“ಕೋವಿಡ್ ಮಾರ್ಗಸೂಚಿಗಳನ್ನು ಕಡಾಯವಾಗಿ ಪಾಲಿಸಿ’

Team Udayavani, Dec 11, 2020, 8:13 PM IST

“ಕೋವಿಡ್ ಮಾರ್ಗಸೂಚಿಗಳನ್ನು ಕಡಾಯವಾಗಿ ಪಾಲಿಸಿ’

ಮುಂಬಯಿ, ಡಿ. 10: ಮೀರಾರೋಡ್‌ ಭಾರತಿ ಪಾರ್ಕ್‌ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಇದರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆಯು ಡಿ. 5ರಂದು ಸಂಜೆ ಮೀರಾರೋಡ್‌ ಪೂರ್ವದ ಭಾರತಿ ಪಾರ್ಕಿನ ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಇದೇ ಸಂದರ್ಭದಲ್ಲಿ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರ ಪೌರೋಹಿತ್ಯದಲ್ಲಿ ಭಜನೆ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಡಿಪೂಜೆ, ಕರ್ಪೂರಾರತಿ, ಶ್ರೀ ಲಕ್ಷ್ಮೀನಾರಾಯಣ ಹಾಗೂ ಮಂದಿರದ ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆಯಿತು.

ಸೇವಾರ್ಥಿಗಳನ್ನು ಗೌರವಿಸಿ ಭಕ್ತರಿಗೆ ಪ್ರಸಾದ ವಿತರಿಸಿ ಮಾತನಾಡಿದ ಗುರುಸ್ವಾಮಿ ಜಯಶೀಲ ತಿಂಗಳಾಯ ಅವರು, ಸರಕಾರದ ಷರತ್ತುಬದ್ಧ ಸೂಚನೆಯಿಂದ ಶಬರಿಮಲೆ ಶ್ರೀ ಸನ್ನಿಧಿಗೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಅನಾನುಕೂಲವಾಗಿದ್ದಲ್ಲಿ ಅಂಥವರು ಮೀರಾರೋಡ್‌ ಪೂರ್ವದ, ಅಯ್ಯಪ್ಪ ಮಾರ್ಗ, ಶಾಂತಿ ನಗರ ಸೆಕ್ಟರ್‌- 2ರ ಎದುರುಗಡೆ ಇರುವ ಅಯ್ಯಪ್ಪ ಮಂದಿರದಲ್ಲಿ 18 ಮೆಟ್ಟಲುಗಳನ್ನು ಹತ್ತಿ ತುಪ್ಪದ ಅಭಿಷೇಕ, ಅರವಣ ಪಾಯಸ, ಅಪ್ಪ ಪ್ರಸಾದ ಮೊದಲಾದ ಹರಕೆ ಸಲ್ಲಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬಹುದು. ಆಡಳಿತ ಮಂಡಳಿಯ ನಿರ್ದೇಶನದಂತೆ ಭಕ್ತರು ಮುಂಚಿತವಾಗಿ ಹೆಸರನ್ನು ನೊಂದಾಯಿಸಬೇಕು. ಬೆಳಗ್ಗೆ 7 ರಿಂದ 11ರ ತನಕ ಸಮಯ ನಿಗದಿಯಾಗಿದ್ದು, ಭಕ್ತರ ಸಂಖ್ಯೆ 50ಕ್ಕೆ ಮೀರಿರಬಾರದು. ಲಘು ಉಪಹಾರವನ್ನು ಮಂದಿರದ ವತಿಯಿಂದ ಕಲ್ಪಿಸಲಾಗಿದೆ ಎಂದು ಹೇಳಿದ ಅವರು ಪ್ರತಿ ಸಂದರ್ಭದಲ್ಲಿ ಸ್ವಚ್ಛತೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಇನ್ನಿತರ ಮಾರ್ಗಸೂಚಿಗಳನ್ನು ಅನುಸರಿಸಿಕೊಳ್ಳಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಸ್ವಾಮಿಗಳಾದ ಶೈಲೇಶ್‌ ಪಾಟೀಲ್, ಅಖೀಲೇಶ್‌ ಉಪಾಧ್ಯಾಯ, ಮಾಧವ ಸಿ. ಕೋಟ್ಯಾನ್‌, ಪ್ರವೀಣ್‌ ಶೆಟ್ಟಿ, ಸುಧೀರ್‌ ಪುತ್ರನ್‌, ಲೀಲಾಧರ್‌ ಅಂಚನ್‌, ಸಿ. ಎನ್‌. ಪೂಜಾರಿ, ಸಂತೋಷ್‌ ಶೆಟ್ಟಿ, ಗಣೇಶ್‌ ದೇವಾಡಿಗ, ಸತೀಶ್‌ ಸೇರಿಗಾರ್‌, ಸ್ವಪ್ನಿಲ್‌ ಸಿ. ಪೂಜಾರಿ, ಸಂತೋಷ್‌ ಶೆಟ್ಟಿ ವಿರಾರ್‌, ನವೀನ್‌ ಸಾಧುಲ್‌, ರಾಜೇಶ್‌ ಪೂಜಾರಿ, ಜಯಂತ್‌ ಶೆಟ್ಟಿ ಸಹಕರಿಸಿದರು. ಭಕ್ತರು ಸರಕಾರದ ನಿಯಮದಂತೆ ಪ್ರಸಾದ ಸ್ವೀಕರಿಸಿದರು.

ಶಬರಿಮಲೆ ಮಂದಿರದ ತದ್ರೂಪ :

ಮೀರಾರೋಡ್‌ ಪೂರ್ವದ ಶ್ರೀ ಅಯ್ಯಪ್ಪ ಮಾರ್ಗ, ಶಾಂತಿ ನಗರ ಸೆಕ್ಟರ್‌ 2ರ ಎದುರುಗಡೆ ಇರುವ ಅಯ್ಯಪ್ಪ ಮಂದಿರವು ಶಬರಿಮಲೆಯಲ್ಲಿರುವ ಶ್ರೀ ಸನ್ನಿಧಿಯ ಅಯ್ಯಪ್ಪ ಮಂದಿರದ ತದ್ರೂಪವಾಗಿ ವಾಸ್ತುಶಾಸ್ತ್ರದಂತೆ ನಿರ್ಮಾಣಗೊಂಡಿದೆ. ಅಯ್ಯಪ್ಪ ಸ್ವಾಮಿಯ ಮೂರ್ತಿ, ಧ್ವಜಸ್ತಂಭ, ಹದಿನೆಂಟು ಮೆಟ್ಟಲುಗಳು ಶ್ರೀಕ್ಷೇತ್ರದ ಮಣ್ಣಿನೊಂದಿಗೆ ರಚಿತವಾಗಿದೆ. ಸನ್ನಿಧಿಯ ತಂತ್ರಿಯವರೇ ಮೀರಾರೋಡ್‌ಗೆ ಆಗಮಿಸಿ ಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ಕಳೆದ ವರ್ಷ ಸುಮಾರು 200 ಮಂದಿ ಭಕ್ತರು ತುಪ್ಪದ ಅಭಿಷೇಕ ಮಾಡಿಸಿ ವ್ರತವನ್ನು ಪೂರ್ಣಗೊಳಿಸಿದ್ದಾರೆ.

-ಚಿತ್ರ – ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ: ಪ್ರವೀಣ್‌ ಶೆಟ್ಟಿ ಪುತ್ತೂರು ಆಯ್ಕೆ

Untitled-1

ಗಡ್ಚಿರೋಲಿಯ ಆನೆಗಳ ಮೇಲೂ ರಾಜಕೀಯ ಸವಾರಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ನೀರಿನ ಸಮಸ್ಯೆ ಇದ್ದರೂ ಡೆವಲಪರ್‌ಗಾಗಿ ನೀರು ಕಾಯ್ದಿರಿಸಿದ ಸರಕಾರ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

ಇಷ್ಟಲಿಂಗ ಪೂಜೆಯಿಂದ ಭವಬಂಧನದ ಮುಕ್ತಿ ಸಾಧ್ಯ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.