ಘನ್ಸೋಲಿ ಮೂಕಾಂಬಿಕಾ ದೇವಾಲಯ: ಉತ್ಸವ


Team Udayavani, Feb 11, 2018, 12:15 PM IST

0902mum11.jpg

ನವಿ ಮುಂಬಯಿ: ಕಾರಣಿಕ ಕ್ಷೇತ್ರ ಎಂದೇ ಬಿಂಬಿತಗೊಂಡಿರುವ ಶ್ರೀ ಕ್ಷೇತ್ರ ಘನ್ಸೋಲಿ ಮೂಕಾಂಬಿಕಾ ದೇವಾಲಯದ 15 ನೇ ವಾರ್ಷಿಕ ಮಹೋತ್ಸವವು ಫೆ. 9 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಫೆ. 6 ರಂದು ಶ್ರೀ ಕ್ಷೇತ್ರದ ವಾರ್ಷಿಕ ಉತ್ಸವವು ಅದ್ದೂರಿಯಾಗಿ ಚಾಲನೆಗೊಂಡಿದ್ದು,  ಫೆ. 10 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಫೆ. 9 ರಂದು ಸೂರ್ಯೋದಯಕ್ಕೆ ಕವಾಟ ಉದ್ಘಾಟನೆ, ತೈಲಭ್ಯಂಗ, ಪಂಚಾಮೃತ ಅಭಿಷೇಕ, ದೇವಿಗೆ 49 ಕಲಶಾಭಿಷೇಕ, ಸಹಸ್ರ ನಾಮಾರ್ಚನೆ ಪೂರ್ವಕ ಮಹಾಪೂಜೆ, ಉತ್ಸವ ಬಲಿ, ಪಲ್ಲಪೂಜೆ, ಮಧ್ಯಾಹ್ನ 1 ರಿಂದ ಮಹಾ ಅನ್ನಸಂತರ್ಪಣೆ ನಡೆಯಿತು. ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಅಪರಾಹ್ನ  4 ರಿಂದ ಭಕ್ತಿ ಪ್ರವಚನ, ಶ್ರೀ ಮೂಕಾಂಬಿಕಾ ಮಹಿಳಾ ಮಂಡಳಿಯಿಂದ ಅರಸಿನ ಕುಂಕುಮ, ಸಂಜೆ 5 ರಿಂದ ಸಂಕೀರ್ತನೆ, ಮಹಾಪೂಜೆ, ಮಹಾರಂಗ ಪೂಜೆ, ಉತ್ಸವ ಬಲಿ, ಕಟ್ಟೆಪೂಜೆ, ಅವಭೃತ ಸ್ನಾನ, ಜಲಕದ ಬಲಿ, ಅನ್ನಪ್ರಸಾದ ನಡೆಯಿತು.

ಫೆ. 7 ರಂದು ಬೆಳಗ್ಗೆ 7 ರಿಂದ ಸಾಮೂಹಿಕ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ತೋರಣ ಮುಹೂರ್ತ, ಶ್ರೀ ದೇವಿಗೆ ನವಕ ಪ್ರಧಾನ ಕಲಶಾಭಿಷೇಕ, ನವಗ್ರಹಯಾಗ, ದ್ವಾದಶ ನಾಳಿಕೇರ, ಅಷ್ಟದ್ರವ್ಯ ಮಹಾಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನದಾನ, ಸಂಜೆ 5 ರಿಂದ ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ಅನ್ನಪ್ರಸಾದ ನಡೆಯಿತು.

ಫೆ. 8 ರಂದು ಬೆಳಗ್ಗೆ 7 ರಿಂದ ಶ್ರೀ ದೇವಿಗೆ ನವಕ ಪ್ರಧಾನ ಕಲಶಾಭಿಷೇಕ, ಗಣಪತಿ ದೇವರಿಗೆ ನವಕ ಪ್ರಧಾನ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಮಹಾಪೂಜೆ, ಅನ್ನದಾನ, ಸಂಜೆ 5 ರಿಂದ ಗಣಪತಿ ದೇವರಿಗೆ ರಂಗಪೂಜೆ, ಮಹಾಪೂಜೆ, ಉತ್ಸವ ಬಲಿ, ಅನ್ನಪ್ರಸಾದ, ಮಹಾಭೂತ ಬಲಿ, ಕವಾಟ ಬಂಧನ ಜರಗಿತು.

ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದ ತಂತ್ರಿವರ್ಯರಾದ ವಿದ್ವಾನ್‌ ರಾಮಚಂದ್ರ ಬಾಯಾರಿ ಕಾರ್ಕಳ ಇವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಗುರು ಪ್ರಸಾದ್‌ ಭಟ್‌ ಅವರ ಸಹಯೋಗದೊಂದಿಗೆ ನಡೆಯಿತು. ಪುರೋಹಿತ ವರ್ಗದವರಾದ ಹರೀಶ್‌ ತಂತ್ರಿ, ನಾಗರಾಜ್‌ ಭಟ್‌,  ಶಶಾಂಕ್‌ ಭಟ್‌, ಶ್ಯಾಮ್‌ ಭಟ್‌ ಮೊದಲಾದವರು ಸಹಕರಿಸಿದರು. ಕುಂಟಾಡಿ ಸುರೇಶ್‌ ಭಟ್‌ ಇವರಿಂದ ಉತ್ಸವ ಬಲಿ ನಡೆಯಿತು. ಚೆಂಡೆಯಲ್ಲಿ ತುಕರಾಮ್‌ ದೇವಾಡಿಗ ಮತ್ತು ವಾದ್ಯದಲ್ಲಿ ದಿನೇಶ್‌ ಕೋಟ್ಯಾನ್‌ ಬಳಗದವರು ಸಹಕರಿಸಿದರು.

ದೇವಾಲಯ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಜರಗಿದ ಕಾರ್ಯಕ್ರಮಕ್ಕೆ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್‌ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್‌ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ, ಸಮಿತಿಯ ಸರ್ವ ಸದಸ್ಯರು, ಶ್ರೀ ಮೂಕಾಂಬಿಕಾ ಚಾರಿಟೇಬಲ್‌ ಮಂಡಳ, ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯೆಯರು ಸಹಕರಿಸಿದರು. ಉತ್ಸವದುದ್ದಕ್ಕೂ  ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅತೀ ವೈಭವದಿಂದ ನಡೆಯಲಿದ್ದು, ತುಳು-ಕನ್ನಡಿಗರು, ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ತಿಳಿಸಲಾಯಿತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಮಂದಿರದ 15ನೇ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 10ರಂದು ಮುಂಜಾನೆ 6ರಿಂದ ಮಹಾಸಂಪ್ರೋಕ್ಷಣೆ, ಚಂಡಿಯಾ ಯಾಗ, ಮಹಾಪೂಜೆ, ಮಹಾಮಂತ್ರಾಕ್ಷತೆ, ಅನ್ನದಾನ ನಡೆಯಲಿದೆ.  ಸಂಜೆ 5ರಿಂದ ದೇವಾಲಯದ ಸದಸ್ಯರು, ತುಳುಕೂಟ ಐರೋಲಿ, ಚಿಣ್ಣರ ಬಿಂಬ, ರಂಗಭೂಮಿ ಫೈನ್‌ಆರ್ಟ್ಸ್ನ ಸದಸ್ಯರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರುಗಳನ್ನು ಸಮ್ಮಾನಿಸಲಾಗುವುದು. ರಾತ್ರಿ 8ರಿಂದ ದೆಪ್ಪುಣಿಗುತ್ತು ಚಂದ್ರಹಾಸ್‌ ಶೆಟ್ಟಿ ಅವರ ನಿರ್ದೇಶನದಲ್ಲಿ ಕಿರು ತುಳು ನಾಟಕ, ರಾತ್ರಿ 9 ರಿಂದ ಅನ್ನಪ್ರಸಾದ, ರಾತ್ರಿ 10ರಿಂದ ದೆಪ್ಪುಣಿಗುತ್ತು ಕುಟುಂಬಸ್ಥರ ಸೇವಾ ರೂಪದಲ್ಲಿ ಶ್ರೀ ಗೀತಾಂಬಿಕಾ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದ ರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತೆ¾ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ  ವಿನಂತಿಸಲಾಯಿತು.

ಚಿತ್ರ-ವರದಿ: ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.