವ ವಿಭಾಗದ ವಿಶಾಲ್‌ ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳಾದ ಸುಚಿತ್ರಾ ಶ್ರೀನಿವಾಸ್‌ ಶೆಟ್ಟಿ, ಶಮ್ಮಿ ಅಜಿತ್‌ ಹೆಗ್ಡೆ, ದಿವ್ಯಾ ಸಂತೋಷ್‌ ಶೆಟ್ಟಿ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ವಾರ್ಷಿಕೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.

 

 ಚಿತ್ರ-ವರದಿ: ಕಿರಣ್‌ ಬಿ. ರೈ ಪುಣೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್‌ ನಿರ್ದೇಶನದ "ಸೆಪ್ಟೆಂಬರ್‌ 10' ಚಿತ್ರೀಕರಣ ಸಂಪೂರ್ಣ ಮಾಡಿಕೊಂಡು ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತಕ್ಕೆ ತಲುಪಿದೆ....

  • ಕುಂದಾಪುರ: ಮೂರು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಭಾರತೀಯ ರೈಲ್ವೇಯ ವೇಳಾಪಟ್ಟಿ ಸಮಿತಿ (ಐಆರ್‌ಟಿಸಿ)ಯ ಸಭೆಯಲ್ಲಿ ನೂತನ ಬೆಂಗಳೂರು - ಉಡುಪಿ- ಕುಂದಾಪುರ...

  •  ಆಗ್ನೇಯ, ಪಶ್ಚಿಮ, ಕೇಂದ್ರ, ದಕ್ಷಿಣ ಭಾರತದ ಕೆಲವೆಡೆ ಅತಿ ಬಿಸಿ  ಪ್ರತೀ ವರ್ಷಕ್ಕಿಂತ ಹೆಚ್ಚು ತಾಪ ಇರಲಿದೆ ಎಂದ ಇಲಾಖೆ  ತೆಲಂಗಾಣ, ಆಂಧ್ರ ಕರಾವಳಿಗಳಲ್ಲಿ ಬಿಸಿಗಾಳಿ...

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...