ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ:ನವರಾತ್ರಿ ಉತ್ಸವಕ್ಕೆ ಚಾಲನೆ

Team Udayavani, Sep 22, 2017, 12:39 PM IST

ನವಿಮುಂಬಯಿ: ಘನ್ಸೋಲಿಯ ಕಾರಣಿಕ ಕ್ಷೇತ್ರವಾಗಿರುವ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ 45ನೇ ನವರಾತ್ರಿ ಮಹೋತ್ಸವವು ಸೆ. 30ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಲಿದ್ದು,  ಗುರುವಾರ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಚಾಲನೆ ನೀಡಲಾಯಿತು.

ಬೆಳಗ್ಗೆ 8.30ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ ಹೋಮ, ಪೂರ್ವಾಹ್ನ 10ರಿಂದ ಹೋಮದ ಪೂಜೆ ಪೂರ್ಣಾಹುತಿ, ಶ್ರೀ ದೇವಿಗೆ ಕಲಶಾಭಿಷೇಕ, ಅಲಂಕಾರ, ಮಧ್ಯಾಹ್ನ 12ರಿಂದ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.  ಸಂಜೆ 5 ರಿಂದ ಭರತನಾಟ್ಯ ಕಾರ್ಯಕ್ರಮ, ಸಂಜೆ 6ರಿಂದ ಶ್ರೀ ಮಣಿಕಂಠ ಭಕ್ತವೃಂದ ನೆರೂಲ್‌ ಅವರಿಂದ ಭಜನೆ, ಮಹಾಪೂಜೆ, ಸರ್ವಸೇವಾ ಪೂಜಾ ಆರಂಭ, ಭಜನೆ ಮಂಗಳ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು. ದೇವಾಲಯದ ತಂತ್ರಿಗಳಾದ ವಿದ್ವಾನ್‌ ರಾಮಚಂದ್ರ ಬಾಯಾರ್‌ ಮತ್ತು ಪ್ರಧಾನ ಅರ್ಚಕ ಗುರುಪ್ರಸಾದ್‌ ವಿ. ಭಟ್‌ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು.

ಸೆ. 30ರವರೆಗೆ ಪ್ರತೀ ದಿನ ಬೆಳಗ್ಗೆ ಉಷಾಕಾಲ ಪೂಜೆ, ನಿತ್ಯ ಮಹಾಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ವಿವಿಧ ಮಂಡಳಿಗಳಿಂದ ಭಜನೆ, ಭಕ್ತಿ ಸಂಗೀತ, ಭಕ್ತಿ ಪ್ರವಚನ, ಸಂಜೆ 5ರಿಂದ ಭರತನಾಟ್ಯ, ಕಥಕ್‌ ನೃತ್ಯ, ಭಜನ ಕಾರ್ಯಕ್ರಮ, ರಾತ್ರಿ 8.30 ರಿಂದ ಮಹಾಪೂಜೆ, ರಂಗಪೂಜೆ, ಭಕ್ತಾದಿಗಳ ಸೇವಾ ಪೂಜೆ, ಭಜನೆ, ಮಂಗಳಾರತಿ, ತೀರ್ಥ ಪ್ರಸಾದ, ಅನ್ನಪ್ರಸಾದ ನಡೆಯಲಿದೆ.

ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉಪಾಧ್ಯಕ್ಷರಾದ ಜಗದೀಶ್‌ ಶೆಟ್ಟಿ ನಂದಿಕೂರು, ಕೆ. ಎಂ. ಶೆಟ್ಟಿ, ಗೌರವ ಕಾರ್ಯದರ್ಶಿ ಸುರೇಶ್‌ ಎಸ್‌. ಕೋಟ್ಯಾನ್‌, ಜತೆ ಕಾರ್ಯದರ್ಶಿ ಭಾಸ್ಕರ ಎಂ. ಶೆಟ್ಟಿ, ಗೌರವ ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ ದೆಪ್ಪುಣಿಗುತ್ತು, ಸದಸ್ಯರಾದ ರಾಘು ಆರ್‌. ಕೋಟ್ಯಾನ್‌, ಕುಟ್ಟಿ ಎ. ಕುಂದರ್‌, ಸುಧಾಕರ ಸಿ. ಪೂಜಾರಿ, ಶಂಕರ ಮೊಲಿ, ವಿಶ್ವನಾಥ ಎಸ್‌. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಶ್ರೀಧರ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ ಶೆಟ್ಟಿ ಪಡುಬಿದ್ರೆ, ಹರೀಶ್‌ ಶೆಟ್ಟಿ ಕುರ್ಕಾಲ್‌, ಹರೀಶ್‌ ಶೆಟ್ಟಿ ನಲ್ಲೂರು, ಶಕುಂತಳಾ ಎಸ್‌. ಶೆಟ್ಟಿ ಹಾಗೂ ಮೂಕಾಂಬಿಕಾ ಚಾರಿಟೇಬಲ್‌ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಗಳು, ಮಹಿಳಾ ವಿಭಾಗದವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.

ವಿಶೇಷ ಕಾರ್ಯಕ್ರಮವಾಗಿ ಸೆ. 24ರಂದು ಬೆಳಗ್ಗೆ ಮಹಾಗಣಪತಿ ದೇವರಿಗೆ ಪಂಚಾಮೃತ ಅಭಿಷೇಕ, ತ್ರಿನಾಳಿಕೇರ ಮಹಾ ಗಣಪತಿ ಹೋಮ, ಸೆ. 25ರಂದು ಬೆಳಗ್ಗೆ ಚಂಡಿಕಾಯಾಗ, ನಾಗದೇವರಿಗೆ ಪಂಚಾಮೃತ ಅಭಿಷೇಕ, ನಾಗ ತನು ತಂಬಿಲ ಸೇವೆ, ಸೆ. 29ರಂದು ಬೆಳಗ್ಗೆ ದುರ್ಗಾ ಹೋಮ, ದೇವಿಗೆ ಕಲಶಾಭಿಷೇಕ, ಸಾರ್ವಜನಿಕ ಅನ್ನಸಂತರ್ಪಣೆ, ಸೆ. 30ರಂದು ಬೆಳಗ್ಗೆ ಅಕ್ಷರಭ್ಯಾಸ, ವಾಹನ ಪೂಜೆ, ಸಂಜೆ ಲಕ್ಷ್ಮೀ ಸಹಿತ ಸತ್ಯನಾರಾಯಣ ಮಹಾಪೂಜೆ, ರಾತ್ರಿ ದೇವಿಗೆ ವಿಶೇಷ ರಂಗಪೂಜೆ, ಸಪ್ತಶತಿ ಪುಸ್ತಕದ ಮೆರವಣಿಗೆ ಜರಗಲಿದೆ.  

ನವರಾತ್ರಿ ಸಮಯ ಪೂರ್ವಾಹ್ನ 10.30ರಿಂದ ಮಧ್ಯಾಹ್ನ 12ರವರೆಗೆ ಶ್ರೀದೇವಿಗೆ ವಿಶೇಷ ಅಷ್ಟೋತ್ತರ ಅರ್ಚನೆ,  ದೇವಿ ಸಹಸ್ರ ನಾಮಾರ್ಚನೆ ನಡೆಯಲಿದ್ದು, ಸೇವಾದಾರರು ಮಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಮಂದಿರದಲ್ಲಿ ರಂಗಪೂಜೆ, ದುರ್ಗಾನಮಸ್ಕಾರ, ಹೂವಿನ ಪೂಜೆ, ಸಹಸ್ರನಾಮಾರ್ಚನೆ, ಪಂಚಾಮೃತ ಅಭಿಷೇಕ, ದುರ್ಗಾ ಹೋಮ, ಚಂಡಿಕಾಯಾಗ, ಸರ್ವಸೇವೆ, ತೀರ್ಥ ಸ್ನಾನ, ಕ್ಷೀರಪಾಯಸ, ಅಷ್ಟೋತ್ತರ, ಕುಂಕುಮಾರ್ಚನೆ, ಲಕ್ಷ್ಮೀ ಫಲ, ಶ್ರೀ ಮಹಾ
ಗಣಪತಿ ಹೋಮ, ಪಂಚಾಮೃತ ಅಭಿಷೇಕ, ನಾಗದೇವರಿಗೆ ತಂಬಿಲ, ಆಶ್ಲೇಷಾ ಬಲಿ, ವಾಹನ
ಪೂಜೆ ಇತ್ಯಾದಿ ಸೇವೆಗಳು ಲಭ್ಯವಿದ್ದು, ಭಕ್ತಾದಿಗಳು ಇದರ ಸದುಪಯೋಗವನ್ನು ಪಡೆದು
ಕೊಳ್ಳಬಹುದು. ಅ. 1ರಂದು ಸಂಜೆ 5ರಿಂದ ಮಹಾರಾಷ್ಟ್ರ ಹೊಟೇಲ್‌ ಫೇಡರೇಶನ್‌ ಅಧ್ಯಕ್ಷ ಜಗನ್ನಾಥ್‌ ಕೆ. ಶೆಟ್ಟಿ ಅವರ ಸಹಾಯಾರ್ಥ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಕಲಾವಿದ
ರಿಂದ ಕೋಟಿ-ಚೆನ್ನಯ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಕೊನೆಯಲ್ಲಿ ಅನ್ನದಾನ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...

  • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

  • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....