ದಶಮಾನೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ


Team Udayavani, Sep 30, 2019, 5:18 PM IST

mumbai-tdy-1

ಮುಂಬಯಿ, ಸೆ. 29: ಬಂಟ ಸಮಾಜದ ಪ್ರತಿಷ್ಠಿತ ಮೀರಾ-ಡಹಾಣು ಬಂಟ್ಸ್‌ ಇದರ ದಶಮಾನೋತ್ಸವ ಸಮಾರಂಭವು ಸೆ. 28ರಂದು ಸಂಜೆ ಭಾಯಂದರ್‌ ಪೂರ್ವದ ಇಂದ್ರಲೋಕ್‌ ಫೇಸ್‌ 3ರ ಸಮೀಪದ ಪ್ರಮೋದ್‌ ಮಹಾಜನ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.

ಮೀರಾ-ಡಹಾಣು ಬಂಟ್ಸ್‌ನ ಗೌರವ ಅಧ್ಯಕ್ಷರಾದ ಡಾ| ವಿರಾರ್‌ ಶಂಕರ್‌ ಬಿ. ಶೆಟ್ಟಿ, ಅಧ್ಯಕ್ಷರಾದ ಅರವಿಂದ ಆನಂದ ಶೆಟ್ಟಿ, ಟ್ರಸ್ಟಿಗಳಾದ ಪ್ರಕಾಶ ಹೆಗ್ಡೆ, ಭುಜಂಗ ಶೆಟ್ಟಿ ಬೋಯಿಸರ್‌, ಸಂತೋಷ್‌ ಶೆಟ್ಟಿ ಡಹಾಣು, ಸುರೇಶ್‌ ಶೆಟ್ಟಿ ಗಂಧರ್ವ, ಸಂಚಾಲಕ ನಾಗರಾಜ ಶೆಟ್ಟಿ, ಉಪಾಧ್ಯಕ್ಷರಾದ ಸಂಪತ್‌ ಶೆಟ್ಟಿ ಪಂಜದಗುತ್ತು, ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ. ಶೆಟ್ಟಿ, ಕೋಶಾಧಿಕಾರಿ ರವಿ ರೈ ಬೊಯಿಸರ್‌, ಜತೆ ಕಾರ್ಯದರ್ಶಿ ವಸಂತ್‌ ಶೆಟ್ಟಿ, ಜತೆ ಕೋಶಾಧಿಕಾರಿ ಅರುಣ್‌ ಶೆಟ್ಟಿ ಪಣಿಯೂರು, ಸಲಹೆಗಾರರಾದ ಭಾಸ್ಕರ ಶೆಟ್ಟಿ ಬೊಯಿಸರ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶುಭಾ ಎಸ್‌. ಶೆಟ್ಟಿ, ಉಪ ಕಾರ್ಯಧ್ಯಕ್ಷೆ ಸುಜಾತಾ ಜೆ. ಶೆಟ್ಟಿ, ಕಾರ್ಯದರ್ಶಿ ಲತಾ ಎ. ಶೆಟ್ಟಿ, ಕೋಶಾಧಿಕಾರಿಗಳಾದ ಯಶೋದಾ ಬಿ. ಶೆಟ್ಟಿ ಮತ್ತು ಅಮಿತಾ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಮಂಜುಳಾ ಆರ್‌. ರೈ, ಸಲಹೆಗಾರದ ಸಹಾನಿ ವಿ. ಶೆಟ್ಟಿ, ವಿಶಾಲಾ ಆರ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ದೀಪಾ ಶೆಟ್ಟಿ, ಕಾರ್ಯಕ್ರಮ ವಿಭಾಗದ ಕಾರ್ಯಾಧ್ಯಕ್ಷ ಮಹಾಬಲ ಸಮಾನಿ, ಉಪ ಕಾರ್ಯಾಧ್ಯಕ್ಷ ಅರುಣ್‌ ಶೆಟ್ಟಿ ಸಾಂತೂರು, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ದಿವಾಕರ್‌ ಶೆಟ್ಟಿ ಪೊಸ್ರಾ, ಮೀರಾ-ಡಹಾಣು ಬಂಟ್ಸ್‌ ಇದರ ನಾಯ್ಗಾಂವ್ ವಿರಾರ್ಪ್ರಾ ದೇಶಿಕ ಸಮಿತಿ ಕಾರ್ಯಾಧ್ಯಕ್ಷ ಅಶೋಕ್‌ ಕೆ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಶಿ ಜಿ. ಶೆಟ್ಟಿ, ಮೀರಾ-ಡಹಾಣು ಬಂಟ್ಸ್‌ ಇದರ ಮೀರಾ- ಭಾಯಂದರ್‌ ಪ್ರಾದೇಶಿಕ ಕಾರ್ಯಾಧ್ಯಕ್ಷ ರಾಜೇಶ್‌ ಶೆಟ್ಟಿ ಕಾಪು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಿಯಾ ಶೆಟ್ಟಿ, ಮೀರಾ-ಡಹಾಣು ಬಂಟ್ಸ್‌ ಬೊಯಿಸರ್‌ ಪಾಲ್ಘರ್ ಸಮಿತಿಯ ಕಾರ್ಯಾಧ್ಯಕ್ಷ ವಿಜಯ ಶೆಟ್ಟಿ, ಮಹಿಳಾ ವಿಭಾಗದ ಪ್ರೇಮಾ ಬಿ. ಶೆಟ್ಟಿ, ಮೀರಾ-ಡಹಾಣು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರೋಶನ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ರೈ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಚೇತನ್‌ ಶೆಟ್ಟಿ ಹಾಗೂ ಮಹಿಳಾ ಸದಸ್ಯೆಯರು, ವಿವಿಧ ಸಮಿತಿಗಳ ಸರ್ವ ಸದಸ್ಯರು ಉಪಸ್ಥಿತರಿದ್ದು ದಶಮಾನೋತ್ಸವಕ್ಕೆ ಚಾಲನೆ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಾದೇಶಿಕ ಸಮಿತಿಗಳ ಸದಸ್ಯರಿಂದ ವಿವಿಧ ವಿನೋದಾವಳಿಗಳು. ವಿಸ್ಮಯ ವಿನಾಯಕ್‌ ಬಳಗದವರಿಂದ ಹಾಸ್ಯ, ವಿಜಯ ಶೆಟ್ಟಿ ಮೂಡುಬೆಳ್ಳೆ ಅವರಿಂದ ಸಂಗೀತ ರಸ ಮಂಜರಿ ಜರಗಿತು. ಸಮಾರಂಭದಲ್ಲಿ ಮೀರಾ-ಡಹಾಣು ಬಂಟ್ಸ್‌ ಸ್ಥಾಪಕ ಅಧ್ಯಕ್ಷ ಪ್ರಕಾಶ್‌ ಹೆಗ್ಡೆ ವಸಾಯಿ, ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಬೊಯಿಸರ್‌, ಸ್ಥಾಪಕ ಸದಸ್ಯರಾದ ಸಂತೋಷ್‌ ಶೆಟ್ಟಿ ಡಹಾಣು ಮತ್ತು ಸಂತೋಷ್‌ ರೈ ಬೆಳ್ಳಿಪಾಡಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ನಿತೇಶ್‌ ಶೆಟ್ಟಿ ಎಕ್ಕಾರ್‌ ನಿರ್ವಹಿಸಿದರು. ಕಾರ್ಯದರ್ಶಿ ಚಂದ್ರಶೇಖರ ವಿ. ಶೆಟ್ಟಿ ವಂದಿಸಿದರು. ಸದಸ್ಯ ಬಾಂಧವರು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

Untitled-1

ವಿದ್ಯಾರ್ಥಿಗಳಲ್ಲಿ ದೇಶದ ಅಭಿವೃದ್ಧಿಯ ಹೊಣೆಗಾರಿಕೆ ಇರಲಿ: ದಯಾನಂದ ಶೆಟ್ಟಿ

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯ: 49ನೇ ವಾರ್ಷಿಕ ನವರಾತ್ರೋತ್ಸವ ಸಂಪನ್ನ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

cracker

ಹೊರಬೀಳದ ಆದೇಶ, ಮುಗಿಯದ ಆತಂಕ

5kasapa

ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

4hdk

ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.