ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿ: ಆನಂದ್‌ ಶೆಟ್ಟಿ ಮಿಯ್ಯಾರ್

Team Udayavani, Jan 2, 2020, 6:01 PM IST

mumbai-tdy-1

ಪುಣೆ, ಜ. 1: ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ 9ನೇ ವಾರ್ಷಿಕೋತ್ಸವ ಸಮಾರಂಭವು ಜ. 11ರಂದು ನಗರದ ತಿಲಕ ಸ್ಮಾರಕ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆಯೊಂದು ಡಿ. 30ರಂದು ಪೂನಾ ಕ್ಲಬ್‌ ಕಾನ್ಫರೆನ್ಸ್‌ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ಆನಂದ್‌ ಶೆಟ್ಟಿ ಮಿಯ್ನಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಆನಂದ್‌ ಶೆಟ್ಟಿ ಅವರು ಸಮಿತಿ ಸದಸ್ಯರನ್ನು ಸ್ವಾಗತಿಸಿ ಮಾತನಾಡಿ ಪ್ರತೀ ವರ್ಷದಂತೆ ನಮ್ಮ ಸಂಘದ 9ನೇ ವಾರ್ಷಿಕೋತ್ಸವ ಸಮಾರಂಭವು ಜ. 11ರಂದು ನಡೆಯಲಿದ್ದು ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ನಡೆಸುವಲ್ಲಿ ನಾವೆಲ್ಲರೂ ಪೂರ್ವತಯಾರಿಯನ್ನು ಮಾಡಿಕೊಳ್ಳ ಬೇಕಾಗಿದೆ. ಪುಣೆಯಾದ್ಯಂತ ಇರುವ ಸಮಾಜ ಬಾಂಧವರನ್ನು ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಮಂತ್ರಣಪತ್ರವನ್ನು ನೀಡಬೇಕಾಗಿದೆ.

ಗಣ್ಯ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸಮಾಜದ ಸಾಧಕರನ್ನು ಗೌರವಿಸುವ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದ್ದು ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗಾದಂತೆ ಇದು ನಮ್ಮ ಮನೆಯ ಸಮಾರಂಭವೆಂಬಂತೆ ಭಾವಿಸಿ ಸಮಾರಂಭವನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರೆಲ್ಲರೂ ಸಹಕಾರ ನೀಡಬೇಕೆಂದರು.

ಸಂಘದ ಉಪಾಧ್ಯಕ್ಷರಾದ ಗಣೇಶ್‌ ಹೆಗ್ಡೆ ಮಾತನಾಡಿ ಇದು ನಮ್ಮದೇ ಕಾರ್ಯಕ್ರಮವಾಗಿದ್ದು ನಾವೆಲ್ಲರೂ ಯೋಜನಾ ಬದ್ಧವಾಗಿ ಕಾರ್ಯಕ್ರಮದ ತಯಾರಿ ಯಲ್ಲಿ ತೊಡಗಿಸಿಕೊಂಡರೆ ಕಾರ್ಯಕ್ರಮ ಯಶಸ್ಸಾಗುವುದರಲ್ಲಿ ಸಂಶಯವಿಲ್ಲ. ಕಾರ್ಯಕ್ರಮಗಳನ್ನು ಸುಗಮವಾಗಿ ನಡೆಸುವ ಜವಾಬ್ದಾರಿ ನಮ್ಮ ಮೇಲಿದ್ದು ಅದಕ್ಕಾಗಿ ನಾವೆಲ್ಲರೂ ಒಮ್ಮತದಿಂದ ಶ್ರಮಿಸಬೇಕೆಂದರು.

ಸಂಘದ ಮಾಜಿ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿಯವರು ಮಾತನಾಡಿ, ನಮ್ಮ ಸಂಘ ಸ್ಥಾಪನೆಯಾದಂದಿನಿಂದಲೂ ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಎಲ್ಲರೂ ಒಗ್ಗಟ್ಟಿನಿಂದ ಶ್ರಮವಹಿಸಿ ಎಲ್ಲ ಕಾರ್ಯಕ್ರಮಗಳನ್ನೂ ಯಶಸ್ವಿಗೊಳಿದ್ದಾರೆ.

ಅದೇ ರೀತಿ 9ನೇ ವಾರ್ಷಿಕೋತ್ಸವ ಸಂಭ್ರಮವನ್ನೂ ನಾವೆಲ್ಲರೂ ಒಗ್ಗೂಡಿ ಪೂರ್ವತಯಾರಿಯನ್ನು ಮಾಡಿಕೊಂಡು ಉತ್ತಮ ಕಾರ್ಯಕ್ರಮವನ್ನಾಗಿಸುವಲ್ಲಿ ಪ್ರಯತ್ನಿಸೋಣ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ವಾರ್ಷಿಕೋತ್ಸವದ ಕಾರ್ಯಕ್ರಮಗಳ ವಿವರಗಳನ್ನು ಸಭೆಯ ಮುಂದಿಟ್ಟರು. ಸಂಘದ ಮಾಜಿ ಅಧ್ಯಕ್ಷರಾದ ಜಯ ಶೆಟ್ಟಿ ಮಿಯ್ಯಾರ್‌ ,ಮಾಜಿ ಕಾರ್ಯದರ್ಶಿ ರೋಹಿತ್‌ ಡಿ. ಶೆಟ್ಟಿ ನಗ್ರಿಗುತ್ತು, ಮಾಜಿ ಕಾರ್ಯದರ್ಶಿ ಸತೀಶ್‌ ರೈ ಕಲ್ಲಂಗಳ ,ಮಾಜಿ ಕೋಶಾಧಿಕಾರಿ ದಿನೇಶ್‌ ಶೆಟ್ಟಿ ಎನ್‌ಐಬಿಎಂ ಅವರು ಕಾರ್ಯಕ್ರಮವನ್ನು ಯಶಸ್ವಿಯನ್ನಾಗಿಸುವ ಬಗ್ಗೆ ಸಲಹೆಗಳನ್ನಿತ್ತರು .

ಸಭೆಯಲ್ಲಿ ಸಂಘದ ಕೋಶಾಧಿಕಾರಿ ದಿನೇಶ್‌ ಶೆಟ್ಟಿ ನಿಟ್ಟೆ ಪದಾಧಿಕಾರಿಗಳಾದ ರವೀಂದ್ರ ಶೆಟ್ಟಿ, ಸುಶ್ಮಿತ್‌ ಶೆಟ್ಟಿ, ಸುಧಾಕರ ಶೆಟ್ಟಿ ಕೆಮ್ತೂರು, ಬಾಲಕೃಷ್ಣ ಶೆಟ್ಟಿ, ಚಂದ್ರಕಾಂತ್‌ ಶೆಟ್ಟಿ, ಸತೀಶ್‌ ಶೆಟ್ಟಿ ಕಾಡೂರು, ಪ್ರದೀಪ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಎ. ರೈ, ಮಾಜಿ ಕಾರ್ಯಾಧ್ಯಕ್ಷೆ ಸುಧಾ ಎನ್‌. ಶೆಟ್ಟಿ, ಸುಜಾತಾ ಎಸ್‌ ಹೆಗ್ಡೆ, ಸರೋಜಿನಿ ಜೆ. ಶೆಟ್ಟಿ, ಮಲ್ಲಿಕಾ ಎ. ಶೆಟ್ಟಿ, ಮಹಿಳಾ ವಿಭಾಗದ ಪದಾಧಿಕಾರಿಗಳಾದ ಉಷಾ ಯು. ಶೆಟ್ಟಿ, ಲತಾ ಎಸ್‌. ಶೆಟ್ಟಿ, ಸುಜಯಾ ಬಿ. ಶೆಟ್ಟಿ, ಸುಮನಾ ಎಸ್‌. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಸಂಘದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

 ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.