ಕ್ರಿಕೆಟ್ ಪಂದ್ಯಾಟ: ಸಾಧಕ ಕ್ರೀಡಾಳುಗಳಿಗೆ ಗೌರವ
Team Udayavani, Jan 14, 2021, 4:24 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಯುವ ವಿಭಾಗವು ಸಂಘದ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಸಹಭಾಗಿತ್ವದೊಂದಿಗೆ ಆಯೋ ಜಿಸಿದ ಬಂಟ್ಸ್ ಪ್ರೀಮಿಯರ್ ಲೀಗ್-2021 ಟಫ್ì ಕ್ರಿಕೆಟ್ ಪಂದ್ಯಾಟವು ಜ. 3ರಂದು ಬೆಳಗ್ಗೆ 8.30ರಿಂದ ಚೆಂಬೂರು ಸಂಭಾಜಿ ನಗರ ಶ್ರೀ ಸರಸ್ವತಿ ಸೊಸೈಟಿಯಲ್ಲಿರುವ ಚೆಂಬೂರು ಕರ್ನಾಟಕ ಹೈಸ್ಕೂಲ್ ಮೈದಾನದಲ್ಲಿ ಜರಗಿತು.
ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪಂದ್ಯಾಟವನ್ನು ಬಂಟ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ, ಸಂಘದ ನೂತನ ಶಿಕ್ಷಣ ಯೋಜನ ಸಮಿತಿಯ ಕಾರ್ಯದರ್ಶಿ, ಶಿವಛತ್ರಪತಿ ಪ್ರಶಸ್ತಿ ಪುರಸ್ಕೃತ ಜಯ ಎ. ಶೆಟ್ಟಿ ಅವರು ಉದ್ಘಾಟಿಸಿದರು.
ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಅತ್ಯುತ್ತಮ ಆಟಗಾರನಾಗಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಶ್ರೇಯಾಸ್ ಶೆಟ್ಟಿ, ಅತ್ಯುತ್ತಮ ಬೌಲರ್ ಆಗಿ ಥಾಣೆ ಬಂಟ್ ನ ಹರ್ಷಿತ್ ಶೆಟ್ಟಿ, ಬೆಸ್ಟ್ ವಿಕೆಟ್ ಕೀಪರ್ ಆಗಿ ಥಾಣೆ ಬಂಟ್ಸ್‌ನ ವಿನಿತ್ ಶೆಟ್ಟಿ, ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಮೀರಾ-ಭಾಯಂದರ್ ತಂಡದ ವಿನಯ್ ಶೆಟ್ಟಿ ಪಡೆದರು.
ಪಂದ್ಯಾಟವು ಕೋವಿಡ್ ಮಾರ್ಗಸೂಚಿಗಳ ನಿಯಮಗಳೊಂದಿಗೆ ನಡೆಯಿತು. ತುಳು, ಕನ್ನಡಿಗರು, ಸಮಾಜ ಬಾಂಧವರು ಪಾಲ್ಗೊಂಡು ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು. ಬಂಟರ ಸಂಘ ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಸಾಗರ್ ದಿವಾಕರ್ ಶೆಟ್ಟಿ, ಕಾರ್ಯದರ್ಶಿ ಅನುಶ್ರೀ ಶೆಟ್ಟಿ, ಕೋಶಾಧಿಕಾರಿ ನೀಲೇಶ್ ಸದಾನಂದ ಶೆಟ್ಟಿ, ಜತೆ ಕಾರ್ಯದರ್ಶಿ ವಿಕಾಸ್ ವಾಮನ್ ಶೆಟ್ಟಿ, ಜತೆ ಕೋಶಾಧಿಕಾರಿ ಸವಿನ್ ಜೆ. ಶೆಟ್ಟಿ ಮತ್ತು ಸದಸ್ಯರು ಪಾಲ್ಗೊಂಡು ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.
ಇದನ್ನೂ ಓದಿ:ಅದಮಾರು ಶ್ರೀಗಳಿಂದ “ಹೇಮಾದ್ರಿ’ ಸ್ಮರಣ ಸಂಚಿಕೆ ಬಿಡುಗಡೆ
ಭಾಗವಹಿಸಿದ ತಂಡಗಳು
ಪಂದ್ಯಾಟದಲ್ಲಿ ಸಂಘದ ನವಿಮುಂಬಯಿ ಪ್ರಾದೇಶಿಕ ಸಮಿತಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ, ಡೊಂಬಿವಲಿ ಪ್ರಾದೇಶಿಕ ಸಮಿತಿ, ಭಿವಂಡಿ-ಕಲ್ಯಾಣ್-ಬದ್ಲಾಪುರ ಪ್ರಾದೇಶಿಕ ಸಮಿತಿ, ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ, ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ, ಸಿಟಿ ಪ್ರಾದೇಶಿಕ ಸಮಿತಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿ, ಮುಲುಂಡ್ ಬಂಟ್ಸ್, ಥಾಣೆ ಬಂಟ್ಸ್, ಬೋಂಬೆ ಬಂಟ್ಸ್ ಅಸೋಸಿಯೇಶನ್, ಜವಾಬ್ ಹಾಗೂ ಸಂಘದ ಯುವ ವಿಭಾಗದ ಸದಸ್ಯರ ತಂಡಗಳು ಭಾಗವಹಿಸಿದ್ದವು
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್