ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನೇಶನ್‌ ಪ್ರಮಾಣ ಶೇ. 25ರಿಂದ 34ಕ್ಕೆ ಏರಿಕೆ

Team Udayavani, Jun 14, 2021, 1:33 PM IST

covid news

ಮುಂಬಯಿ: ನಗರದಲ್ಲಿ ಜೂ. 1ರಿಂದ 9ರ ವರೆಗೆ ನಡೆಸಿದ ಕೊರೊನಾ ಲಸಿಕಾ ಅಭಿಯಾನದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 77ರಷ್ಟು ಲಸಿಕೆಗಳನ್ನು ನೀಡಲಾಗಿದ್ದು, ಬಿಎಂಸಿ ಆಸ್ಪತ್ರೆಗಳಲ್ಲಿ ಶೇ. 20 ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಶೇ. 02ರಷ್ಟು  ಮಾತ್ರ ಲಸಿಕೆಗಳನ್ನು ನೀಡಲಾಗಿದೆ.

ಲಸಿಕೆಗಳು ಲಭ್ಯವಿಲ್ಲದ ಕಾರಣ ಕಳೆದ ಒಂದು ತಿಂಗಳಿನಿಂದ ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ತೀವ್ರವಾಗಿ ಕಡಿಮೆಯಾಗಿದೆ. ಮುಂಬಯಿಯಲ್ಲಿ  ಮೇ 1ರ ವರೆಗೆ ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಶೇ. 74ರಷ್ಟು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 25ರಷ್ಟು ವ್ಯಾಕ್ಸಿನೇಶನ್‌ ನಡೆದಿದೆ. ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ  ಜೂ. 9ರ ವರೆಗೆ ಶೇ. 10ರಷ್ಟು ಕಡಿಮೆಯಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ  ಶೇ. 25ರಿಂದ 34ಕ್ಕೆ ಏರಿಕೆ

ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನೇಶನ್‌ ಶೇ. 25ರಿಂದ 34ಕ್ಕೆ ಏರಿಕೆಯಾಗಿದ್ದು, ಶೇ. 77ರಷ್ಟು ಲಸಿಕೆ ನೀಡಲಾಗಿದೆ. ಬಿಎಂಸಿ ಮತ್ತು ಸರಕಾರಿ ಆಸ್ಪತ್ರೆಗಳು ಒಟ್ಟು ಶೇ. 22ರಷ್ಟು ಮಾತ್ರ ಲಸಿಕೆ ನೀಡಿವೆ. ವ್ಯಾಕ್ಸಿನೇಶನ್‌ ಪ್ರಾರಂಭವಾದ ಆರು ತಿಂಗಳ ಬಳಿಕ ಮುಂಬಯಿಯಲ್ಲಿ  30,29,825 ಮಂದಿ ಮಾತ್ರ ಮೊದಲ ಡೋಸ್‌ ತೆಗೆದುಕೊಂಡರೆ, ಅವರಲ್ಲಿ  ಶೇ. 26 ಮಾತ್ರ ಎರಡನೇ ಡೋಸ್‌ ಪೂರ್ಣಗೊಳಿಸಿದ್ದಾರೆ. ಬಿಎಂಸಿ ಪ್ರಕಾರ ಜನವರಿಯಲ್ಲಿ 2.65 ಲಕ್ಷ ಜನರಿಗೆ, ಫೆಬ್ರವರಿಯಲ್ಲಿ 5.71 ಲಕ್ಷ, ಮಾರ್ಚ್‌ ನಲ್ಲಿ 8.1 ಲಕ್ಷ, ಎಪ್ರಿಲ್‌ನಲ್ಲಿ 9.47 ಲಕ್ಷ ಮತ್ತು ಮೇಯಲ್ಲಿ  5.23 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.

ಬಿಎಂಸಿಗೆ 12 ಲಕ್ಷ ಪ್ರಮಾಣ ಬೇಕು

ಬಿಎಂಸಿ 340 ವ್ಯಾಕ್ಸಿನೇಶನ್‌ ಕೇಂದ್ರಗಳನ್ನು ಹೊಂದಿದ್ದು, ಪ್ರತೀದಿನ ಸುಮಾರು 1 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ವ್ಯಾಕ್ಸಿನೇಶನ್‌ ಸಂಪೂರ್ಣವಾಗಿ ಕೇಂದ್ರದಿಂದ ಲಭ್ಯವಿರುವ ಸ್ಟಾಕ್‌ ಅನ್ನು ಅವಲಂಬಿಸಿರುತ್ತದೆ. ಶೀಘ್ರವಾಗಿ ಲಸಿಕೆ ಹಾಕುವ ಗುರಿಯ ಹಿನ್ನೆಲೆ ಜೂನ್‌ನಲ್ಲಿ ಸುಮಾರು 12 ಲಕ್ಷ ಡೋಸ್‌ಗಳನ್ನು, ದಿನಕ್ಕೆ ಕನಿಷ್ಠ 50,000 ಡೋಸ್‌ಗಳನ್ನು ನೀಡುವಂತೆ ಸರಕಾರವನ್ನು ಕೋರಲಾಗಿದೆ ಎಂದು ಹೆಚ್ಚುವರಿ ಆಯುಕ್ತ ಸುರೇಶ್‌ ಕಾಕಾನಿ ತಿಳಿಸಿದ್ದಾರೆ.

ಕೇಂದ್ರ ಶೇ. 100ರಷ್ಟು ಲಸಿಕೆ ಖರೀದಿಸಬೇಕು

ವ್ಯಾಕ್ಸಿನೇಶನ್‌ ನೀತಿಯನ್ನು ಕೇಂದ್ರ ಸರಕಾರವು ತಿಂಗಳಲ್ಲಿ ಆರು ಬಾರಿ ಬದಲಾಯಿಸಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಸರಕಾರದ ವ್ಯಾಕ್ಸಿನೇಶನ್‌ ನೀತಿಯು ಖಾಸಗಿ ಆಸ್ಪತ್ರೆಗಳು ಮತ್ತು ತಯಾರಕರ ಲಾಭವನ್ನು ಬೆಂಬಲಿಸುತ್ತದೆ. ಸುಪ್ರೀಂ ಕೋರ್ಟ್‌ ಆದೇಶದ ಬಳಿಕ 18 ವರ್ಷದವರಿಗೆ ಲಸಿಕೆ ನೀಡಲು ಅನುಮತಿಸಿ ನೀಡಿದ ಸರಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದೇ ಸಮಯದಲ್ಲಿ ಶೇ. 25ರಷ್ಟು ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅನುಮತಿ ನೀಡಿರುವ ನಿರ್ಧಾರವು ಮತ್ತೆ ಲಾಭದ ಆದ್ಯತೆಯಾಗಿದೆ. ಶೇ. 100ರಷ್ಟು ಲಸಿಕೆಗಳನ್ನು ಖರೀದಿಸಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿತರಿಸಲು ಕೇಂದ್ರ ಸರಕಾರಕ್ಕೆ ಬೇಡಿಕೆ ಇಟ್ಟಿದೆ ಎಂದು ಫೋರಂ ಫಾರ್‌ ಮೆಡಿಕಲ್‌ ಎಥಿಕ್ಸ್‌ ಸೊಸೈಟಿಯ ಸುನೀತಾ ಬಂಡೇವಾರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.