ಸೋಂಕು ಪೀಡಿತ ವಾರ್ಡ್‌ಗಳು ನಿವಾಸಿಗಳಿಗೆ ಹೋಮಿಯೋಪತಿ ಔಷಧಿ

Team Udayavani, May 13, 2020, 6:23 PM IST

ಸೋಂಕು ಪೀಡಿತ ವಾರ್ಡ್‌ಗಳು ನಿವಾಸಿಗಳಿಗೆ ಹೋಮಿಯೋಪತಿ ಔಷಧಿ

ಮುಂಬಯಿ,ಮೇ 12: ಧಾರಾವಿ, ಮಾಹಿಮ್‌ ಮತ್ತು ಜಿ-ನಾರ್ತ್‌ನಂತಹ ವಾರ್ಡ್‌ಗಳಲ್ಲಿ ಕೋವಿಡ್ ವೈರಸ್‌ ಅನ್ನು ನಿಭಾಯಿಸಲು ಹೋಮಿಯೋಪತಿ ಔಷಧಿಯನ್ನು ವಿತರಿಸಲು ಬಿಎಂಸಿಯ ಸಾರ್ವಜನಿಕ ಆರೋಗ್ಯ ಇಲಾಖೆ ಅನುಮತಿ ನೀಡಿದೆ.

ವರ್ಸೋವ, ಜುಹು ಮತ್ತು ಅಂಧೇರಿಗಳನ್ನು ಒಳಗೊಂಡಿರುವ ಕೆ-ವೆಸ್ಟ್‌ ವಾರ್ಡ್‌ನ ಕಾರ್ಯನಿರ್ವಾಹಕ ಆರೋಗ್ಯ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು ಈ ವಾರ್ಡ್‌ಗಳಲ್ಲಿರುವ 20 ಲಕ್ಷ ಜನರಿಗೆ ಖಾಸಗಿ ಸಮಿತಿಯ ಮೂಲಕ ಸಂಪರ್ಕತಡೆಯನ್ನು ಒಳಗೊಂಡಂತೆ ಉಚಿತವಾಗಿ ಔಷಧಿಯನ್ನು ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಖಾಸಗಿ ಸಮಿತಿಗೆ ಬರೆದ ಪತ್ರದಲ್ಲಿ, ಬಿಎಂಸಿಯ ಕಾರ್ಯನಿರ್ವಾಹಕ ಆರೋಗ್ಯ ಅಧಿಕಾರಿ ಪದ್ಮಜ ಕೇಸ್ಕರ್‌, ದೆಹಲಿಯ ಕೇಂದ್ರ ಆಯುಷ್‌ ಸಚಿವಾಲಯವು ತನ್ನ ಮಾರ್ಗಸೂಚಿಗಳಲ್ಲಿ ಆರ್ಸೆನಿಕಮ್‌ ಆಲ್ಬಮ್‌ 30 ಔಷಧವು ಕೋವಿಡ್ ವೈರಸ್‌ ಸಾಂಕ್ರಾಮಿಕ ರೋಗಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಉಪಯುಕ್ತವಾಗಿದೆ ಎಂದು ತಿಳಿಸಿದೆ.

ಔಷಧಿ ವಿತರಣೆಗೆ ಸಂಬಂಧಿಸಿದಂತೆ ನಾವು ಪ್ರಾಧಿಕಾರದಿಂದ ಅನುಮತಿ ಪಡೆದುಕೊಂಡಿದ್ದೇವೆ. ಸಮಿತಿಯು ಔಷಧಿಯನ್ನು ಲಭ್ಯವಾಗುವಂತೆ ಮಾಡಲಿದ್ದು ಅದರ ವಿತರಣೆಯನ್ನು ಸಕ್ರಿಯಗೊಳಿಸುತ್ತದೆ. ಔಷಧಿಯನ್ನು ಹೇಗೆ ಮತ್ತು ಯಾವಾಗ ಸೇವಿಸಬೇಕು ಎಂಬುದರ ಕುರಿತು ಬಿಎಂಸಿ ಜನರಿಗೆ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದ್ದಾರೆ.

ಈ ಪತ್ರವನ್ನು ಜಿ-ನಾರ್ತ್‌ ಮತ್ತು ಕೆ-ವೆಸ್ಟ್‌ ವಾರ್ಡ್‌ಗಳ ಸಹಾಯಕ ಆಯುಕ್ತರಿಗೆ ಸಮನ್ವಯಕ್ಕಾಗಿ ಕಳುಹಿಸಲಾಗಿದೆ. ಆಯುಷ್‌ ತನ್ನ ಸಲಹೆಯಲ್ಲಿ, ಆರ್ಸೆನಿಕಮ್‌ ಆಲ್ಬಮ್‌ 30 ಅನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಮೂರು ದಿನಗಳವರೆಗೆ ತೆಗೆದುಕೊಳ್ಳುವಂತೆ ಶಿಫಾರಸು ಮಾಡಿತ್ತು.ಆಯುಷ್‌ ಔಷಧಿ ಕೇವಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.