ಸದಸ್ಯರು ಸಮಾಜಪರ ಕಾರ್ಯಗಳಿಗೆ ಕೈ ಜೋಡಿಸಿ: ಆರ್‌. ಕೆ. ಸುವರ್ಣ


Team Udayavani, Mar 26, 2021, 11:22 AM IST

ಸದಸ್ಯರು ಸಮಾಜಪರ ಕಾರ್ಯಗಳಿಗೆ ಕೈ ಜೋಡಿಸಿ: ಆರ್‌. ಕೆ. ಸುವರ್ಣ

ಮುಂಬಯಿ: ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್ ಮಹಾಮಾರಿಯ ಪ್ರಾರಂಭದ ದಿನಗಳಿಂದಲೂ ಪರಿಸರದ ಜನರ ಕಷ್ಟಗಳನ್ನು ಕಂಡು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಹಾರದ ಕಿಟ್‌ಗಳನ್ನು ಅಸೋಸಿಯೇಶನ್‌ ಪೂರೈಸುವಲ್ಲಿ ಯಶಸ್ವಿಯಾಗಿದೆ. ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವನ್ನು ನಿರಂತರವಾಗಿ ನೀಡುತ್ತಾ ಬರಲಾಗಿದೆ. ಸಂಕಷ್ಟದಲ್ಲಿದ್ದ ತುಳು-ಕನ್ನಡಿಗರಿಗೆ ನೆರವು ನೀಡಿ ಸಹಕರಿಸಿದ ಸಂಘದ ಪದಾಧಿಕಾರಿಗಳು, ಸದಸ್ಯರು ಅಭಿನಂದನಾರ್ಹರು ಎಂದು ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ ಡೊಂಬಿವಲಿ ಅಧ್ಯಕ್ಷ ಆರ್‌. ಕೆ. ಸುವರ್ಣ ತಿಳಿಸಿದರು.

ಮಾ. 21ರಂದು ಡೊಂಬಿವಲಿ ಪಶ್ಚಿಮದ ಠಾಕೂರ್‌ವಾಡಿಯ ಕ್ಷಿತಿಜ ಬುದ್ಧಿಮಾಂದ್ಯ ಶಾಲಾ ಸಭಾಗೃಹದಲ್ಲಿ ನಡೆದ ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌ ಡೊಂಬಿವಲಿ ಇದರ 18ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇನ್ನೋರ್ವ ಅನಾರೋಗ್ಯ ಪೀಡಿತರೋರ್ವರು ಸಹಕರಿಸುವಂತೆ ಮನವಿ ಮಾಡಿದ್ದು, ಅವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸಲಾಗುವುದು. ಸಂಘದ ಸದಸ್ಯರೆಲ್ಲರೂ ಒಮ್ಮತದಿಂದ ಸಮಾಜಪರ ಕಾರ್ಯಗಳಿಗೆ ಕೈಜೋಡಿಸಬೇಕು ಎಂದರು.

ಸಭಿಕರ ಪರವಾಗಿ ಸುಕುಮಾರ್‌ ಎನ್‌. ಶೆಟ್ಟಿ ಮಾತನಾಡಿ, ಅಧ್ಯಕ್ಷ ಆರ್‌. ಕೆ. ಸುವರ್ಣರ ನೇತೃತ್ವದಲ್ಲಿ ಸಂಸ್ಥೆಯ ಸಮಾಜಪರ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆಯುತ್ತಿರುವುದು ಅಭಿನಂದನೀಯ. ಕೋವಿಡ್ ಸಂದರ್ಭದಲ್ಲಿ ಸಂಸ್ಥೆಯು ಎಲ್ಲ ರೀತಿಯಿಂದಲೂ ಸಹಕರಿಸಿದೆ. ಕರ್ನಾಟಕ ಸಂಘ ಡೊಂಬಿವಲಿ ಇದರ ಆಡಳಿತ ಸಮಿತಿಯ ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಎಲ್ಲರಿಗೂ ವಂದನೆಗಳು ಎಂದು ತಿಳಿಸಿ ಶುಭ ಹಾರೈಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯಾ ಜೆ. ಶೆಟ್ಟಿ  ಮಾತನಾಡಿ, ಮಹಿಳಾ ವಿಭಾಗದ ಕಾರ್ಯಚಟುವಟಿಕೆಗಳು ಮೆಚ್ಚುವಂಥದ್ದಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಮಹಿಳೆಯರು ತಮ್ಮಿಂದಾದ ಅಳಿಲ ಸೇವೆಯನ್ನು ಸಲ್ಲಿಸಿದ್ದಾರೆ. ಬೆರಳೆಣಿಕೆಯ ಮಹಿಳೆಯರ ಉಪಸ್ಥಿತಿಯಲ್ಲಿ ಅರಸಿನ ಕುಂಕುಮ, ಪ್ರತಿ ಶುಕ್ರವಾರ ಭಜನ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕನ್ನಡ ಕಲಿಕೆ ತರಗತಿಯನ್ನು ಪ್ರಾರಂಭಿಸಲಿದ್ದೇವೆ ಎಂದು ತಿಳಿಸಿ, ಇತ್ತೀಚೆಗೆ ಬಂಟರ ಸಂಘದ ಜತೆ ಕಾರ್ಯದರ್ಶಿಯಾಗಿ ಆಯ್ಕೆಯಾದ ಇಂದ್ರಾಳಿ ದಿವಾಕರ ಶೆಟ್ಟಿ  ಮತ್ತು ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಸುಕುಮಾರ್‌ ಎನ್‌. ಶೆಟ್ಟಿ ಅವರನ್ನು ಅಭಿನಂದಿಸಿದರು.

ಗಣ್ಯರು ದೀಪಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿದರು. ಶಕುಂತಳಾ ಸಾಲ್ಯಾನ್‌ ಮತ್ತು ಭಾರತಿ ಶೆಟ್ಟಿ ಪ್ರಾರ್ಥನೆಗೈದರು. ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್‌ ಕರ್ಕೇರ ಸ್ವಾಗತಿಸಿದರು. ಇತ್ತೀಚೆಗೆ ನಿಧನ ಹೊಂದಿದ ದಾನಿ, ಸಮಾಜ ಸೇವಕ, ಉದ್ಯಮಿ ರಾಮಣ್ಣ ಶೆಟ್ಟಿ, ಸಂಘದ ಸದಸ್ಯರಾದ ಸುನೀತಾ ಶೆಟ್ಟಿ, ಪಾಂಡುರಂಗ ಶೇs… ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮಹಾಸಭೆ ನಡೆಯಿತು.

ಗೌರವ ಪ್ರಧಾನ ಕಾರ್ಯದರ್ಶಿ ವಿಟ್ಠಲ್‌ ಅಮೀನ್‌ ವಾರ್ಷಿಕ ವರದಿ ಮತ್ತು ಗತ ವಾರ್ಷಿಕ ವರದಿ ವಾಚಿಸಿ, ಅಶೋಕ್‌ ಅಮೀನ್‌ ಸೂಚನೆಯೊಂದಿಗೆ ರಾಮಕೃಷ್ಣ ಕರ್ಕೇರ ಅವರ ಅನುಮೋದನೆಯೊಂದಿಗೆ ಅಂಗೀಕರಿಸಲಾಯಿತು. ಕೋಶಾಧಿಕಾರಿ ಸದಾಶಿವ ಸಾಲ್ಯಾನ್‌ ಅವರು ಲೆಕ್ಕಪತ್ರ ಮಂಡಿಸಿದ್ದು, ಧನಂಜಯ ಮೂಳೂರು ಸೂಚನೆ ಮತ್ತು ಭಾರತಿ ಶೆಟ್ಟಿ ಅವರ ಅನುಮೋದನೆಯೊಂದಿಗೆ ಅಂಗೀಕರಿಸಲಾಯಿತು. ಲೆಕ್ಕ ಪರಿಶೋಧಕರನ್ನಾಗಿ ನವೀನ್‌ ದೇಡಿಯಾ ಕಂಪೆನಿಯನ್ನು ಆಯ್ಕೆ ಮಾಡಲಾಯಿತು. ಆಂತರಿಕ ಲೆಕ್ಕ ಪರಿಶೋಧಕ ಶರತ್‌ ಕೆ. ಶೆಟ್ಟಿ ಅವರನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಅಜೆಕಾರು ಜಯ ಶೆಟ್ಟಿ, ಕಾರ್ಯದರ್ಶಿ ವಿಟuಲ ಅಮೀನ್‌, ಕೋಶಾಧಿಕಾರಿ ಸದಾಶಿವ ಸಾಲ್ಯಾನ್‌, ಜತೆ ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಜತೆ ಕೋಶಾಧಿಕಾರಿ ಕೆ. ಕೆ ಸಾಲ್ಯಾನ್‌, ಸಲಹೆಗಾರರಾದ ರಾಜೀವ ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉದಯಾ ಜೆ. ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಸಾಲ್ಯಾನ್‌, ಕೋಶಾಧಿಕಾರಿ ಸುಮಂಗಲಾ ಸುವರ್ಣ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿನೋದ್‌ ಕರ್ಕೇರ, ಕಾರ್ಯದರ್ಶಿ ಸಚಿನ್‌ ಕೋಟ್ಯಾನ್‌ ಉಪಸ್ಥಿತರಿದ್ದರು. ದಾಮೋದರ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ವಿಟuಲ ಅಮೀನ್‌ ವಂದಿಸಿದರು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಜಾತಿ, ಮತ ಭೇದವಿಲ್ಲದೆ ಒಮ್ಮತದಿಂದ ಒಗ್ಗೂಡಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಗಳನ್ನು ಶಿಸ್ತುಬದ್ಧವಾಗಿ ನಿರ್ವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿರುವ ಈ ಸಂಸ್ಥೆಯ ಸಲಹೆಗಾರನಾಗಿ ಕಾರ್ಯನಿರ್ವಹಿಸಲು ನನಗೆ ಹೆಮ್ಮೆಯಾಗುತ್ತಿದೆ. ಕೊರೊನಾ ಸಂದರ್ಭದಲ್ಲೂ ಧೃತಿಗೆಡದೆ ಡೊಂಬಿವಲಿ ಪರಿಸರದ ಆರ್ಥಿಕವಾಗಿ ಹಿಂದುಳಿದ ತುಳು, ಕನ್ನಡಿಗರಿಗೆ ಸಹಕರಿಸಿ ಮಾನವೀಯತೆ ಮೆರೆದಿದೆ. ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷನಾಗಿ ಪುನರಾಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು. ನನ್ನಿಂದಾಗುವ ಎಲ್ಲ ರೀತಿಯ ಸಹಾಯ, ಸಹಕಾರ ಸಂಸ್ಥೆಗೆ ಸದಾಯಿದೆ. ಇಂದ್ರಾಳಿ ದಿವಾಕರ ಶೆಟ್ಟಿ , ಸಲಹೆಗಾರರು, ಸಿರಿನಾಡ ವೆಲ್ಫೇ ರ್‌ ಅಸೋಸಿಯೇಶನ್‌

ಸಮಾಜಪರ ಕೆಲಸಗಳಿಂದ ಎಲ್ಲರ ಮನೆ ಮಾತಾಗಿರುವ ಸಿರಿನಾಡ ವೆಲ್ಫೆàರ್‌ ಅಸೋಸಿಯೇಶನ್‌ನ ಪ್ರಗತಿಗೆ ಕಾರಣಕರ್ತರಾದ ಪದಾಧಿಕಾರಿಗಳು, ಸದಸ್ಯರು ಅಭಿನಂದನಾರ್ಹರು. ಸಂಸ್ಥೆಗಳ ಉಪಸಮಿತಿಗಳು ಪ್ರಧಾನ ಸಮಿತಿಗೆ ಉತ್ತಮ ರೀತಿಯಲ್ಲಿ  ಸ್ಪಂದಿಸುತ್ತಿದ್ದು, ಸದಸ್ಯರೆಲ್ಲರು ಒಂದೇ ತಾಯಿಯ ಮಕ್ಕಳಂತೆ ಸಹಬಾಳ್ವೆಯೊಂದಿಗೆ ಸಂಸ್ಥೆಯನ್ನು ಒಗ್ಗಟ್ಟಿನಿಂದ ಮುನ್ನಡೆಸೋಣ. ಇತ್ತೀಚೆಗೆ ಬಂಟರ ಸಂಘದ ಜತೆ ಕಾರ್ಯದರ್ಶಿಯಾಗಿ ಆಯ್ಕೆಯಾದ ಇಂದ್ರಾಳಿ ದಿವಾಕರ ಶೆಟ್ಟಿ  ಮತ್ತು ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಸುಕುಮಾರ್‌ ಎನ್‌. ಶೆಟ್ಟಿ ಅವರಿಗೆ ಅಭಿನಂದನೆಗಳು. ವಸಂತ್‌ ಸುವರ್ಣ, ಸಲಹೆಗಾರರು  ಸಿರಿನಾಡ ವೆಲ್ಫೇರ್‌ ಅಸೋಸಿಯೇಶನ್‌

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.