ಡಾ| ಶಾಲಿನಿ ವಿ. ಶೆಟ್ಟಿ ಅವರ ಸಾಧನೆ ಯುವಪೀಳಿಗೆಗೆ ಮಾದರಿ: ರಂಜನಿ ಹೆಗ್ಡೆ

ಬಂಟರ ಸಂಘ ಮಹಿಳಾ ವಿಭಾಗದ ವಾರ್ಷಿಕ "ಪ್ರೇಮಾ ನಾರಾಯಣ ರೈ ಪ್ರಶಸ್ತಿ' ಪ್ರದಾನ

Team Udayavani, Dec 31, 2020, 6:28 PM IST

shalini

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ 28ನೇ ಕಾರ್ಯಕಾರಿ ಸಮಿತಿ ಸಭೆಯು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಡಿ. 28ರಂದು ಅಪರಾಹ್ನ ಕುರ್ಲಾ ಪೂರ್ವ ಬಂಟರ ಭವನದ  ಶ್ರೀಮತಿ ಕಾಶಿ ಸಿದ್ಧು ಶೆಟ್ಟಿ ಕಿರು ಸಭಾಗೃಹದಲ್ಲಿ ಜರಗಿತು.

ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ಸದಸ್ಯೆ ಜ್ಯೋತಿ ಆರ್‌. ಎನ್‌. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಸಂಘದ ಮಹಿಳಾ ವಿಭಾಗವು ವರ್ಷದ ಅತ್ಯುತ್ತಮ ಮಹಿಳಾ ಸಾಧಕಿಯೋರ್ವರಿಗೆ ಪ್ರತೀ ವರ್ಷ ನೀಡುತ್ತಾ ಬರುತ್ತಿರುವ ಪ್ರೇಮಾ ನಾರಾಯಣ ರೈ ಪ್ರಶಸ್ತಿಯನ್ನು ಈ ಬಾರಿ ವೈದ್ಯಕೀಯ ಕ್ಷೇತ್ರದಲ್ಲಿ ಸುಮಾರು 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನವಿಮುಂಬಯಿಯ ಹೆಸರಾಂತ ವೈದ್ಯೆ ಡಾ| ಶಾಲಿನಿ ವಾಸುದೇವ ಶೆಟ್ಟಿ ಎಂ. ಡಿ. ಇವರಿಗೆ ಪ್ರದಾನ ಮಾಡಲಾಯಿತು.

ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಕೋಶಾಧಿಕಾರಿ ಆಶಾ ವಿ. ರೈ, ಜತೆ ಕಾರ್ಯದರ್ಶಿ ಮನೋರಮಾ ಎನ್‌. ಬಿ. ಶೆಟ್ಟಿ, ಜತೆ ಕೋಶಾಧಿಕಾರಿ ರತ್ನಾ ವಿ. ಶೆಟ್ಟಿ, ಪ್ರಶಸ್ತಿಯ ಪ್ರಾಯೋಜಕಿ ಜ್ಯೋತಿ ಆರ್‌. ಎನ್‌. ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತರಾದ ಡಾ| ಶಾಲಿನಿ ವಾಸುದೇವ ಶೆಟ್ಟಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸಮ್ಮಾನ ಪತ್ರ ಹಾಗೂ ನಗದು ಪುರಸ್ಕಾರ ನೀಡಿ ಸಮ್ಮಾನಿಸಿದರು. ಕೋಶಾಧಿಕಾರಿ ಆಶಾ ವಿ. ರೈ ಸಮ್ಮಾನ ಪತ್ರ ವಾಚಿಸಿದರು. ಪ್ರಶಸ್ತಿ ಪುರಸ್ಕೃತರ ಜತೆಗೆ ಅವರ ಮಾತಾಪಿತರಾದ ಯಕ್ಷಗಾನ ಕಲಾವಿದ, ಸಂಘದ ಸದಸ್ಯ, ಹಿರಿಯರಾದ ಕೆ. ಕೆ. ಶೆಟ್ಟಿ ಮತ್ತು ನೇತ್ರಾವತಿ ಕೆ. ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರಾದ ಡಾ| ಶಾಲಿನಿ ವಾಸುದೇವ ಶೆಟ್ಟಿ ಅವರು ಪ್ರಶಸ್ತಿಯೊಂದಿಗೆ ಸಂಘವು ನೀಡಿದ ಗೌರವಧನವನ್ನು ಮಹಿಳಾ ವಿಭಾಗಕ್ಕೆ ಹಿಂದಿರುಗಿಸಿ, ತನ್ನ ವತಿಯಿಂದ ಮಹಿಳಾ ವಿಭಾಗಕ್ಕೆ ಚೆಕ್‌ ಮೂಲಕ ದೇಣಿಗೆ ನೀಡಿ ಆರ್ಥಿಕವಾಗಿ ತೊಂದರೆಯಲ್ಲಿರುವವರಿಗೆ ಇದರಿಂದ ಸಹಾಯಕವಾಗಲಿ ಎಂದು ಮಹಿಳಾ ವಿಭಾಗಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ:ಆಯವ್ಯಯ ಶಾಸ್ತ್ರದ ಕಾರ್ಯಸಾಧನೆ ಕಷ್ಟಕರ: ಡಾ| ಹೆಗ್ಗಡೆ

ಪ್ರಸಿದ್ಧ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಅವರ ಹೆಸರಿನಲ್ಲಿ ಅವರ ಪುತ್ರಿ ಭೂಮಿಕಾ ಎಂ. ಶೆಟ್ಟಿ ಅವರು ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಪ್ರತೀ ವರ್ಷ ಆಯೋಜಿಸುತ್ತಿರುವ ಬಂಟರವಾಣಿ ಲೇಖನ ಸ್ಪರ್ಧೆಯಲ್ಲಿ ಈ ಬಾರಿ ಬಹುಮಾನ ಪಡೆದ ಸ್ಪರ್ಧಿಗಳ ಹೆಸರನ್ನು ಬಂಟರ ವಾಣಿಯ ಸಂಪಾದಕ ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಘೋಷಿಸಿದರು. ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ ಮಾತನಾಡಿ, ಡಾ| ಶಾಲಿನಿ ವಿ. ಶೆಟ್ಟಿ ಅವರು ತನ್ನ ಆತ್ಮವಿಶ್ವಾಸ, ಅಪರಿಮಿತ ಪರಿಶ್ರಮ ಮತ್ತು ಛಲದಿಂದ ಮುಂದೆ ಬಂದವರು. ಕನ್ನಡ ಮಾಧ್ಯಮದಲ್ಲಿ ಕಲಿತರೂ ಬದುಕಿನಲ್ಲಿ ಸಾಧನೆಯ ಮೂಲಕ ಏನನ್ನೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟವರು. ಅವರ ಸಾಧನೆ

ಇತರರಿಗೂ ಮಾದರಿಯಾಗಿದೆ ಎಂದು ತಿಳಿಸಿ, ಡಾ| ಶಾಲಿನಿ ವಿ. ಶೆಟ್ಟಿ ಅವರ ತಂದೆ ಕೆ. ಕೆ. ಶೆಟ್ಟಿ ಅವರ ಬಗ್ಗೆ ಇರುವ ಅಪಾರ ಗೌರವ, ಕುಟುಂಬದೊಂದಿಗಿನ ಅನ್ಯೋನ್ಯ ಸಂಬಂಧದ ಬಗ್ಗೆ ತಿಳಿಸಿ ಕೆ. ಕೆ. ಶೆಟ್ಟಿ ದಂಪತಿಯನ್ನು ಅಭಿನಂದಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಮೂರು ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಮಹಿಳಾ ಪದಾಧಿಕಾರಿಗಳು, ಸದಸ್ಯೆಯರು ನೀಡಿದ ಸಹಕಾರವನ್ನು ಎಂದಿಗೂ ಮರೆಯುವಂತಿಲ್ಲ. ಮುಖ್ಯವಾಗಿ ನಮ್ಮ ದಾನಿಗಳ ಪ್ರೋತ್ಸಾಹಕ್ಕೆ ಚಿರಋಣಿಯಾಗಿದ್ದೇನೆ ಎಂದು ಶುಭ ಹಾರೈಸಿದರು.

ಸಭೆಯಲ್ಲಿ ಬಂಟರ ಸಂಘದ ಮಹಿಳಾ ವಿಭಾಗಕ್ಕೆ ದೇಣಿಗೆ ನೀಡಿ ಸಹಕರಿಸಿದ ಪ್ರೇಮಾ ಸುಧಾಕರ ಶೆಟ್ಟಿ ಅವರನ್ನು ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ ಅವರು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಆರಂಭದಲ್ಲಿ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ:ಚಿಣ್ಣರ ಬಿಂಬದ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ತರ:  ಪ್ರಕಾಶ್ ಭಂಡಾರಿ

ಬಂಟರ ಸಂಘದ ಮಹಿಳಾ ವಿಭಾಗವು ತನ್ನನ್ನು ಗೌರವಿಸಿದ್ದಕ್ಕೆ ಕೃತಜ್ಞಳಾಗಿದ್ದೇನೆ. ನಾನು ಕನ್ನಡ ಮಾಧ್ಯಮದಲ್ಲಿ ಕಲಿತವಳು. ಮುಂದೆ ಇಂಗ್ಲಿಷ್‌ ಕಲಿತು ವೈದ್ಯಕೀಯ ಕ್ಷೇತ್ರಕ್ಕೆ ಬರಬೇಕು ಎಂಬ ಹಂಬಲ ನನ್ನಲ್ಲಿತ್ತು. ಅದಕ್ಕಾಗಿ ಅಪಾರ ಪರಿಶ್ರಮಪಟ್ಟು ಇಂಗ್ಲಿಷ್‌ ಮಾಧ್ಯಮದಲ್ಲಿ ಓದು ಮುಂದುವರಿಸಿ ಮುಂದೆ ಎಂಬಿಬಿಎಸ್‌, ಆ ಬಳಿಕ ಎಂಡಿ ಮುಗಿಸಿದೆ. ನಾನಿಂದು ವೈದ್ಯಳಾಗಿ ಯಶಸ್ಸು ಹೊಂದಲು ನನ್ನ ಮಾತಾಪಿತರು ನೀಡಿದ ಪ್ರೋತ್ಸಾಹ, ಪ್ರೇರಣೆ ಕಾರಣವಾಗಿದೆ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಆಶ್ರಮದಲ್ಲಿರುವ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿಯಿಂದ ಸೇವೆಗೈಯುತ್ತಿರುವ ನನಗೆ ನನ್ನ ವೃತ್ತಿಯಲ್ಲಿ ಸಂತೃಪ್ತಿ ದೊರಕಿದೆ. ಸಂಘದ ಮಹಿಳಾ ವಿಭಾಗದ ಮಹಿಳೆಯರ ಆರೋಗ್ಯದ ಬಗ್ಗೆ ವೈದ್ಯಕೀಯ ಶಿಬಿರ ಮಾಡುವುದಿದ್ದಲ್ಲಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ.

ಡಾ| ಶಾಲಿನಿ ವಾಸುದೇವ ಶೆಟ್ಟಿ, ಪ್ರಶಸ್ತಿ ಪುರಸ್ಕೃತರು

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.