ಗ್ರಾಮೀಣ ಆಸ್ಪತ್ರೆ ಬಲಪಡಿಸುವತ್ತ ಗಮನ ಹರಿಸಿ: ಅಜಿತ್‌

Team Udayavani, Sep 21, 2020, 7:51 PM IST

ಗ್ರಾಮೀಣ ಆಸ್ಪತ್ರೆ ಬಲಪಡಿಸುವತ್ತ  ಗಮನ ಹರಿಸಿ: ಅಜಿತ್‌

ಪುಣೆ, ಸೆ. 20: ಪುಣೆ ನಗರದ ಆಸ್ಪತ್ರೆಗಳ ಮೇಲೆ ಹೊರೆಯಾಗುವ ಬದಲು ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಡಳಿತ ಗ್ರಾಮೀಣ ಪ್ರದೇಶದ ಆಸ್ಪತ್ರೆಗಳನ್ನು ಬಲಪಡಿಸುವತ್ತ ಗಮನ ಹರಿಸಬೇಕು ಎಂದು ಪುಣೆಯ ಜಿಲ್ಲಾ ಉಸ್ತುವಾರಿ ಸಚಿವ ಅಜಿತ್‌ ಪವಾರ್‌ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಕೋವಿಡ್‌ ಪರಿಸ್ಥಿತಿ ಪರಿಶೀಲಿಸಲು ಪವಾರ್‌ ನಗರದಲ್ಲಿ ಚುನಾಯಿತ ಸದಸ್ಯರೊಂದಿಗೆ ಸಭೆ ನಡೆಸಿದರು. ಪುಣೆ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿದ್ದಂತೆ ಸೋಂಕಿತರ ನಿರ್ಣಾಯಕ ಚಿಕಿತ್ಸೆಗಾಗಿ ಪುಣೆಗೆ ಧಾವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆಮ್ಲಜನಕ ಹಾಸಿಗೆಗಳ ಕೊರತೆ ಇರುವುದರಿಂದ ಅಲ್ಲಿಂದ ರೋಗಿಗಳು ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್‌ ಆಸ್ಪತ್ರೆಗಳಿಗೆ ದಾಖಲು ಮಾಡಲು ಬಯಸುತ್ತಾರೆ. ಆದ್ದರಿಂದ ಗ್ರಾಮೀಣ ಆಸ್ಪತ್ರೆಗಳನ್ನು ಬಲಪಡಿಸಲು ರಾಜ್ಯ ಸರಕಾರ ಸಾಕಷ್ಟು ಹಣವನ್ನು ಒದಗಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಾದ ಮೂಲಸೌಕರ್ಯ ಮತ್ತು ಆಮ್ಲಜನಕವನ್ನು ಒದಗಿಸಲು ಆಡಳಿತವು ಆದ್ಯತೆ ನೀಡಬೇಕು. ಇದರಿಂದ ರೋಗಿಗಳು ತಮ್ಮ ಸ್ಥಳಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆರೋಗ್ಯ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಗರಿಷ್ಠ ಸಂಖ್ಯೆಯ ಆಮ್ಲಜನಕ ಹಾಸಿಗೆಗಳನ್ನು ಸ್ಥಾಪಿಸುವ ಕೆಲಸವನ್ನು ವೇಗಗೊಳಿಸಬೇಕು ಎಂದು ಪವಾರ್‌ ಹೇಳಿದ್ದಾರೆ.

ಎನ್‌ಸಿಪಿಯ ಕ್ಯಾಬಿನೆಟ್‌ ಸಚಿವ ದಿಲೀಪ್‌ ವಾಲ್ಸೆ ಪಾಟೀಲ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹೋಂ ಕ್ವಾರಂಟೈನ್‌ ಮತ್ತು ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹೋಂ ಕ್ವಾರಂಟೈನ್‌ನಲ್ಲಿರುವ ಜತೆ ಸಂಪರ್ಕ ಸ್ಥಾಪಿಸಲುನ ಪುಣೆ ಜಿಲ್ಲಾ ಪರಿಷತ್‌ ಮತ್ತು ಜಿಲ್ಲಾ ಕಲೆಕ್ಟರೇಟ್‌ ವ್ಯವಸ್ಥೆಯನ್ನು ಮಾಡಬೇಕು. ಪ್ರತಿದಿನವೂ ಅವರ ಆರೋಗ್ಯವನ್ನು ಪರೀಕ್ಷಿಸುವುದರೊಂದಿಗೆ ಆಡಳಿತವು ಆ ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದಿದ್ದಾರೆ.

ರಾಜ್ಯ ಸಚಿವ ದತ್ತಾ ಭಾರ್ನೆ ಅವರು ಮಾತನಾಡಿ, ಇದೀಗ ಗರಿಷ್ಠ ಸಂಖ್ಯೆಯ ಸೋಂಕಿತರು ಚಿಕಿತ್ಸೆಗಾಗಿ ನಗರ ಪ್ರದೇಶಗಳಿಗೆ, ಮುಖ್ಯವಾಗಿ ಪುಣೆಗೆ ಹೋಗುತ್ತಿದ್ದಾರೆ. ಈ ಕಾರಣದಿಂದ ನಗರದಲ್ಲಿ ಹಾಸಿಗೆ ಅಲಭ್ಯವಾಗಿದೆ. ಆಡಳಿತದ ಸಾಕಷ್ಟು ಪ್ರಯತ್ನಗಳನ್ನು ಮಾಡಿ ಗ್ರಾಮೀಣ ಪ್ರದೇಶದಲ್ಲಿ ಚಿಕಿತ್ಸೆಯನ್ನು ಲಭ್ಯಗೊಳಿಸಿದರೆ, ಇದು ನಗರದ ಆಸ್ಪತ್ರೆಗಳ ಮೇಲಿನ ಹೊರೆ ಸರಾಗವಾಗಿಸಲು ಸಹಾಯ ಮಾಡುತ್ತದೆ. ಗ್ರಾಮೀಣ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್‌ಗಳನ್ನು ಸಿದ್ಧವಾಗಿಡಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.