Udayavni Special

ಕೋವಿಡ್ ಬಿಕ್ಕಟ್ಟಿನಲ್ಲಿ ಆಡಳಿತಕ್ಕೆ ಸಹಕಾರ: ವಿವಿಗಳಿಗೆ ಕೋಶ್ಯಾರಿ ಸೂಚನೆ


Team Udayavani, Apr 29, 2021, 12:23 PM IST

Cooperation for the administration in the Covid crisis

ಮುಂಬಯಿ: ಕೊರೊನಾ ಎರಡನೇ ಅಲೆ ಮೊದಲ ಅಲೆಗಿಂತ ಗಂಭೀರವಾಗಿದ್ದು, ಈ ಬಿಕ್ಕಟ್ಟನ್ನು ನಿವಾರಿಸಲು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಅಂಗಸಂಸ್ಥೆ ಕಾಲೇಜುಗಳು ಮುಂದಾಳತ್ವ ವಹಿಸಿ ಆಡಳಿತದೊಂದಿಗೆ ಸಹಕರಿಸಬೇಕು ಎಂದು ರಾಜ್ಯಪಾಲ ಮತ್ತು ಕುಲಪತಿ ಭಗತ್‌ ಸಿಂಗ್‌ ಕೋಶ್ಯಾರಿ ಹೇಳಿದರು.

ಎ. 27ರಂದು ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜ್ಯದ ಎಲ್ಲ ವಿವಿಗಳ ಉಪಕುಲಪತಿಗಳೊಂದಿಗೆ ಆನ್‌ಲೈನ್‌ ಮೂಲಕ ಸಂವಾದ ನಡೆಸಿದರು. ಈ ಸಂದರ್ಭ ಭವಿಷ್ಯದ ಯೋಜನೆಗಳ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯಗಳು ಕೈಗೊಂಡ ಕ್ರಮಗಳ ಬಗ್ಗೆ ಎಲ್ಲ ಉಪಕುಲ ಪತಿಗಳು ರಾಜ್ಯಪಾಲರಿಗೆ ವಿವರಿಸಿದರು.ರಕ್ತದಾನಕ್ಕೆ ಮಹತ್ವ ನೀಡಿರಕ್ತದಾನದಂತಹ ಚಟುವಟಿಕೆಗಳಲ್ಲಿ ಭಾಗ ವಹಿಸಲು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು, ಎನ್‌ಸಿಸಿ ಕೆಡೆಟ್‌ಗಳು ಮತ್ತು ವಿದ್ಯಾರ್ಥಿ ಸಂಘಟನೆಗಳಿಗೆ ಸೂಚನೆ ನೀಡಿದ ರಾಜ್ಯಪಾಲರು ಕೊರೊನಾದ ಬಗ್ಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ವಿವಿಗಳಿಗೆ ನಿರ್ದೇಶನ ನೀಡಿದರು.

ನಿರೀಕ್ಷೆ ಪೂರೈಸುವುದು ಕರ್ತವ್ಯಸಮಾಜ ಮತ್ತು ದೇಶವು ವಿವಿಗಳು ಮತ್ತು ಕಾಲೇಜುಗಳಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಈ ಕಷ್ಟದ ಸಮಯದಲ್ಲಿ ಸಮಾಜಕ್ಕೆ ಸಹಾಯ ಮಾಡುವುದು ವಿವಿಗಳ ನೈತಿಕ ಕರ್ತವ್ಯವಾಗಿದೆ ಎಂದು ತಿಳಿಸಿದ ರಾಜ್ಯ ಪಾಲರು, ಆಡಳಿತದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ವಿವಿಗಳು ಆಡಳಿತಕ್ಕೆ ಸಹಾಯ ಮಾಡಬೇಕು ಎಂದು ಹೇಳಿದರು.

ಸಾರ್ವಜನಿಕವಾಗಿ ಜಾಗೃತಿ ಮೂಡಿಸಿಎಲ್ಲ ಜನರು ಇನ್ನೂ ಮಾಸ್ಕ್ಗಳನ್ನು ಬಳಸದ ಕಾರಣ ಪ್ರತೀದಿನ ಸಾವಿರಾರು ಜನರಿಗೆ ದಂಡ ವಿಧಿಸಲಾಗುತ್ತಿದೆ. ಇದಕ್ಕಾಗಿ ಕಾಲೇಜುಗಳು ಮತ್ತು ವಿವಿಗಳು ಸಾರ್ವಜನಿಕ ಜಾಗೃತಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು.

ಸಾರ್ವಜನಿಕ ಜಾಗೃತಿ ಕೂಡ ಅನೇಕ ಜೀವಗಳನ್ನು ಉಳಿಸುತ್ತದೆ. ಕೊರೊನಾ ತಡೆಗಟ್ಟುವ ಕಾರ್ಯಗಳಿಗಾಗಿ ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ ಹಣವನ್ನು ಸಂಗ್ರಹಿಸುವ ಯೋಜನೆಯನ್ನು ವಿವಿಗಳು ತರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದರು. ಮಾಸ್ಕ್ಗಳನ್ನು ತಯಾರಿಸುವುದು ಮತ್ತು ಮಾಸ್ಕ್ಗಳನ್ನು ವಿತರಿಸು ವುದರ ಜತೆಗೆ ಅಗತ್ಯವಿರುವವರಿಗೆ ರಕ್ತ ಸಂಗ್ರಹಿಸಲು ವಿವಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು. ಬಡವರಿಗೆ ವಿವಿಗಳು ಆಹಾರ ಧಾನ್ಯಗಳನ್ನು ವಿತರಿಸಬೇಕು ಎಂದರು.

ಟಾಪ್ ನ್ಯೂಸ್

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basava jayanti

ಜಾಗತಿಕ ಲಿಂಗಾಯತ ಮಹಾಸಭಾ ಸಾಗರೋತ್ತರ ಘಟಕದಿಂದ ಬಸವ ಜಯಂತಿ ಕಾರ್ಯಕ್ರಮ

Opening of the ATM Center

ಸ್ಥಳಾಂತರಿತ ಶಾಖೆಯ ಎಟಿಎಂ ಸೆಂಟರ್‌ ಉದ್ಘಾಟನೆ

Distribution of Assistance Funds

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯ ಧನ ವಿತರಣೆ

All India Student Council

ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌: ನಲಸೊಪರದಲ್ಲಿ ರಕ್ತದಾನ ಶಿಬಿರ

Shree Shanishwara Mandir

ಮೀರಾರೋಡ್‌ ಶ್ರೀ ಶನೀಶ್ವರ ಮಂದಿರದಲ್ಲಿ ವಿಶೇಷ ಮಹಾಪೂಜೆ, ಗೌರವಾರ್ಪಣೆ

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.