ಮರಾಠಿ ಮಣ್ಣಿನಲ್ಲಿ  ಜ್ಞಾನ ದಾಸೋಹದ ಕಾರ್ಯ ಅಭಿನಂದನೀಯ

Team Udayavani, Dec 22, 2017, 12:17 PM IST

21-Mum04a.jpg

ಡೊಂಬಿವಲಿ: ಇಂದಿನ ಮಕ್ಕಳೆ ನಾಳಿನ ಸತ್ಪ್ರಜೆಗಳಾಗಿದ್ದು, ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಇಂದಿನಿಂದಲೇ ಅವರನ್ನು ಸುಸಂಸ್ಕೃತರನ್ನಾಗಿಸುವ ಪ್ರಯತ್ನವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕಾಗಿದ್ದು, ಪಾಲಕರು ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಬೇಕು ಎಂದು ವೈದ್ಯ ಡಾ| ಸುನೀಲ್‌ ಪುಣತಾಂಬೇಕರ್‌ ನುಡಿದರು.

ಡಿ. 19 ರಂದು ಡೊಂಬಿವಲಿ ಪೂರ್ವದ ಸಾವಿತ್ರಿ ಭಾಯಿ ಫುಲೆ ಸಭಾಗೃಹದಲ್ಲಿ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜನಾಥ ವಿದ್ಯಾಲಯ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಇವರು, ಕನ್ನಡ ಮತ್ತು ಮರಾಠಿ ಭಾಷಿಕರ ಅವಿನಾಭಾವ ಸಂಬಂಧವನ್ನು ಕನ್ನಡಿಗರು ತಮ್ಮ  ತಾಯ್ನಾಡಿನ ಸಂಸ್ಕೃತಿಯನ್ನು ಮರಾಠಿಗರಿಗೆ ಪರಿಚಯಿಸುವುದರ ಜೊತೆಗೆ ಮರಾಠಿ ಬಾಂಧವರೊಂದಿಗೆ ಸಾಮರಸ್ಯದ ಬದುಕು ಸಾಗಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಡೊಂಬಿವಲಿ ಕರ್ನಾಟಕ ಸಂಘ ಮರಾಠಿ ಮಣ್ಣಿನಲ್ಲಿ ಮಾಡುತ್ತಿರುವ ಜ್ಞಾನ ದಾಸೋಹದ ಕಾರ್ಯ ಅಭಿನಂದನೀಯ ಮತ್ತು ಅನುಕರಣೀಯವಾಗಿದೆ ಎಂದರು.

ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಅವರು ಮಾತನಾಡಿ,  ಕಳೆದ ಐದು ದಶಕಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಮಂಜುನಾಥ ವಿದ್ಯಾಲಯ ಇವತ್ತು ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷತೆಯನ್ನು ಹೊಂದಿದೆ. ಇದಕ್ಕೆ ಆಡಳಿತ ಮಂಡಳಿಯ ಜೊತೆಗೆ ಶಿಕ್ಷಕರ ಪರಿಶ್ರಮವು ಅಪಾರವಾಗಿದ್ದು, ಈ ಶಾಲೆಯಲ್ಲಿ  ಜ್ಞಾನಾರ್ಜನೆ ಮಾಡಿದ ಮಕ್ಕಳು ನಾಳೆ ಉತ್ತಮ ಅಧಿಕಾರಿಗಳಾಗಿ ಉದ್ದಿಮೆದಾರರಾಗಿ ದೇಶಕ್ಕೆ ಹಾಗೂ ಹೆತ್ತವರಿಗೆ, ಕಲಿತ ಶಾಲೆಗೆ ಕೀರ್ತಿ ತರಬೇಕು ಎಂದು ಕರೆನೀಡಿದರು.

ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾ ಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಸುವರ್ಣ ಮಹೋತ್ಸಸವ ಸಂಭ್ರಮದಲ್ಲಿರುವ ಡೊಂಬಿವಲಿ ಕರ್ನಾಟಕ ಸಂಘದ ಸಾಧನೆ ಪ್ರತಿಯೋರ್ವ ಕನ್ನಡಿಗರ ಕೊಡುಗೆಯಾಗಿದೆ. ಮುಂಬರುವ ದಿನಗಳಲ್ಲಿ ಈ-ಲರ್ನಿಂಗ್‌ ಪ್ರಾರಂಭಿ ಸುವ ಯೋಜನೆ ರೂಪು ಗೊಳ್ಳುತ್ತಿದ್ದು, ಆರ್ಥಿಕ ವಾಗಿ ಹಿಂದುಳಿದ ಮಕ್ಕಳಿಗೆ ನೆರವೆ ನೀಡುವ ಉದ್ದೇಶದಿಂದ ವಿದ್ಯಾ ನಿಧಿ ಯೋಜನೆಯನ್ನು ಶೀಘ್ರ ದಲ್ಲೇ ಪ್ರಾರಂಭವಾಗಲಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ರಶ್ಮೀ  ವಾರ್ಷಿಕ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಗಣ್ಯರುಗಳನ್ನು ಗೌರವಿಸಲಾ ಯಿತು. ಸಂಘದ ಉಪಾಧ್ಯಕ್ಷ ಡಾ| ದಿಲೀಪ್‌ ಕೋಪರ್ಡೆ ಗಣ್ಯರುಗಳನ್ನು ಪರಿಚಯಿಸಿ ದರು. ವೇದಿಕೆಯಲ್ಲಿ ಡಾ| ದಿಲೀಪ್‌ ಕೋಪರ್ಡೆ, ಡಾ| ವಿಜಯ ಎಂ. ಶೆಟ್ಟಿ, ದೇವದಾಸ್‌ ಕುಲಾಲ್‌, ಲೋಕನಾಥ ಶೆಟ್ಟಿ, ರಮೇಶ್‌ ಕಾಖಂಡಕಿ, ಅಜಿತ್‌ ಉಮಾರಾಣಿ, ಜಾನಕಿ ಗೌಡ, ರತ್ರಾ ಮುರಳೀಧರನ್‌ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಜಗನ್ನಾಥ ಶೆಟ್ಟಿ, ರಾಜೀವ ಭಂಡಾರಿ, ಸುಷ್ಮಾ ಶೆಟ್ಟಿ, ಮಾಧುರಿಕಾ ಬಂಗೇರ, ಸತೀಶ್‌ ಶೆಟ್ಟಿ, ಶಾಲೆಯ ಗುರುವೃಂದದವರನ್ನು ಗೌರವಿಸಲಾಯಿತು. ಶಾಲಾ ಮಕ್ಕಳು ಪ್ರಾರ್ಥನೆಗೈದರು. ಗಣ್ಯರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕಿ ನಿತಾ ಅಲೆಕರ ಕಾರRಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿಯರುಗಳಾದ ಜಾನಕಿ ಗೌಡ ಮತ್ತು ರತ್ನಾ ಮುರಳೀಧರನ್‌ ಆಯಾಯ ವಿಭಾಗದ ವರದಿ ವಾಚಿಸಿದರು. ಭಾರತಿ ಕದಂ ವಂದಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಂದ ನೃತ್ಯ ರೂಪಕ, ಗಾಯನ, ನೃತ್ಯ ವೈವಿಧ್ಯ ಪ್ರದರ್ಶನಗೊಂಡಿತು. 

ಚಿತ್ರ-ವರದಿ : ಗುರುರಾಜ ಪೋತನೀಸ.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.