ರಾಜ್ಯ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ: ಟೋಪೆ


Team Udayavani, Jul 23, 2020, 3:20 PM IST

ರಾಜ್ಯ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ: ಟೋಪೆ

ಸಾಂದರ್ಭಿಕ ಚಿತ್ರ

ಮುಂಬಯಿ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 3,25,695ಕ್ಕೆ ತಲುಪಿದೆ. ರಾಜ್ಯವು ಸಮುದಾಯ ಪ್ರಸರಣ ಹಂತಕ್ಕೆ ಪ್ರವೇಶಿಸಿರಬಹುದೆಂದು ಕೆಲವು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದು, ಈ ಹೇಳಿಕೆಯನ್ನು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್‌ ಟೋಪೆ ಅವರು ನಿರಾಕರಿಸಿದ್ದಾರೆ. ನಾವು ಇಲ್ಲಿಯವರೆಗೆ ಎಲ್ಲ ಸಂಪರ್ಕಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ. ಐಸಿಎಂಆರ್‌ (ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌) ಈಗ ಅದರ ಬಗ್ಗೆ ಏನನ್ನೂ ಹೇಳಿಲ್ಲ. ಅವರು ಹೇಳಿದ ಬಳಿಕ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಸಮುದಾಯ ಹರಡುವಿಕೆ ಪ್ರಾರಂಭವಾಗಿದೆ ಎಂದು ರಾಜ್ಯದ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ನಿಯಂತ್ರಣ ಮತ್ತು ತಾಂತ್ರಿಕ ಸಮಿತಿಯ ಮುಖ್ಯಸ್ಥರಾಗಿರುವ ಸಾರ್ವಜನಿಕ ಆರೋಗ್ಯ ತಜ್ಞ ಡಾ| ಸುಭಾಷ್‌ ಸಲುಂಖೆ ಅಭಿಪ್ರಾಯಪಟ್ಟಿದ್ದಾರೆ.

ಸಮುದಾಯ ಪ್ರಸರಣ ಹಂತಕ್ಕೆ ತಲುಪಿದೆ: ಐಎಂಎ ಕೋವಿಡ್ ಪ್ರಕರಣ ವೇಗವಾಗಿ ಹರಡುತ್ತಿದ್ದು, ದೇಶವು ಸಮುದಾಯ ಪ್ರಸರಣ ಹಂತವನ್ನು ತಲುಪಿದೆ ಎಂದು ಭಾರತೀಯ
ವೈದ್ಯಕೀಯ ಸಂಘ (ಐಎಂಎ) ಶನಿವಾರ ಹೇಳಿದ್ದು, ರಾಜ್ಯದಲ್ಲಿ ದಿನಕ್ಕೆ 9,000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಜುಲೈ 18ರಂದು 3 ಲಕ್ಷ ಪ್ರಕರಣಗಳ ಮೈಲಿಗಲ್ಲನ್ನು
ರಾಜ್ಯ ದಾಟಿದೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಸಾವಿನ ಸಂಖ್ಯೆ 12 ಸಾವಿರ ದಾಟಿದೆ. ಸಂಪರ್ಕಗಳಿಲ್ಲದ ಪ್ರಕರಣಗಳು ಪತ್ತೆ ಮುಂಬಯಿ ಮತ್ತು ಪುಣೆಯಂತಹ ನಗರಗಳಲ್ಲಿ ಸಮುದಾಯ ಪ್ರಸರಣ ಪ್ರಾರಂಭವಾಗಿದೆ. ಈ ಮೊದಲು ಸೋಂಕಿಗೆ ಸಂಪರ್ಕವನ್ನು ಪತ್ತೆಹಚ್ಚುತ್ತಿದ್ದೆವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಸೋಂಕಿತ ಜನರಿಗೆ ಅಂತಹ ಸಂಪರ್ಕಗಳಿಲ್ಲ. ಇದರಿಂದ ಸಮುದಾಯದಲ್ಲಿ ಹರಡಿದೆ ಎಂದು ನಾವು ಒಪ್ಪಿಕೊಳ್ಳಬೇಕಾಗಿದೆ ಎಂದು ಡಾ| ಸಲೂಂಖೆ ಹೇಳಿದರು.

ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸುವ ಅಗತ್ಯವಿದೆ: ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ರಾಜ್ಯ ಎದುರಿಸುತ್ತಿರುವ ಒಂದು ಪ್ರಮುಖ ಸಮಸ್ಯೆ ಆರೋಗ್ಯ ಸಿಬಂದಿ ಕೊರತೆ, ಇದರಲ್ಲಿ ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬಂದಿಗಳು ಸೇರಿದ್ದಾರೆ. ರಾಜ್ಯದ ಕೋವಿಡ್‌ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕರೆದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ. ವೈದ್ಯರು ಸೇರಿದಂತೆ ಆರೋಗ್ಯ ಸಿಬಂದಿ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಣ್ಣ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳೊಂದಿಗೆ, ಅಲ್ಲಿನ ಆರೋಗ್ಯ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿಗೆ ತಿಳಿಸಲಾಯಿತು. ಆದರೆ ನಿಜವಾದ ಸಮಸ್ಯೆ ಆರೋಗ್ಯ ಸಿಬಂದಿಗಳ ಲಭ್ಯತೆಯಾಗಿದೆ. ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬಹುದು ಆದರೆ ವೈದ್ಯರನ್ನು ಒಳಗೊಂಡಂತೆ ಆರೋಗ್ಯ ಸಿಬಂದಿಯನ್ನು ನಾವು ಎಲ್ಲಿಂದ ಪಡೆಯುತ್ತೇವೆ ಎಂಬುದು ಒಂದು ದೊಡ್ಡ ಸಮಸ್ಯೆಯಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ಅದಿಕಾರಿಯೊಬ್ಬರು ಹೇಳಿದರು.

ಉಪನಗರಗಳಲ್ಲಿ ಕ್ಷೇತ್ರ ಆಸ್ಪತ್ರೆಗಳ ನಿರ್ಮಾಣ ಸೋಂಕನ್ನು ಎದುರಿಸಲು ಪ್ರತಿಯೊಂದು ಜಿಲ್ಲೆಯಲ್ಲೂ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಇದು ಮುಂಬಯಿಯಲ್ಲಿ ಕ್ಷೇತ್ರ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಎಂಎಂಆರ್‌ನ ಇತರ 8 ಉಪ ನಗರಗಳಾದ ಥಾಣೆ, ನವಿಮುಂಬಯಿ, ಕಲ್ಯಾಣ್‌-ಡೊಂಬಿವಲಿ,
ಮೀರಾ-ಭಾಯಂದರ್‌, ಉಲ್ಲಾಸ್‌ನಗರ, ಪನ್ವೆಲ್‌, ವಸಾಯಿ-ವಿರಾರ್‌ ಮತ್ತು ಭಿವಂಡಿ-ನಿಜಾಂಪುರಗಳಲ್ಲಿ ಇದೇ ರೀತಿಯ ಕ್ಷೇತ್ರ ಆಸ್ಪತ್ರೆಗಳನ್ನು ನಿಯೋಜಿಸಲು ಸರಕಾರ
ಮುಂದಾಗಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.