ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: L.V.ಅಮೀನ್ರಿಗೆ ಸಮ್ಮಾನ
Team Udayavani, Sep 12, 2017, 2:34 PM IST
ಮುಂಬಯಿ: ಕನ್ನಡ ಸಂಘ ಸಾಂತಾಕ್ರೂಜ್ ಇದರ ನೂತನ ಅಧ್ಯಕ್ಷರಾಗಿ ನಿರಂತರ ಏಳನೇ ಬಾರಿಗೆ ಪುನರಾಯ್ಕೆಗೊಂಡ ಉದ್ಯಮಿ, ಸಮಾಜ ಸೇವಕ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬಯಿ ಇದರ ಉಪಾಧ್ಯಕ್ಷರೂ ಆಗಿರುವ ಎಲ್. ವಿ. ಅಮೀನ್ ಅವರನ್ನು ಸೆ. 8ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸಾಂತಾಕ್ರೂಜ್ ಪೂರ್ವ ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ ಗೌರವಿಸಿ ಅಭಿನಂದಿಸಲಾಯಿತು.
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಶ್ರೀಕೃಷ್ಣ ಎ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಮಿತಿಯ ಅಧ್ಯಕ್ಷರಾದ ಧರ್ಮಪಾಲ ಯು. ದೇವಾಡಿಗ ಇವರ ಅಧ್ಯಕ್ಷತೆಯಲ್ಲಿ ಜರಗಿದ ಈ ಸರಳ ಸಮಾರಂಭದಲ್ಲಿ ಎಲ್. ವಿ. ಅಮೀನ್ ಅವರನ್ನು ಅಭಿನಂದಿಸಿ ಗೌರವಿಸಿ ಶುಭಹಾರೈಸಲಾಯಿತು.
ಸಮಿತಿಯ ಉಪಾಧ್ಯಕ್ಷರುಗಳಾದ ನಿತ್ಯಾನಂದ ಕೋಟ್ಯಾನ್, ಪಿ. ಧನಂಜಯ ಶೆಟ್ಟಿ, ಜೊತೆ ಕೋಶಾಧಿಕಾರಿಗಳಾದ ತುಳಸಿದಾಸ್ ಅಮೀನ್, ರವಿರಾಜ್ ಕಲ್ಯಾಣು³ರ್, ಗೌರವ ಕಾರ್ಯದರ್ಶಿ ತೋನ್ಸೆ ಸಂಜೀವ ಪೂಜಾರಿ, ಜೊತೆ ಕಾರ್ಯದರ್ಶಿ ಚಿತ್ರಾಪು ಕೆ. ಎಂ. ಕೋಟ್ಯಾನ್, ಸದಸ್ಯರುಗಳಾದ ಮಿನಿರಾಜ್ ಜೈನ್, ರವಿ ದೇವಾಡಿಗ, ಡಾ| ಪ್ರಭಾಕರ ಶೆಟ್ಟಿ ಬಿ., ಎಸ್. ಕೆ. ಶ್ರೀಯಾನ್, ಹ್ಯಾರಿ ಸಿಕ್ವೇರ, ರಾಮಚಂದ್ರ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಸಮಿತಿಯ ವತಿಯಿಂದ ಗೌರವವನ್ನು ಸ್ವೀಕರಿಸಿದ ಎಲ್. ವಿ. ಅಮೀನ್ ಅವರು ಎಲ್ಲರಿಗೂ ವಂದಿಸಿ ಕೃತಜ್ಞತೆ ಸಲ್ಲಿಸಿದರು. ಸಭಾ ಕಾರ್ಯಕ್ರಮವನ್ನು ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಬೆಳ್ಚಡ ಅವರು ನಿರ್ವಹಿಸಿ , ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ